ಬಿಬಿಎಂಪಿ ಕಾಮಗಾರಿ ಅಕ್ರಮ : ವಿಚಾರಣಾ ಆಯೋಗದ ವರದಿಗೆ ಸಂಪುಟ ಅನುಮೋದನೆ

Kannadaprabha News   | Kannada Prabha
Published : Sep 05, 2025, 05:31 AM IST
BBMP latest news today photo

ಸಾರಾಂಶ

ಬಿಬಿಎಂಪಿ ಕಾಮಗಾರಿಗಳ ಅನುಷ್ಠಾನದಲ್ಲಾಗಿರುವ ಅಕ್ರಮಗಳ ಪತ್ತೆಗೆ ರಚಿಸಲಾಗಿದ್ದ ನ್ಯಾಯಮೂರ್ತಿ ಎಚ್‌.ಎನ್‌.ನಾಗಮೋಹನ್‌ದಾಸ್ ವಿಚಾರಣಾ ಆಯೋಗದ ವರದಿಯನ್ನು ಗುರುವಾರ ಒಪ್ಪಿರುವ ಸಚಿವ ಸಂಪುಟ, ವರದಿಯಲ್ಲಿನ ಶಿಫಾರಸುಗಳನ್ನು ಆಧರಿಸಿ ಯಾವ ರೀತಿಯ ಕ್ರಮ ಕೈಗೊಳ್ಳಬಹುದು ಎಂಬ ಬಗ್ಗೆ ಚರ್ಚಿಸಲು ನಿರ್ಧರಿಸಿದೆ.

ಬೆಂಗಳೂರು : ಬಿಬಿಎಂಪಿ ಕಾಮಗಾರಿಗಳ ಅನುಷ್ಠಾನದಲ್ಲಾಗಿರುವ ಅಕ್ರಮಗಳ ಪತ್ತೆಗೆ ರಚಿಸಲಾಗಿದ್ದ ನ್ಯಾಯಮೂರ್ತಿ ಎಚ್‌.ಎನ್‌.ನಾಗಮೋಹನ್‌ದಾಸ್ ವಿಚಾರಣಾ ಆಯೋಗದ ವರದಿಯನ್ನು ಗುರುವಾರ ಒಪ್ಪಿರುವ ಸಚಿವ ಸಂಪುಟ, ವರದಿಯಲ್ಲಿನ ಶಿಫಾರಸುಗಳನ್ನು ಆಧರಿಸಿ ಯಾವ ರೀತಿಯ ಕ್ರಮ ಕೈಗೊಳ್ಳಬಹುದು ಎಂಬ ಬಗ್ಗೆ ಮುಂದಿನ ಸಚಿವ ಸಂಪುಟದಲ್ಲಿ ಚರ್ಚಿಸಲು ನಿರ್ಧರಿಸಿದೆ.

ಬಿಬಿಎಂಪಿ ವ್ಯಾಪ್ತಿಯಲ್ಲಿ ಘನತ್ಯಾಜ್ಯ, ಬೃಹತ್‌ ನೀರುಗಾಲುವೆ, ನಗರ ಯೋಜನೆ, ಕೆರೆ, ಸ್ಮಾರ್ಟ್‌ ಸಿಟಿ, ವಾರ್ಟ್‌ ಮಟ್ಟದ ಕಾಮಗಾರಿಗಳು ಸೇರಿ ವಿವಿಧ ಕಾಮಗಾರಿಗಳಲ್ಲಿ ಅಕ್ರಮ ನಡೆದಿರುವ ಪತ್ತೆಗಾಗಿ ಸರ್ಕಾರ ನ್ಯಾ.ಎಚ್‌.ಎನ್‌.ನಾಗಮೋಹನ್‌ದಾಸ್ ವಿಚಾರಣಾ ಆಯೋಗ ನಡೆಸಿತ್ತು. ಆಯೋಗವು 3,049 ಕೋಟಿ ರು. ಮೊತ್ತದ 761 ಕಾಮಗಾರಿಗಳ ಅನುಷ್ಠಾನ ಪರಿಶೀಲಿಸಿದೆ. ಈ ಪರಿಶೀಲನೆಯಲ್ಲಿ ಹಲವು ಕಾಮಗಾರಿಗಳು ಸರ್ಕಾರದಿಂದ ಆಡಳಿತಾತ್ಮಕ ಅನುಮೋದನೆ ದೊರೆಯದೆ ಅನುಷ್ಠಾನಗೊಳಿಸುವುದು, ಕಾಮಗಾರಿಯಲ್ಲಿ ಗುಣಮಟ್ಟ ಕಾಯ್ದುಕೊಳ್ಳದಿರುವುದು, ಟೆಂಡರ್‌ ಪ್ರಕ್ರಿಯೆ ಪಾಲಿಸದಿರುವುದು ಸೇರಿ ಹಲವು ಅಂಶಗಳನ್ನು ಪತ್ತೆ ಮಾಡಿದೆ.

ಈ ಎಲ್ಲ ಲೋಪಗಳು, ಅಕ್ರಮದಲ್ಲಿ ಅಧಿಕಾರಿ-ಗುತ್ತಿಗೆದಾರರು ಕೈ ಜೋಡಿಸಿರುವುದನ್ನು ವರದಿಯಲ್ಲಿ ಉಲ್ಲೇಖಿಸಲಾಗಿದೆ. ಹೀಗಾಗಿ ಈ ಅಕ್ರಮದಲ್ಲಿ ಪಾಲ್ಗೊಂಡವರ ವಿರುದ್ಧ ಸಿವಿಲ್‌ ಮತ್ತು ಕ್ರಿಮಿನಲ್‌ ಪ್ರಕರಣ ದಾಖಲಿಸಬೇಕು. ಒಂದು ವೇಳೆ ಅಧಿಕಾರಿಗಳು ನಿವೃತ್ತರಾಗಿದ್ದರೆ ಅಥವಾ ಬೇರೆ ಇಲಾಖೆಗೆ ವರ್ಗಾವಣೆಗೊಂಡಿದ್ದರೂ ಅವರ ವಿರುದ್ಧ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಸ್ತ್ರಿರೋಗ ತಜ್ಞೆ, ಪುತ್ರನ ದುರಂತ ಅಂತ್ಯ, ರಾತ್ರಿ ಜಗಳವಾಡಿದ ಇಬ್ಬರು ಬೆಳಗ್ಗೆ ಶವವಾಗಿ ಪತ್ತೆ
ಶ್ರೀರಂಗಪಟ್ಟಣ ಮಸೀದಿ ಕೆಡವುತ್ತೇವೆಂದರೆ? ನಾವು ಕೈಗೆ ಬಳೆ ತೊಟ್ಟು ಕೂತಿಲ್ಲ-ಅಬ್ದುಲ್ ರಜಾಕ್!