
ಬೆಂಗಳೂರು: ರಾಜ್ಯದಲ್ಲಿ ಮುಖ್ಯಮಂತ್ರಿ ಸ್ಥಾನ ಖಾಲಿಯಿಲ್ಲ ಎಂದು ಎಐಸಿಸಿ ಅಧ್ಯಕ್ಷರೇ ಹೇಳಿದ್ದಾರೆ. ಅವರೇ ಈ ರೀತಿ ಹೇಳಿದ ಮೇಲೆ ನಾವೆಲ್ಲ ಆ ವಿಚಾರ ಕುರಿತು ಮಾತನಾಡುವುದೇ ಅಪ್ರಸ್ತುತ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.
ಸದಾಶಿವನಗರದ ತಮ್ಮ ನಿವಾಸದ ಬಳಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿ, ಮುಖ್ಯಮಂತ್ರಿ ಸ್ಥಾನದ ವಿಚಾರವಾಗಿ ಸಂದರ್ಭ ಬಂದಾಗ ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರೇ ಹೇಳಿದ್ದಾರೆ. ಅವರು ಹೇಳಿದ ಮೇಲೆ ಇನ್ನೇನು ಉಳಿಯಿತು. ಜತೆಗೆ ಮುಖ್ಯಮಂತ್ರಿ ಸ್ಥಾನ ಖಾಲಿಯಿಲ್ಲ ಎಂದಿದ್ದಾರೆ. ಬದಲಾವಣೆಯಿದ್ದರೆ ತೀರ್ಮಾನ ತೆಗೆದುಕೊಳ್ಳುತ್ತೇವೆ. ಸಂದರ್ಭ, ಸನ್ನಿವೇಶ ಬರಲಿ ಎಂದು ಸ್ಪಷ್ಟಪಡಿಸಿದ್ದಾರೆ. ಅವರೇ ಹಾಗೆ ಹೇಳಿದ ಮೇಲೆ ನಾವು ಮಾತನಾಡುವುದು ಅಪ್ರಸ್ತುತ ಎಂದರು.
ಉಪಚುನಾವಣೆ ಫಲಿತಾಂಶ ನಂತರ ಸಚಿವ ಸಂಪುಟ ಪುನಾರಚನೆಯಾಗುತ್ತದೆ ಎಂಬ ಚರ್ಚೆ ಕುರಿತು ಮಾತನಾಡಿ, ಉಪಚುನಾವಣೆ ಫಲಿತಾಂಶಕ್ಕೂ ಸಚಿವ ಸಂಪುಟ ಪುನಾರಚನೆಗೂ ಸಂಬಂಧವಿಲ್ಲ. ಸಚಿವ ಸಂಪುಟ ಪುನಾರಚನೆ ಎಂಬುದು ಸಹಜ ಪ್ರಕ್ರಿಯೆ. ಸರ್ಕಾರ ರಚನೆಯಾದ ಎರಡೂವರೆಯಿಂದ ಮೂರು ವರ್ಷಗಳಿಗೆ ಸಚಿವ ಸಂಪುಟ ಪುನಾರಚನೆಯಾಗುವುದು ಸಹಜ. ಸದ್ಯಕ್ಕೆ ಅದರ ಚರ್ಚೆಯಿಲ್ಲ. ಚರ್ಚೆ ಶುರುವಾದಾಗ ಆ ವಿಚಾರದ ಬಗ್ಗೆ ಮಾತನಾಡೋಣ ಎಂದು ತಿಳಿಸಿದರು.
ಇದನ್ನೂ ಓದಿ: 2ನೇ ಸಂಸಾರ ಪೋಷಿಸುವ ವ್ಯಕ್ತಿ ತನ್ನ ತಾಯಿ ಪೋಷಣೆ ನಿರಾಕರಿಸುವಂತಿಲ್ಲ: ಹೈಕೋರ್ಟ್ ಆದೇಶ
ಚು.ಆಯೋಗ ಜೇಬಲ್ಲಿಟ್ಟುಕೊಂಡು ಗೆಲುವು
ಪಂಚ ರಾಜ್ಯಗಳ ಚುನಾವಣಾ ಫಲಿತಾಂಶದ ಕುರಿತು ಮಾತನಾಡಿದ ಪ್ರಿಯಾಂಕ್ ಖರ್ಗೆ, ಅಸ್ಸಾಂ ಮತ್ತು ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಗೆಲುವು ಸಾಧಿಸಿಲ್ಲ. ಅದು ಚುನಾವಣಾ ಆಯೋಗದ ಗೆಲುವು. ಎಸ್‌ಐಆರ್, ಕ್ಷೇತ್ರ ಮರುವಿಂಗಡಣೆ ಮೂಲಕ ಚುನಾವಣೆ ಹೇಗೆ ನಡೆಸಿದ್ದಾರೆ ಎಂಬುದು ಎಲ್ಲರಿಗೂ ತಿಳಿದಿದೆ. ಪಶ್ಚಿಮ ಬಂಗಾಳದಲ್ಲಿ 91 ಲಕ್ಷ ಜನರನ್ನು ಮತದಾರರ ಪಟ್ಟಿಯಿಂದ ತೆಗೆದು ಹಾಕಿ, 27 ಲಕ್ಷ ಜನರು ದೂರು ನೀಡಿದ್ದರೂ ಅದನ್ನು ಇತ್ಯರ್ಥ ಮಾಡದೆ ಚುನಾವಣೆ ನಡೆಸಲಾಗಿದೆ. ಬಿಜೆಪಿ ಚುನಾವಣಾ ಆಯೋಗವನ್ನು ಜೇಬಲ್ಲಿಟ್ಟುಕೊಂಡು ಗೆಲುವು ಸಾಧಿಸಿದೆ. ಪಶ್ಚಿಮ ಬಂಗಾಳದ ಮಾದರಿಯ್ಲೇ ಕರ್ನಾಟಕದಲ್ಲೂ ಎಸ್‌ಐಆರ್ ಮಾಡುವ ಸಾಧ್ಯತೆಯಿದ್ದು, ಅದರ ಬಗ್ಗೆ ಎಚ್ಚರವಹಿಸುತ್ತೇವೆ ಎಂದರು.
ಇದನ್ನೂ ಓದಿ: ಮುಂದಿನ ವಾರ ಸಿದ್ದು, ಡಿಕೆಗೆ ದಿಲ್ಲಿಗೆ ಬುಲಾವ್? ನಾಯಕತ್ವ, ಸಂಪುಟ ಪುನಾರಚನೆ ಚರ್ಚೆ ಸಂಭವ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ