ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿಗೆ ಕೊಂಚ ರಿಲೀಫ್..!

By Suvarna NewsFirst Published Dec 15, 2020, 8:05 PM IST
Highlights

ಮೈಸೂರು ಜಿಲ್ಲಾಧಿಕಾರಿ ಹುದ್ದೆ ವಿವಾದಕ್ಕೆ ಸಂಬಂಧಿಸಿದಂತೆ ರೋಹಿಣಿ ಸಿಂಧೂರಿ ಅವರಿಗೆ ಕೊಂಚ ರಿಲೀಫ್ ಸಿಕ್ಕಿದೆ

ಬೆಂಗಳೂರು, (ಡಿ.15): ಮೈಸೂರು ಜಿಲ್ಲಾಧಿಕಾರಿ ಹುದ್ದೆಯಿಂದ ತಮ್ಮನ್ನು ವರ್ಗಾವಣೆ ಮಾಡಿರುವುದನ್ನು ಪ್ರಶ್ನಿಸಿ ಐಎಎಸ್ ಅಧಿಕಾರಿ ಬಿ.ಶರತ್ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಡಿ.22ಕ್ಕೆ ಕೇಂದ್ರ ಆಡಳಿತಾತ್ಮಕ ನ್ಯಾಯ ಮಂಡಳಿ (ಸಿಎಟಿ) ಮುಂದೂಡಿದೆ.

ವಿರೋಧದ ನಡುವೆಯೂ ಅಮ್ಮನ ದರ್ಶನ ಪಡೆದು ಅಧಿಕಾರ ಸ್ವೀಕರಿಸಿದ ರೋಹಿಣಿ ಸಿಂಧೂರಿ

ತಮ್ಮನ್ನು ಅವಧಿಪೂರ್ವ ವರ್ಗಾವಣೆ ಮಾಡಿರುವ ಸರ್ಕಾರದ ಕ್ರಮ ನಿಯಮಬಾಹಿರ ಎಂದು ಆರೋಪಿಸಿ ಐಎಎ ಅಧಿಕಾರಿ ಬಿ. ಶರತ್ ಸಲ್ಲಿಸಿದ್ದ ಅರ್ಜಿ, ಮಂಗಳವಾರ ಸಿಎಟಿ ಮುಂದೆ ವಿಚಾರಣೆಗೆ ಬಂದಿತ್ತು.

ಈ ವೇಳೆ ರಾಜ್ಯ ಸರ್ಕಾರದ ಪರ ಹಾಜರಿದ್ದ ಅಡ್ವೊಕೇಟ್ ಜನರಲ್ ಪ್ರಭಲಿಂಗ ನಾವದಗಿ, ಬಿ.ಶರತ್ ಅವರನ್ನು ಮೈಸೂರು ಜಿಲ್ಲಾಧಿಕಾರಿ ಹುದ್ದೆಯಿಂದ ವರ್ಗಾವಣೆ ಮಾಡಿ, ಅವರ ಜಾಗಕ್ಕೆ ರೋಹಿಣಿ ಸಿಂಧೂರಿ ಅವರನ್ನು ನಿಯೋಜಿಸಿದ ಸರ್ಕಾರದ ಕ್ರಮವನ್ನು ಸಮರ್ಥಿಸಿಕೊಂಡರು. ನ್ಯಾಯಾಲಯ ಹೆಚ್ಚಿನ ವಿಚಾರಣೆಗಾಗಿ ಅರ್ಜಿಯನ್ನು ಡಿ.22ಕ್ಕೆ ನಿಗದಿಪಡಿಸಿತು.

ಮೈಸೂರು ಜಿಲ್ಲಾಧಿಕಾರಿ ವರ್ಗಾವಣೆ : ಸಿಎಟಿಗೆ ಅರ್ಜಿ

ಪ್ರಕರಣದ ಹಿನ್ನೆಲೆ
ಮೈಸೂರು ಜಿಲ್ಲಾಧಿಕಾರಿ ಹುದ್ದೆಯಿಂದ ಬಿ. ಶರತ್ ಅವರನ್ನು ಏಕಾಏಕಿ ವರ್ಗವಣೆ ಮಾಡಿ ಆದೇಶಿಸಿತ್ತು. 2020 ಆಗಸ್ಟ್ 29ರಂದು ಮೈಸೂರು ಜಿಲ್ಲಾಧಿಕಾರಿಯಾಗಿ ನೇಮಕವಾಗಿದ್ದ ಶರತ್ ಅವರನ್ನು ಸೆಪ್ಟೆಂಬರ್ 27ರಂದು ಮತ್ತೆ ವರ್ಗಾವಣೆ ಮಾಡಲಾಗಿತ್ತು. ಅದನ್ನು ಆಕ್ಷೇಪಿಸಿ ಅಕ್ಟೋಬರ್ ಮೊದಲ ವಾರದಲ್ಲಿ ಬಿ. ಶರತ್ ಸಿಎಟಿಗೆ ತಕರಾರು ಅರ್ಜಿ ಸಲ್ಲಿಸಿದ್ದರು.

click me!