ಆರ್ಥಿಕವಾಗಿ ಹಿಂದುಳಿದ ಬ್ರಾಹ್ಮಣ ಸಮುದಾಯವರಿಗೆ ಜಾತಿ- ಪ್ರಮಾಣ ಪತ್ರ ಹಾಗೂ ಆದಾಯ ಪತ್ರವನ್ನು ಒದಗಿಸುವಂತೆ ಸರ್ಕಾರ ಆದೇಶಿಸಿದೆ.
ಬೆಂಗಳೂರು(ಜು.16): ಆರ್ಥಿಕವಾಗಿ ಹಿಂದುಳಿದ ಬ್ರಾಹ್ಮಣ ಸಮುದಾಯವರಿಗೆ ಜಾತಿ- ಪ್ರಮಾಣ ಪತ್ರ ಹಾಗೂ ಆದಾಯ ಪತ್ರವನ್ನು ಒದಗಿಸುವಂತೆ ರಾಜ್ಯ ಸರ್ಕಾರ ಆದೇಶಿಸಿದೆ.
ಬ್ರಾಹ್ಮಣ ಸಮುದಾಯದಲ್ಲಿ ಆರ್ಥಿಕವಾಗಿ ಹಿಂದುಳಿದ ಜನರಿಗೆ ಆದಾಯ ಪ್ರಮಾಣ ಪತ್ರ ಹಾಗೂ ಜಾತಿ ಪ್ರಮಾಣ ಪತ್ರ ನೀಡುವಂತೆ ರಾಜ್ಯ ಕಂದಾಯ ಇಲಾಖೆ ಬುಧವಾರ ತಹಸೀಲ್ದಾರ್‌ಗಳಿಗೆ ಸೂಚಿಸಿದೆ.
ಕೊರೋನಾ ಔಷಧಿ ಸಂಶೋಧಿಸುತ್ತಿರುವ ಆಕ್ಸ್‌ಫರ್ಡ್‌ನಿಂದ ಸಿಹಿ ಸುದ್ದಿ; ಇಂದು ಘೋಷಣೆ!
ತಹಸೀಲ್ದಾರರು ಪ್ರಮಾಣಪತ್ರ ನೀಡುತ್ತಿಲ್ಲ ಎಂಬ ದೂರು ಕೇಳಿ ಬಂದ ಹಿನ್ನೆಲೆಯಲ್ಲಿ ಸರ್ಕಾರ ಹೇಳಿಕೆ ನೀಡಿದ್ದು, ಆರ್ಥಿಕವಾಗಿ ಹಿಂದುಳಿದವರಿಗೆ ಜಾತಿ ಪ್ರಮಾಣ ಪತ್ರ ದೊರಕಿಸಿಕೊಡುವಲ್ಲಿ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿಗಳಿಗೂ ಸೂಚಿಸಲಾಗಿದೆ.
ಆರ್ಥಿಕವಾಗಿ ಹಿಂದುಳಿದ ಎಲ್ಲ ಸಮುದಾಯದ ಜನರಿಗೂ ಶೇ. 10 ಮೀಸಲಾತಿ ನೀಡುವ ಕಾನೂನೂ ಕೇಂದ್ರ ಜಾರಿ ಮಾಡಿದ್ದು, ಆದಾಯ ಹಾಗೂ ಜಾತಿ ಪ್ರಮಾಣ ಪತ್ರದ ಮೂಲಕ ಬಡವರು ಸರ್ಕಾರಿ ಸೌಲಭ್ಯ ಪಡೆಯಬಹುದಾಗಿದೆ.
ಭಾರತದಿಂದ ಮತ್ತೊಂದು ಕೊರೋನಾ ಲಸಿಕೆ ಸಿದ್ಧ; DCGIನಿಂದ ಸಿಕ್ತು ಗ್ರೀನ್ ಸಿಗ್ನಲ್!
ಆರ್ಥಿಕವಾಗಿ ಹಿಂದುಳಿದ ಬ್ರಾಹ್ಮಣ ಸಮುದಾಯದವರಿಗೆ ಶಿಕ್ಷಣ, ಉದ್ಯೋಗ, ಕೌಶಲ್ಯ ಅಭಿವೃದ್ಧಿ, ಸ್ವಯಂ ಉದ್ಯೋಗ ಹಾಗೂ ಇತರೇ ಸೌಲಭ್ಯಗಳನ್ನು ಪಡೆಯಲು ಜಾತಿ ಹಾಗೂ ಆದಾಯ ಪ್ರಮಾಣ ಪತ್ರವನ್ನು ನೀಡಲು ಗೋವಿಂದ ಕಾರಜೋಳ ಆದೇಶಿಸಿದ್ದಾರೆ. ಕೇಂದ್ರ ಸರ್ಕಾರ ಆರ್ಥಿಕವಾಗಿ ಹಿಂದುಳಿದ ಮೇಲ್ವರ್ಗದವರಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇ. 10 ರಷ್ಟು ಮೀಸಲಾತಿಯನ್ನು ಕಲ್ಪಿಸಿ ಆದೇಶ ಹೊರಡಿಸಿದೆ.