ಇವರಿಗಿಲ್ಲ ಬರ: ಶಾಸಕರು, ಸಚಿವರ ವೇತನ ಏರಿಕೆಗೆ ಸಂಪುಟ ಒಪ್ಪಿಗೆ!

Published : Oct 20, 2023, 05:33 AM IST
ಇವರಿಗಿಲ್ಲ ಬರ: ಶಾಸಕರು, ಸಚಿವರ ವೇತನ ಏರಿಕೆಗೆ ಸಂಪುಟ ಒಪ್ಪಿಗೆ!

ಸಾರಾಂಶ

ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರವು 2022ರಲ್ಲಿ ಶಾಸಕರು, ಸಚಿವರ ವೇತನ ಹಾಗೂ ಭತ್ಯೆಯನ್ನು ಹೆಚ್ಚಳ ಮಾಡಿದ್ದ ನಿರ್ಣಯಕ್ಕೆ ಘಟನೋತ್ತರ ಒಪ್ಪಿಗೆ ನೀಡಿ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ.

ಬೆಂಗಳೂರು (ಅ.20): ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರವು 2022ರಲ್ಲಿ ಶಾಸಕರು, ಸಚಿವರ ವೇತನ ಹಾಗೂ ಭತ್ಯೆಯನ್ನು ಹೆಚ್ಚಳ ಮಾಡಿದ್ದ ನಿರ್ಣಯಕ್ಕೆ ಘಟನೋತ್ತರ ಒಪ್ಪಿಗೆ ನೀಡಿ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ.

2022ರ ಫೆಬ್ರುವರಿಯಲ್ಲಿ ಕಾಯ್ದೆಗೆ ತಿದ್ದುಪಡಿ ತಂದು ವೇತನ, ಭತ್ಯೆ ಪರಿಷ್ಕರಣೆ ಮಾಡಲಾಗಿತ್ತು. ಈವರೆಗೆ ಪರಿಷ್ಕೃತ ವೇತನವನ್ನು ಶಾಸಕರು, ಸಚಿವರು ಪಡೆಯುತ್ತಿದ್ದರು. ಆದರೆ ಇದಕ್ಕೆ ಸಚಿವ ಸಂಪುಟ ಒಪ್ಪಿಗೆ ಪಡೆಯದ ಹಿನ್ನೆಲೆಯಲ್ಲಿ ಘಟನೋತ್ತರ ಒಪ್ಪಿಗೆ ನೀಡಿರುವುದಾಗಿ ಸಚಿವ ಎಚ್.ಕೆ. ಪಾಟೀಲ್‌ ತಿಳಿಸಿದ್ದಾರೆ. 

ಮಲ ತ್ಯಾಜ್ಯ ಸಂಸ್ಕರಣೆ ಘಟಕ: ಎನ್ ಜಿಟಿ ನಿರ್ದೇಶನದಂತೆ ನಗರಾಭಿವೃದ್ಧಿ ಇಲಾಖೆಯು ಪರಿಸರ ಪರಿಹಾರ ನಿಧಿಯ ಅಡಿ 50 ಸಾವಿರಕ್ಕಿಂತ ಹೆಚ್ಚು ಜನಸಂಖ್ಯೆ ಇರುವ 110 ನಗರಗಳಲ್ಲಿ 400.24 ಕೋಟಿ ರು. ವೆಚ್ಚದಲ್ಲಿ ಮಲ ತ್ಯಾಜ್ಯ ಸಂಸ್ಕರಣಾ ಘಟಕ ಸ್ಥಾಪಿಸಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ.

ಬೆಳಗಾವಿ ಕಲಾಪ ದಿನಾಂಕ ನಿಗದಿ ಅಧಿಕಾರ ಸಿಎಂಗೆ

ಬೆಳಗಾವಿಯಲ್ಲಿ 2 ವಾರಗಳ ನಡೆ ಯಲಿರುವ ಚಳಿಗಾಲದ ಅಧಿವೇ ಶನ ಕರೆಯುವ ಸಂಬಂಧ ಸಚಿವ ಸಂಪುಟ ಸಭೆಯಲ್ಲಿ ಚರ್ಚೆಯಾ ಗಿದ್ದು, ದಿನಾಂಕ ನಿಗದಿ ಮತ್ತಿತರ ಅಧಿಕಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನೀಡಿ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಕಾಂಗ್ರೆಸ್‌ ಸರ್ಕಾರ ಬಿದ್ದರೂ ಆಶ್ಚರ್ಯವಿಲ್ಲ: ಬಿ.ಸಿ.ಪಾಟೀಲ್

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಸಿನಿಮಾ ರಿಲೀಸ್‌ಗೂ ಮುನ್ನವೇ ಜೈಲಲ್ಲಿ ಡೆವಿಲ್ ರೂಪ ತಾಳಿದ ದರ್ಶನ್; ಸಹ ಕೈದಿಗಳಿಗೆ ಕಾಲಿನಿಂದ ಒದ್ದು ದುರಹಂಕಾರ!
CM Siddaramaiahಗೆ ಈಶ್ವರಪ್ಪ ವಾರ್ನಿಂಗ್: ಭಗವದ್ಗೀತೆ ಓದಲಿ, ತಾಕತ್ತಿದ್ದರೆ ಕುರಾನ್ ಬಗ್ಗೆ ಮಾತನಾಲಿ