ಡಿಸೆಂಬರ್ 10ರ ಮೊದಲೇ ಸಚಿವ ಸಂಪುಟ ವಿಸ್ತರಣೆ!

By Web DeskFirst Published Nov 29, 2018, 4:52 PM IST
Highlights

ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಸಚಿವ ಸಂಪುಟ ವಿಸ್ತರಣೆಗೆ ಸಂಬಂಧಿಸಿದಂತೆ ಸ್ಪಷ್ಟೀಕರಣ ನೀಡಿದ್ದು, ಚಳಿಗಾಲದ ಅಧಿವೇಶನಕ್ಕೂ ಮೊದಲು ಸಂಪುಟ ವಿಸ್ತರಣೆ ಆಗುವುದು ಖಚಿತ ಎಂದಿದ್ದಾರೆ.

ಬೆಂಗಳೂರು[ನ.29]: ಸಂಪುಟ ವಿಸ್ತರಣೆಗೆ ಸಂಬಂಧಿಸಿದಂತೆ ದಿನೆಶ್ ಗುಂಡೂರಾವ್ ಸ್ವಪ್ಟನೆ ನೀಡಿದ್ದು, ಅಧಿವೇಶನಕ್ಕೂ ಮೊದಲು ಸಂಪುಟ ವಿಸ್ತರಣೆ ಆಗುವುದು ಖಚಿತ ಎಂದಿದ್ದಾರೆ.

'ನನ್ನ ಹೇಳಿಕೆಗೆ ಈಗಲೂ ನಾನು ಬದ್ಧ. ಬೆಳಗಾವಿ ಅಧಿವೇಶನದ ಒಳಗೆ ಸಂಪುಟ ವಿಸ್ತರಣೆ ಮಾಡ್ತೇವೆ. ಅಷ್ಟರೊಳಗೆ ಸಂಪುಟ ವಿಸ್ತರಣೆ ಆಗುತ್ತೆ. ಯಾರು ಸಚಿವರಾಗಬೇಕು ಎನ್ನುವುದು ಕಾಂಗ್ರೆಸ್ ಹೈಕಮಾಂಡ್ ಗೆ ಬಿಟ್ಟ ವಿಚಾರ. ಸಮನ್ವಯ ಸಮಿತಿಯಗೆ ಸಚಿವರು ಯಾರಾಗಬೇಕು ಅನ್ನೋದು ಚರ್ಚೆ ಆಗಲ್ಲ. ಸಂಪುಟ ವಿಸ್ತರಣೆ ದಿನಾಂಕ ನಿಗದಿ ಬಗ್ಗೆ ಸಮನ್ವಯ ಸಮಿತಿ ಸಭೆಯಲ್ಲಿ ಚರ್ಚೆ ಆಗಬಹುದು' ಎಂದು ತಮ್ಮ ಹೇಳಿಕೆಗೆ ಕೆಪಿಸಿಸಿ ಅಧ್ಯಕ್ಷ ದಿನೆಶ್ ಗುಂಡೂರಾವ್ ಸ್ಪಷ್ಟನೆ ನೀಡಿದ್ದಾರೆ.

ಡಿಸೆಂಬರ್ 10 ರಿಂದ ಬೆಳಗಾವಿ ಅಧಿವೇಶನ ಆರಂಭವಾಗಲಿದ್ದು, ಮೈತ್ರಿ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ಸಂಪುಟ ವಿಸ್ತರಣೆ ಮುಂದೂಡುತ್ತಾ ಬಂದಿದ್ದಾರೆ. ಕೆಲ ದಿನಗಳ ಹಿಂದಷ್ಟೇ ಸಪುಟ ವಿಸ್ತರಣೆ ಆಗುವ ಮಾತುಗಳು ಮತ್ತೆ ಚರ್ಚೆ ಹುಟ್ಟು ಹಾಕಿದ್ದವಾದರೂ ಪಕ್ಷದ ಅಧ್ಯಕ್ಷ ರಾಹುಲ್ ಗಾಂಧಿ ರಾಜಸ್ಥಾನ ಚುನಾವಣೆಯಲ್ಲಿ ಬ್ಯುಸಿಯಾಗಿರುವುದರಿಂದ ಮತ್ತೆ ಮುಂದೂಡಲಾಗಿತ್ತು. ಆದರೀಗ ಕೆಪಿಸಿಸಿ ಅಧ್ಯಕ್ಷರು ಈ ಕುರಿತಾಗಿ ನೀಡಿರುವ ಹೇಳಿಕೆಯಿಂದ ಡಿಸೆಂಬರ್ 10ರೊಳಗಾಗಿ  ಸಂಪುಟ ವಿಸ್ತರಣೆ ಆಗುವ ನಿರೀಕ್ಷೆ ಹುಟ್ಟು ಹಾಕಿದೆ.

ದೆಹಲಿಗೆ ತೆರಳಿದ್ದ ದಿನೇಶ್ ಗುಂಡೂರಾವ್: 

ಸಚಿವ ಸಂಪುಟ ವಿಸ್ತರಣೆ ಒತ್ತಡ ಹಿನ್ನೆಲೆಯಲ್ಲಿ ನಿನ್ನೆ ದೆಹಲಿಗೆ ತೆರಳಿದ್ದ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿದ್ದರು. ಈ ವೇಳೆ ಸಚಿವ ಸಂಪುಟ ವಿಸ್ತರಣೆಗೆ ಒತ್ತಡ ಹೆಚ್ಚಾಗಿರುವ ಬಗ್ಗೆ ಹೈಕಮಾಂಡ್ ಗಮನ ಸೆಳೆದಿದ್ದರು. ಹೀಗಾಗಿ ಎರಡು ಮೂರು ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಅಂತಿಮ ನಿರ್ಧಾರ ತೆಗೆದುಕೊಳ್ಳೋ ಸಾಧ್ಯತೆ ಇದೆ ಎನ್ನಲಾಗಿತ್ತು.

click me!