
ಮಂಡ್ಯ (ಜು.29): ಮಂಡ್ಯ ತಾಲೂಕಿನಲ್ಲಿ ಇತ್ತೀಚೆಗಷ್ಟೇ ಕಾರೊಂದು ವಿಸಿ ನಾಲೆಗೆ ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟಿದ್ದರು. ಇದರ ಬೆನ್ನಲ್ಲೇ ಇದೀಗ ಶ್ರೀರಂಗಪಟ್ಟಣ ತಾಲೂಕಿನ ಗಾಮನಹಳ್ಳಿಯಲ್ಲಿ ಕಾರೊಂದು ವಿಸಿ ನಾಲೆಗೆ ಬಿದ್ದು ನಾಲ್ವರು ಮಹಿಳೆಯರು ಮೃತಪಟ್ಟಿರುವ ಘಟನೆ ಶನಿವಾರ ನಡೆದಿದೆ. ಮೈಸೂರು ಜಿಲ್ಲೆ ಟಿ.ನರಸೀಪುರ ತಾಲೂಕಿನ ಗೊರವನಹಳ್ಳಿಯ ದೊಡ್ಡಯ್ಯ ಅವರ ಪತ್ನಿ ಮಹದೇವಮ್ಮ, ಸಂಬಂಧಿಕರಾದ ರೇಖಾ, ಸಂಜನಾ, ಮಹಾದೇವಿ ಮೃತರು.
ಕಾರಿನಲ್ಲಿದ್ದ ಚಾಲಕ ಮನೋಜ್ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಆದಿಚುಂಚನಗಿರಿಯಲ್ಲಿ ಏರ್ಪಡಿಸಿದ್ದ ದೇವತಾ ಕಾರ್ಯಕ್ಕೆ ಆಹ್ವಾನಿಸಲು ಗೊರವನಹಳ್ಳಿಯಿಂದ ದೊಡ್ಡ ಮುಲಗೂಡು ಗ್ರಾಮಕ್ಕೆ ಇವರು ತೆರಳುತ್ತಿದ್ದರು. ರಾತ್ರಿ 8ರ ಸುಮಾರಿಗೆ ಗಾಮನಹಳ್ಳಿ ಗ್ರಾಮದ ನಾಲೆ ಏರಿ ಮೇಲೆ ಕತ್ತಲೆಯಲ್ಲಿ ಕಾರು ನಾಲಿಗೆ ಉರುಳಿದೆ. ಗ್ರಾಮಸ್ಥರು ಅದರಲ್ಲಿದ್ದವರನ್ನು ಮೇಲೆತ್ತುವ ಪ್ರಯತ್ನ ಮಾಡಿದರು. ಅಷ್ಟರಲ್ಲಿ ನಾಲ್ವರು ಸಾವಿಗೀಡಾಗಿದ್ದು, ಚಾಲಕನನ್ನು ರಕ್ಷಿಸುವಲ್ಲಿ ಗ್ರಾಮಸ್ಥರು ಯಶಸ್ವಿಯಾಗಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ