
ಬೆಂಗಳೂರು (ಸೆ.19): 'ಯಾವುದೇ ಕಾರಣಕ್ಕೂ ತಮಿಳನಾಡಿಗೆ 5 ಸಾವಿರ ಕ್ಯೂಸೆಕ್ಸ್ ನೀರು ಬಿಡಲು ಸಾಧ್ಯವಿಲ್ಲ' ಕಾವೇರಿ ನೀರು ಬಿಡುಗಡೆಗೆ ಆದೇಶಿರುವ CWMA ವಿಚಾರಕ್ಕೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ತೀವ್ರ ವಿರೋಧ ವ್ಯಕ್ತಪಡಿಸಿದರು.
ಕಾವೇರಿ ನೀರು ಬಿಡುವ ವಿಚಾರ ಸಂಬಂಧ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಈ ವರ್ಷ ಬರಗಾಲ ಹಿನ್ನೆಲೆ ನಮ್ಮ ಜಲಾಶಯಗಳೆಲ್ಲ ಖಾಲಿ ಆಗಿವೆ. ಕೃಷಿಗೆ ಬಿಡಿ, ಬೆಂಗಳೂರಿಗೆ ಕುಡಿಯುವ ನೀರಿಗೂ ಸಮಸ್ಯೆ ಆಗಿದೆ. ಇಂಥ ಪರಿಸ್ಥಿತಿಯಲ್ಲಿ ತಮಿಳುನಾಡಿಗೆ ಬೆಳೆ ಬೆಳೆಯುವುದಕ್ಕೆ ನೀರು ಬಿಡಿ ಎಂದರೆ ಹೇಗೆ? ಎಂದು ಪ್ರಶ್ನಿಸಿದ ಅವರು. ಈ ವಿಚಾರವಾಗಿ ಸರ್ಕಾರ ಸುಪ್ರೀಂಕೋರ್ಟ್ ಗೆ ಮೇಲ್ಮನವಿ ಸಲ್ಲಿಸಬೇಕು ಎಂದು ಆಗ್ರಹಿಸಿದರು.
ರಾಜ್ಯ ಸರ್ಕಾರ ಮೊದಲು ನೀರು ಬಿಡುವುದನ್ನು ನಿಲ್ಲಿಸಲಿ. ಇಲ್ಲಿನ ವಾಸ್ತವ ಪರಿಸ್ಥಿತಿಯನ್ನು ಸುಪ್ರೀಂ ಕೋರ್ಟ್‌ನಲ್ಲಿ ತಿಳಿಸಿ ಮನವರಿಕೆ ಮಾಡಿಕೊಡಲಿ. ಅಗತ್ಯ ಬಿದ್ದರೆ ಪ್ರಾಧಿಕಾರದ ನಿಯೋಗ ರಾಜ್ಯಕ್ಕೆ ಬಂದು ವಾಸ್ತವಿಕ ಸ್ಥಿತಿ ನೋಡಿ ತೀರ್ಮಾನ ಕೈಗೊಳ್ಳಲಿ. ಯಾವುದೇ ಕಾರಣಕ್ಕೂ ನಾವು ನೀರು ಬಿಡುವ ಸ್ಥಿತಿಯಲ್ಲಿ ಇಲ್ಲ ಅನ್ನೋದನ್ನು ಮನದಟ್ಟು ಮಾಡುವ ಕೆಲಸವನ್ನು ಸರ್ಕಾರ ಮಾಡಲಿ ಎಂದು ಆಗ್ರಹಿಸಿದರು.
ತಮಿಳನಾಡಿಗೆ ನೀರು ಬಿಡೋಕೆ ಇಷ್ಟ ಇಲ್ಲ;ಸುಪ್ರೀಂ ಕೋರ್ಟ್ ನೀರು ಬಿಡಿ ಅಂದ್ರೆ ನಾವೇನು ಮಾಡೋಕಾಗುತ್ತೆ? ಡಿಕೆಶಿ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ