
ಬೆಂಗಳೂರು (ಮಾ.3): ಕ್ಯಾನ್ಸರ್‌ನಿಂದ ಬಳಲುತ್ತಿರುವ 13 ವರ್ಷದ ಬಾಲಕನ, ಐಪಿಎಸ್ ಅಧಿಕಾರಿಯಾಗುವ ಕನಸನ್ನು ಈಡೇರಿಸುವ ಮೂಲಕ ಬೆಂಗಳೂರು ಪೊಲೀಸರು ಮಾನವೀಯತೆ ಮೆರೆದಿದ್ದಾರೆ.
ಮೋಸಿನ್ ರಾಜ್ ಎಂಬ 13 ವರ್ಷದ ಬಾಲಕ ಐಪಿಎಸ್ ಅಧಿಕಾರಿಯಾಗುವ ಕನಸು ಹೊಂದಿದ್ದ. ಆದರೆ, ಚಿಕ್ಕ ವಯಸ್ಸಿನಲ್ಲೇ ಮಾರಕ ಕ್ಯಾನ್ಸರ್‌ಗೆ ತುತ್ತಾಗಿದ್ದರಿಂದ ಕಿದ್ವಾಯಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ. ಬಾಲಕನ ಆಸೆ ಬಗ್ಗೆ ತಿಳಿದುಕೊಂಡ ಬೆಂಗಳೂರು ಪೊಲೀಸ್ ಪರಿಹಾರ ಸಂಸ್ಥೆ ಹಾಗೂ ಕಿದ್ವಾಯಿ ಸಂಸ್ಥೆ, ಪೊಲೀಸರೊಂದಿಗೆ ಮಾತನಾಡಿ ಬಾಲಕನ ಆಸೆ ಈಡೇರಲು ಸಹಕರಿಸಿವೆ.
ಬೆಂಗಳೂರು: ಅಂಧ ವ್ಯಕ್ತಿಯ ಕೈಹಿಡಿದು ರಸ್ತೆ ದಾಟಿಸಿ ಮಾನವೀಯತೆ ಮೆರೆದ ಟ್ರಾಫಿಕ್ ಪೊಲೀಸ್ !
ಬಾಲಕನ ಪರಿಸ್ಥಿತಿ ಬಗ್ಗೆ ಮಾಹಿತಿ ಪಡೆದ ಬೆಂಗಳೂರು ದಕ್ಷಿಣ ವಿಭಾಗದ ಪ್ರಭಾರ ಡಿಸಿಪಿ ಶಿವಪ್ರಕಾಶ್ ದೇವರಾಜ್ ಅವರು ಒಂದು ದಿನದ ಮಟ್ಟಿಗೆ ಬಾಲಕನಿಗೆ ಐಪಿಎಸ್ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸಲು ಅವಕಾಶ ಮಾಡಿಕೊಟ್ಟು, ಮಾನವೀಯತೆ ಮೆರೆದಿದ್ದಾರೆ. ಸಣ್ಣ ವಯಸ್ಸಿನಲ್ಲೇ ಕ್ಯಾನ್ಸರ್‌ಗೆ ತುತ್ತಾಗಿ ಕಿದ್ವಾಯಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬಾಲಕನ (cancer-stricken boy) ಕನಸು ಈಡೇರಲು ನೆರವಾದ ಪೊಲೀಸರ ಬಗ್ಗೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ.
ಕ್ಯಾಮೆರಾ ಫ್ಲಾಶಲ್ಲಿ ಪತ್ತೆಯಾಯ್ತು, ಮಗುವಿಗೆ ಕ್ಯಾನ್ಸರ್ ಇರೋ ವಿಷಯ!
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ