ಸ್ಥಳೀಯ ಸಂಸ್ಥೆ ಮೀಸಲು ವರದಿಗೆ ಸಂಪುಟ ಅಸ್ತು: ಸಚಿವ ಮಾಧುಸ್ವಾಮಿ

By Kannadaprabha NewsFirst Published Aug 13, 2022, 6:58 AM IST
Highlights

ಬಿಬಿಎಂಪಿ, ಪಂಚಾಯ್ತಿ ಎಲೆಕ್ಷನ್‌ಗೆ ಹಾದಿ ಸುಗಮ?: ನ್ಯಾ. ಭಕ್ತವತ್ಸಲ ಸಮಿತಿ ಶಿಫಾರಸಿಗೆ ಒಪ್ಪಿಗೆ
 

ಬೆಂಗಳೂರು(ಆ.13):  ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಹಿಂದುಳಿದ ವರ್ಗಗಳಿಗೆ ಮೀಸಲಾತಿ ಕಲ್ಪಿಸಿ ಚುನಾವಣೆ ನಡೆಸಲು ತೀರ್ಮಾನಿಸಿರುವ ರಾಜ್ಯ ಸಚಿವ ಸಂಪುಟ, ನ್ಯಾ.ಕೆ.ಭಕ್ತವತ್ಸಲ ಸಮಿತಿಯ ಶಿಫಾರಸಿಗೆ ಒಪ್ಪಿಗೆ ನೀಡಿ ಮಹತ್ವದ ತೀರ್ಮಾನ ಕೈಗೊಂಡಿದೆ. ಹೀಗಾಗಿ, ನೆನೆಗುದಿಗೆ ಬಿದ್ದಿರುವ ಬಿಬಿಎಂಪಿ, ಜಿಲ್ಲಾ ಮತ್ತು ತಾಲೂಕು ಪಂಚಾಯ್ತಿ ಚುನಾವಣೆಗಳು ನಡೆಯುವುದಕ್ಕೆ ಎದುರಾಗಿದ್ದ ಅಡಚಣೆ ನಿವಾರಣೆ ಆಗುವ ನಿರೀಕ್ಷೆಯಿದೆ. ಶುಕ್ರವಾರ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ.

ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾನೂನು ಮತ್ತು ಸಂಸದೀಯ ಸಚಿವ ಜೆ.ಸಿ.ಮಾಧುಸ್ವಾಮಿ, ಹಿಂದುಳಿದ ವರ್ಗಗಳಿಗೆ ಮೀಸಲಾತಿ ಕಲ್ಪಿಸಿ ಚುನಾವಣೆ ನಡೆಸಲು ಸರ್ಕಾರ ಈಗಾಗಲೇ ತೀರ್ಮಾನಿಸಿದೆ. ಮೀಸಲಾತಿಗೆ ಸಂಬಂಧಿಸಿದಂತೆ ಭಕ್ತವತ್ಸಲ ಸಮಿತಿಯು ಸುಪ್ರೀಂಕೋರ್ಗೆಟ್‌ಗೆ ವರದಿ ಸಲ್ಲಿಕೆ ಮಾಡಿದೆ. ವರದಿಯ ಶಿಫಾರಸುಗಳಿಗೆ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಶೇ.50ರಷ್ಟುಮೀರದಂತೆಯೇ ಮೀಸಲಾತಿಯಲ್ಲಿ ಚುನಾವಣೆ ನಡೆಸಲಾಗುವುದು. ಎಸ್‌ಸಿ/ಎಸ್‌ಟಿ ಮತ್ತು ಒಬಿಸಿಗೆ ಮೀಸಲು ನೀಡಲಾಗುತ್ತದೆ ಎಂದು ಹೇಳಿದರು.

ಕೆಜೆಪಿ ಕಟ್ಟಿದ್ದಾಗ ಹಾವೇರಿಯಲ್ಲಿ ಸಿದ್ದರಾಮೋತ್ಸವಕ್ಕಿಂತ ಜಾಸ್ತಿ ಜನ ಸೇರಿದ್ದರು: ಸಚಿವ ಮಾಧುಸ್ವಾಮಿ

ಪ್ರಸಕ್ತ ಸಾಲಿನಲ್ಲಿ ಈ ರೀತಿ ಚುನಾವಣೆ ನಡೆಸಲಾಗುವುದು. 2027-28ನೇ ಸಾಲಿನ ಚುನಾವಣೆ ವೇಳೆಗೆ ಸುಪ್ರೀಂಕೋರ್ಚ್‌ ಕೇಳಿರುವ ಎಲ್ಲಾ ದತ್ತಾಂಶಗಳನ್ನು ಇಟ್ಟುಕೊಂಡು ಹಿಂದುಳಿದ ವರ್ಗಗಳ ಮೀಸಲು ನಿಗದಿಪಡಿಸಲಾಗುವುದು. ನಗರ ಸ್ಥಳೀಯ ಸಂಸ್ಥೆಗಳಲ್ಲಿ ಸೂಕ್ತ ರಾಜಕೀಯ ಪ್ರಾತಿನಿಧ್ಯ ಕಲ್ಪಿಸಲು ರಚಿಸಲು ನ್ಯಾ.ಡಾ.ಭಕ್ತವತ್ಸಲ ನೇತೃತ್ವದ ಆಯೋಗವು ಸರ್ಕಾರಕ್ಕೆ ಸಲ್ಲಿಸಿರುವ ವರದಿಯಲ್ಲಿನ ಶಿಫಾರಸ್ಸು ಜಾರಿಗೊಳಿಸಲಾಗುವುದು. ಇದರೊಂದಿಗೆ ಮಹಾನಗರ ಪಾಲಿಕೆಗಳಲ್ಲಿ ಮೇಯರ್‌, ಉಪಮೇಯರ್‌ ಸ್ಥಾನಗಳಿಗೆ ಹಿಂದುಳಿದ ವರ್ಗದವರಿಗೆ ಮೀಸಲಾತಿ ಕಲ್ಪಿಸಲಾಗುವುದು ಎಂದರು.

ಸಮಿತಿಯ ಶಿಫಾರಸುಗಳನ್ನು ಒಪ್ಪಿಕೊಂಡಿರುವ ಹಿನ್ನೆಲೆಯಲ್ಲಿ ಅನುಷ್ಠಾನಗೊಳಿಸಲು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆ ಹಾಗೂ ನಗರಾಭಿವೃದ್ಧಿ ಇಲಾಖೆಗಳು ಮುಂದಿನ ಅಗತ್ಯ ಕ್ರಮ ಕೈಗೊಳ್ಳಲಿವೆ. ಭಕ್ತವತ್ಸಲ ಸಮಿತಿ ನೀಡಿರುವ ವರದಿಯ ಪ್ರತಿಯನ್ನು ನಗರಾಭಿವೃದ್ಧಿ ಮತ್ತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಗೆ ಕಳುಹಿಸಿಕೊಡಲಾಗಿದೆ ಎಂದರು.

ಎಸ್ಸಿ, ಎಸ್ಟಿ, ಒಬಿಸಿ ಜನರಿಗೆ ಮೀಸಲು

ಮೀಸಲಾತಿಗೆ ಸಂಬಂಧಿಸಿದಂತೆ ಭಕ್ತವತ್ಸಲ ಸಮಿತಿಯು ಸುಪ್ರೀಂಕೋರ್ಚ್‌ಗೆ ವರದಿ ಸಲ್ಲಿಕೆ ಮಾಡಿದೆ. ವರದಿಯ ಶಿಫಾರಸುಗಳಿಗೆ ಸಂಪುಟ ಒಪ್ಪಿಗೆ ನೀಡಿದೆ. ಶೇ.50ರಷ್ಟು ಮೀರದಂತೆಯೇ ಮೀಸಲಾತಿಯಲ್ಲಿ ಚುನಾವಣೆ ನಡೆಸಲಾಗುವುದು. ಎಸ್‌ಸಿ/ಎಸ್‌ಟಿ ಮತ್ತು ಒಬಿಸಿಗೆ ಮೀಸಲು ನೀಡಲಾಗುತ್ತದೆ ಅಂತ ಕಾನೂನು ಸಚಿವ ಜೆ.ಸಿ. ಮಾಧುಸ್ವಾಮಿ ತಿಳಿಸಿದ್ದಾರೆ.  
 

click me!