ಕಾರು ಅಪಘಾತ: ಕಾಂಗ್ರೆಸ್ ನಾಯಕಿ ವೀಣಾ ಕಾಶಪ್ಪನವರಗೆ ಗಾಯ

By Kannadaprabha News  |  First Published Nov 21, 2023, 6:26 AM IST

ವಿಜಯಪುರ ಹೊರವಲಯದ ಮುನೀಶ್ವರ ಭಾಗದಲ್ಲಿ ಸೋಮವಾರ ನಡೆದ ಕಾರು ಅಪಘಾತದಲ್ಲಿ ಬಾಗಲಕೋಟೆ ಜಿಪಂ ಮಾಜಿ ಅಧ್ಯಕ್ಷೆ ವೀಣಾ ಕಾಶಪ್ಪನವರ ಗಾಯಗೊಂಡಿದ್ದು, ವಿಜಯಪುರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.


ವಿಜಯಪುರ (ನ.21) : ವಿಜಯಪುರ ಹೊರವಲಯದ ಮುನೀಶ್ವರ ಭಾಗದಲ್ಲಿ ಸೋಮವಾರ ನಡೆದ ಕಾರು ಅಪಘಾತದಲ್ಲಿ ಬಾಗಲಕೋಟೆ ಜಿಪಂ ಮಾಜಿ ಅಧ್ಯಕ್ಷೆ ವೀಣಾ ಕಾಶಪ್ಪನವರ ಗಾಯಗೊಂಡಿದ್ದು, ವಿಜಯಪುರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಕಾರಿನಲ್ಲಿ ವಿಜಯಪುರ-ಕಲಬುರಗಿ ರಾಜ್ಯ ಹೆದ್ದಾರಿಯಲ್ಲಿ ವಿಜಯಪುರದಿಂದ ಸಿಂದಗಿ ಕಡೆಗೆ ಹೊರಟಿದ್ದ ವೇಳೆ ವೀಣಾ ಕಾಶಪ್ಪನವರ ಕಾರಿಗೆ ಸ್ಕೂಟಿ ಅಡ್ಡ ಬಂದಿದ್ದು, ಚಾಲಕ ಇದಕ್ಕೆ ಹೊಡೆಯುವುದನ್ನು ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದ ಮತ್ತೊಂದು ಕಾರಿಗೆ ಗುದ್ದಿದ್ದಾನೆ. ವೀಣಾ ಕಾಶಪ್ಪನವರ ಕೈ ಹಾಗೂ ಎದೆಯ ಭಾಗಕ್ಕೆ ಪೆಟ್ಟು ಬಿದ್ದಿದೆ. ಅಪಘಾತದ ಬಳಿಕ ಕಾರು ಬಿಟ್ಟು, ಬೇರೆ ಕಾರಿನಲ್ಲಿ ತೆರಳಿ ವಿಜಯಪುರ ಖಾಸಗಿ ಆಸ್ಪತ್ರೆಗೆ ದಾಖಲಾದರು. ಸುದ್ದಿ ತಿಳಿದು ಪತಿ, ಶಾಸಕ ವಿಜಯಾನಂದ ಕಾಶಪ್ಪನವರ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು. ಮುದ್ದೇಬಿಹಾಳ ಕಾಂಗ್ರೆಸ್ ಶಾಸಕ ಅಪ್ಪಾಜಿ ನಾಡಗೌಡ ಜೊತೆಗಿದ್ದರು.

Tap to resize

Latest Videos

ಪ್ರಧಾನಿ ಮೋದಿ ರ‍್ಯಾಲಿ ಡ್ಯೂಟಿಗೆ ತೆರಳುತ್ತಿದ್ದ ಪೊಲೀಸ್ ವಾಹನ ಅಪಘಾತ, 6 ಅಧಿಕಾರಿಗಳು ಸಾವು!

ಯಾವುದೇ ಗಂಭೀರ ಗಾಯಗಳಾಗಿಲ್ಲ, ಎಡಗೈಗೆ ಸ್ವಲ್ಪ ಗಾಯವಾಗಿದೆ ಎಂದು ತಿಳಿಸಿದ್ದಾರೆ. ಮಂಗಳವಾರ ಅವರು ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಆಗಲಿದ್ದಾರೆ ಎಂದು ತಿಳಿಸಿದ್ದಾರೆ. ವಿಜಯಪುರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

ಒಂದೂವರೆ ವರ್ಷದ ಮಗುವಿನ ಮೇಲೆ ಹರಿದ ಚಿಕ್ಕಪ್ಪನ ಕಾರು, ಮನೆಯಂಗಳದಲ್ಲೇ ದುರಂತ!

 

click me!