Booster Dose: 3ನೇ ಡೋಸ್‌ ಪಡೆಯಲು ನೀವು ಅರ್ಹರೇ?

By Kannadaprabha News  |  First Published Jan 13, 2022, 8:42 AM IST

*   ಬೂಸ್ಟರ್‌ ಡೋಸ್‌ ನೀಡುವ ಅಭಿಯಾನ ಈಗಾಗಲೇ ಆರಂಭ
*   ಲಸಿಕೆ ಪಡೆಯಲು ಎಷ್ಟು ದಿನ ಕಾಯಬೇಕು?
*   ಲಸಿಕೆ ಮಿಶ್ರಣ ಮಾಡುವಂತಿಲ್ಲ 
 


ಬೆಂಗಳೂರು(ಜ.13):  ಮುನ್ನೆಚ್ಚರಿಕೆ ಡೋಸ್‌ (Booster Dose) ಪಡೆಯಲು ಅರ್ಹರಾಗಿರುವ ಬಗ್ಗೆ ಹಾಗೂ ಲಸಿಕೆ(Vaccine) ಪಡೆಯಲು ಎಷ್ಟು ದಿನ ಕಾಯಬೇಕು ಎಂಬ ಬಗ್ಗೆ ಮಾಹಿತಿಯನ್ನು ಆನ್‌ಲೈನ್‌ನಲ್ಲಿ ಪಡೆಯುವ ಸೌಲಭ್ಯವನ್ನು ಸರ್ಕಾರ ಕಲ್ಪಿಸಿದೆ.  selfregistration.cowin.gov.in/ ಈ ಕೊಂಡಿಗೆ ಹೋಗಿ ನೀವು ಮೊದಲೆರಡು ಡೋಸ್‌ ಲಸಿಕೆ ಪಡೆಯುವಾಗ ನೀಡಿದ್ದ ದೂರವಾಣಿ ಸಂಖ್ಯೆಯನ್ನು(Mobile Number) ನೀಡಿದರೆ ಮುನ್ನೆಚ್ಚರಿಕೆ ಡೋಸ್‌ ಪಡೆಯಲು ನೀವು ಅರ್ಹರೇ ಮತ್ತು ಲಸಿಕೆ ಪಡೆಯಲು ಇನ್ನೆಷ್ಟು ದಿನ ಕಾಯಬೇಕು ಎಂಬ ಮಾಹಿತಿ ಲಭಿಸುತ್ತದೆ.

ಜ.10 ರಿಂದ ಆರೋಗ್ಯ ಮತ್ತು ಮುಂಚೂಣಿ ಕಾರ್ಯಕರ್ತರು ಮತ್ತು 60 ವರ್ಷ ಮೇಲ್ಪಟ್ಟ ಸಹ ಅಸ್ವಸ್ಥತೆ ಹೊಂದಿರುವ ಹಿರಿಯ ನಾಗರಿಕರಿಗೆ ಮುನ್ನೆಚ್ಚರಿಕೆ ಡೋಸ್‌ ನೀಡುವ ಅಭಿಯಾನ ಈಗಾಗಲೇ ಆರಂಭವಾಗಿದೆ. ಎರಡನೇ ಡೋಸ್‌ ಪಡೆದು ಒಂಬತ್ತು ತಿಂಗಳಾದ ಬಳಿಕ ಆರೋಗ್ಯ ಮತ್ತು ಮುಂಚೂಣಿ ಕಾರ್ಯಕರ್ತರು ಹಾಗೂ ಸಹ ಅಸ್ವಸ್ಥತೆ ಹೊಂದಿರುವ ಹಿರಿಯ ನಾಗರಿಕರು ಮೂರನೇ ಡೋಸ್‌ ಪಡೆಯಬಹುದಾಗಿದೆ.

Tap to resize

Latest Videos

undefined

Covid 19 Booster ಡೋಸ್‌ ಪಡೆಯದೆ ಕಚೇರಿಗೆ ಮರಳಬೇಡಿ: ಉದ್ಯೋಗಿಗಳಿಗೆ Facebook ತಾಕೀತು!

ಬೆಂಗಳೂರಿನಲ್ಲಿ 1.39 ಲಕ್ಷ ಮಂದಿಗೆ ಬೂಸ್ಟರ್‌ ಡೋಸ್‌ ನೀಡುವ ಗುರಿ!

ಬಿಬಿಎಂಪಿ (BBMP) ವ್ಯಾಪ್ತಿಯಲ್ಲಿ ಜ.10ರಿಂದ ಅರ್ಹ ಕೊರೋನಾ ವಾರಿಯರ್ಸ್ (Corona Warriors), ಮುಂಚೂಣಿ ಕಾರ್ಯಕರ್ತರು ಹಾಗೂ 60 ವರ್ಷ ಮೇಲ್ಪಟ್ಟಸಹ ಅಸ್ವಸ್ಥತೆಗೆ ಒಳಗಾದವರು ಸೇರಿದಂತೆ ಒಟ್ಟು 1.39 ಲಕ್ಷ ಮಂದಿ ಮುಂಜಾಗ್ರತಾ ಲಸಿಕೆ (ಬೂಸ್ಟರ್‌ ಡೋಸ್‌‌ - Booster Dose) ಪಡೆಯಲಿದ್ದಾರೆ. ಈ ಕುರಿತು ಬಿಬಿಎಂಪಿ ವಿಶೇಷ ಆಯುಕ್ತ (ಆರೋಗ್ಯ) ತ್ರಿಲೋಕ್‌ಚಂದ್ರ ಪ್ರತಿಕ್ರಿಯಿಸಿ, ನಗರದ ಎಂಟು ವಲಯಗಳಲ್ಲಿ ಲಸಿಕೆ ನೀಡಲು (Vaccine) ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ. ಎರಡು ಡೋಸ್‌ ಪಡೆದು 39 ವಾರ ಪೂರ್ಣಗೊಂಡವರ ಮಾಹಿತಿ ಸಂಗ್ರಹಿಸಲಾಗಿದೆ. ಅರ್ಹರ ಮೊಬೈಲ್‌ಗೆ ಮುಂಜಾಗ್ರತಾ ಲಸಿಕೆ ಪಡೆಯುವ ಕುರಿತು ಸಂದೇಶ (Message) ಬರುತ್ತದೆ. ಸಂದೇಶ ಸ್ವೀಕರಿಸಿರುವ ಅರ್ಹರು ಎಲ್ಲ ಪ್ರಾಥಮಿಕ ಆರೋಗ್ಯ ಕೇಂದ್ರ (PHC), ಆರೋಗ್ಯ ಶಿಬಿರಗಳಲ್ಲಿ ಮುಂಜಾಗ್ರತಾ ಲಸಿಕೆ ಪಡೆಯಲಿದ್ದಾರೆ. ಆದರೆ 60 ವರ್ಷ ಮೇಲ್ಪಟ್ಟಸಹ ಅಸ್ವಸ್ಥತೆಗೆ ಒಳಗಾದ ವೃದ್ಧರು ವೈದ್ಯರ ಸಲಹೆ ಮೇರೆಗೆ ಲಸಿಕೆ ಪಡೆಯಲಿದ್ದಾರೆ ಎಂದರು.

ಈಗಾಗಲೇ ಬಿಬಿಎಂಪಿ ಮುಖ್ಯ ಆಯುಕ್ತರು ಸಭೆ ನಡೆಸಿ, 15-18 ವರ್ಷದ ಮಕ್ಕಳಿಗೆ ಲಸಿಕೆ ನೀಡುವ ಜತೆಗೆ ಮುಂಜಾಗ್ರತಾ ಲಸಿಕೆ ನೀಡಲು ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ್ದರು. ಅದರಂತೆ ಕ್ರಮ ವಹಿಸಿರುವ ಅಧಿಕಾರಿಗಳು ಸದ್ಯ ಒಟ್ಟು 1.39 ಲಕ್ಷ ಮಂದಿಯ ಮಾಹಿತಿ ಕಲೆ ಹಾಕಿದ್ದಾರೆ. ಎಲ್ಲರಿಗೂ ಸರ್ಕಾರದ ನಿರ್ದೇಶನ ಮತ್ತು ಮಾರ್ಗಸೂಚಿ ಅನ್ವಯ ಲಸಿಕೆ ನೀಡಲಾಗುವುದು ಎಂದು ತಿಳಿಸಿದ್ದಾರೆ.

ಯಾರು ಅರ್ಹ?:

ವೈದ್ಯಕೀಯ ಸಿಬ್ಬಂದಿ, 60 ವರ್ಷ ಮೇಲ್ಪಟ್ಟ ಪೂರ್ವರೋಗಪೀಡಿತರು ಹಾಗೂ ಮುಂಚೂಣಿ ಕಾರ್ಯಕರ್ತರು 2ನೇ ಡೋಸ್‌ ಲಸಿಕೆ ಪಡೆದು 9 ತಿಂಗಳು ಅಥವಾ 39 ವಾರ ಆಗಿರಬೇಕು. ಅಂಥವರು ಮುಂಜಾಗ್ರತಾ ಡೋಸ್‌ ಲಸಿಕೆ ಪಡೆಯಲು ಅರ್ಹ.

Covid Vaccination : ಬೂಸ್ಟರ್‌ ಡೋಸ್‌ಗೆ ಯಾವ ಲಸಿಕೆ

ಯಾವ ಲಸಿಕೆ?:

ಮೊದಲಿನ 2 ಡೋಸ್‌ ಲಸಿಕೆ ಯಾವ ಕಂಪನಿಯದ್ದಾಗಿರುತ್ತೋ, ಅದೇ ಕಂಪನಿಯ ಲಸಿಕೆಯನ್ನು 3ನೇ ಡೋಸ್‌ ಆಗಿ ಪಡೆಯಬೇಕು. ಉದಾಹರಣೆಗೆ: ಕೋವ್ಯಾಕ್ಸಿನ್‌ 2 ಡೋಸ್‌ ಪಡೆದವರು 3ನೇ ಡೋಸ್‌ ಆಗಿ ಕೋವ್ಯಾಕ್ಸಿನ್‌ಅನ್ನೇ ಪಡೆಯಬೇಕು. ‘ಲಸಿಕೆ ಮಿಶ್ರಣ’ (ಬೇರೆ ಕಂಪನಿಯ ಲಸಿಕೆ) ಮಾಡುವಂತಿಲ್ಲ.

ಪೂರ್ವರೋಗ ಪೀಡಿತರು ಅಂದರೆ ಯಾರು?:

ಸಕ್ಕರೆ ಕಾಯಿಲೆ, ರಕ್ತದೊತ್ತಡ, ಕಿಡ್ನಿ ಕಾಯಿಲೆ, ಅಂಗಾಂಶ ಕಸಿಗೆ ಒಳಗಾದವರು, ಕ್ಯಾನ್ಸರ್‌, ಹೃದಯರೋಗಿಗಳು ಸೇರಿದಂತೆ 20 ಮಾದರಿಯ ವ್ಯಾಧಿ ಉಳ್ಳವರು ಪೂರ್ವರೋಗಪೀಡಿತರು ಎನ್ನಿಸಿಕೊಳ್ಳುತ್ತಾರೆ. ಇವರು 3ನೇ ಡೋಸ್‌ಗೆ ಅರ್ಹ.
 

click me!