
ಬೆಂಗಳೂರು : ರಸ್ತೆ ದಾಟುವಾಗ ಬೈಕ್ ಡಿಕ್ಕಿಯಾಗಿ ಕಿರುತೆರೆಯ ಕ್ಯಾಮೆರಾಮ್ಯಾನ್‌ವೊಬ್ಬರು ಮೃತಪಟ್ಟಿರುವ ಘಟನೆ ನಾಗರಬಾವಿ ಸಮೀಪದ ಮಾತಾ ನಗರದಲ್ಲಿ ನಡೆದಿದೆ.
ಹೊಸಕೆರೆಹಳ್ಳಿಯ ದತ್ತಾತ್ರೇಯ ನಗರದ ನಿವಾಸಿ ಸಿ.ಪಿ.ರಾಜೇಶ್ (26) ಮೃತ ದುರ್ದೈವಿ. ನಾಗರಬಾವಿ ಸಮೀಪ ಗೆಳೆಯನನ್ನು ಭೇಟಿಯಾಗಿ ಮಂಗಳವಾರ ರಾತ್ರಿ 8.50 ರ ಸುಮಾರಿಗೆ ರಾಜೇಶ್ ಮರಳುವಾಗ ಈ ಅವಘಡ ಸಂಭವಿಸಿದೆ. ಈ ಪ್ರಕರಣದ ಸಂಬಂಧ ಆರೋಪಿಯನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
ಹುಲಿಯೂರುದುರ್ಗ ಸಮೀಪದ ಚೌಡನಕುಪ್ಪೆ ಗ್ರಾಮದ ಮೃತ ರಾಜೇಶ್, ಧಾರವಾಹಿಗಳಲ್ಲಿ ಕ್ಯಾಮೆ ರಾಮ್ಯಾನ್ ಆಗಿ ಕೆಲಸ ಮಾಡುತ್ತಿದ್ದರು. ಬುಧವಾರ ಸಹ ಕಂಠೀರವ ಸ್ಟುಡಿಯೋದಲ್ಲಿ ನಡೆದಿದ್ದ ಧಾರವಾಹಿಯೊಂದರ ಚಿತ್ರೀಕರಣದಲ್ಲಿ ಪಾಲ್ಗೊಂಡು ಮನೆಗೆ ಮರಳಿದ್ದರು.
ನಾಗರಬಾವಿಯಲ್ಲಿ ತಮ್ಮ ಸ್ನೇಹಿತ ವಿಜಯ್ ಅವರನ್ನು ಭೇಟಿಯಾಗಿ ರಾಜೇಶ್ ಮನೆಗೆ ಹೊರಟ್ಟಿದ್ದರು. ಆಗ ಅವರಿಗೆ ಸುಮನಹಳ್ಳಿ ಜಂಕ್ಷನ್ ಕಡೆಯಿಂದ ನಾಯಂಡಹಳ್ಳಿಗೆ ತೆರಳುತ್ತಿದ್ದ ಬೈಕ್ ಡಿಕ್ಕಿ ಹೊಡೆದಿದೆ. ಬ್ಯಾಟರಾಯನಪುರ ಸಂಚಾರ ಠಾಣೆ ಪೊಲೀಸರು ಮಾಹಿತಿ ನೀಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ