ಬಸ್‌ಗಾಗಿ ಕಾದು ನಿಂತಿದ್ದವರಿಗೆ ಕಾರು ಡಿಕ್ಕಿ: ಇಬ್ಬರು‌ ಸ್ಥಳದಲ್ಲೇ ಸಾವು

By Ravi Janekal  |  First Published Aug 7, 2023, 12:20 PM IST

ವೇಗವಾಗಿ ಚಲಿಸುತ್ತಿದ್ದ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ವ್ಯಕ್ತಿಗಳು ಸ್ಥಳದಲ್ಲೇ ಸಾವಿಗೀಡಾದ ಘಟನೆ  ಶಿಗ್ಗಾವಿ ತಾಲ್ಲೂಕಿನ ನೀರಲಗಿ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಸೋಮವಾರ ನಡೆದಿದೆ.


ಹಾವೇರಿ (ಆ.7): ವೇಗವಾಗಿ ಚಲಿಸುತ್ತಿದ್ದ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ವ್ಯಕ್ತಿಗಳು ಸ್ಥಳದಲ್ಲೇ ಸಾವಿಗೀಡಾದ ಘಟನೆ  ಶಿಗ್ಗಾವಿ ತಾಲ್ಲೂಕಿನ ನೀರಲಗಿ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಸೋಮವಾರ ನಡೆದಿದೆ.

ನೀರಲಗಿ ಗ್ರಾಮದ ವಿರೂಪಾಕ್ಷಪ್ಪ ಕಾಳಿ (60) ಮತ್ತು ಚಿದಾನಂದ ಶೇರವಾಡ (55) ಮೃತಪಟ್ಟವರು. ಹೊನ್ನಾಪುರ ಗ್ರಾಮದ ಬಸನಗೌಡ ಶಿವನಗೌಡ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಶಿಗ್ಗಾವಿ ಪಟ್ಟಣಕ್ಕೆ ತೆರಳಲು ನೀರಲಗಿ ಬಳಿ ಹೆದ್ದಾರಿ ಬದಿ ನಿಂತಿದ್ದ ವ್ಯಕ್ತಿಗಳ ಮೇಲೆ ಕಾರು ಹರಿದಿದೆ. ತೀವ್ರವಾಗಿ ಗಾಯಗೊಂಡಿದ್ದ ಚಿದಾನಂದ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲು  ಸರಿಯಾದ ಸಮಯಕ್ಕೆ ಆಂಬುಲೆನ್ಸ್  ಬಾರದ ಕಾರಣ ಚಿದಾನಂದ ಮೃತಪಟ್ಟಿದ್ದಾರೆ ಎನ್ನಲಾಗಿದೆ.

Tap to resize

Latest Videos

undefined

ಲಾರಿಯ ರೂಪದಲ್ಲಿ ಬಂದ ಜವರಾಯ, ರಂಗಭೂಮಿ ಕಲಾವಿದ ಇರಕಸಂದ್ರ ಜಗನ್ನಾಥ್ ಸಾವು.

ಆಂಬುಲೆನ್ಸ್ ಸಕಾಲಕ್ಕೆ ಬಂದಿದ್ದರೆ ಚಿದಾನಂದ ಬದುಕುತ್ತಿದ್ದ. ಆಂಬುಲೆನ್ಸ್  ವಿಳಂಬ ಮತ್ತು ಹೆದ್ದಾರಿ ಬದಿ ಬಸ್ಸಿಗಾಗಿ ಕಾಯುವ ಪ್ರಯಾಣಿಕರ ಸುರಕ್ಷತೆಗೆ ಯಾವುದೇ ವ್ಯವಸ್ಥೆಯಿಲ್ಲ ಎಂದು ಗ್ರಾಮಸ್ಥರ ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿದರು. ಒಂದು ಗಂಟೆಗೂ ಹೆಚ್ಚು ಕಾಲ ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು. ಸ್ಥಳಕ್ಕೆ ತಡಸ ಪೊಲೀಸರು ದೌಡಾಯಿಸಿ ಉದ್ರಿಕ್ತ ಜನರನ್ನು ಶಾಂತಗೊಳಿಸಿದರು. ತಡಸ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಳ್ಳಾರಿ ಕೆಎಸ್‌ಆರ್‌ಟಿಸಿ ಡಿವಿಜನಲ್ ಸೆಕ್ಯುರಿಟಿ ಇನ್‌ಸ್ಪೆಕ್ಟರ್ ಅನುಮಾನಾಸ್ಪದ ಸಾವು

click me!