ತಮಿಳುನಾಡಿಗೆ ಕಾವೇರಿ ನೀರು ಬಿಡಬಾರದು ಎಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಅಂಚೆ ಕಚೇರಿಗೆ ಮುತ್ತಿಗೆ ಹಾಕಿ ಒಳ ನುಗ್ಗಲು ಯತ್ನಿಸಿದ್ದಲ್ಲದೆ, ಪೊಲೀಸ್ ವಾಹನ ಅಡ್ಡಗಟ್ಟಿ ವಾಗ್ವಾದ ನಡೆಸಿದ ಹಿನ್ನೆಲೆಯಲ್ಲಿ ಸುಮಾರು 20 ಕ್ಕೂ ಹೆಚ್ವು ಕರವೇ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿರುವ ಘಟನೆ ಇಂದು ಚಿತ್ರದುರ್ಗದಲ್ಲಿ ನಡೆದಿದೆ.
ವರದಿ: ಕಿರಣ್ಎಲ್ ತೊಡರನಾಳ್ ಏಷ್ಯಾನೆಟ್ ಸುವರ್ಣ ನ್ಯೂಸ್
ಚಿತ್ರದುರ್ಗ (ಸೆ.22): ತಮಿಳುನಾಡಿಗೆ ಕಾವೇರಿ ನೀರು ಬಿಡಬಾರದು ಎಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಅಂಚೆ ಕಚೇರಿಗೆ ಮುತ್ತಿಗೆ ಹಾಕಿ ಒಳ ನುಗ್ಗಲು ಯತ್ನಿಸಿದ್ದಲ್ಲದೆ, ಪೊಲೀಸ್ ವಾಹನ ಅಡ್ಡಗಟ್ಟಿ ವಾಗ್ವಾದ ನಡೆಸಿದ ಹಿನ್ನೆಲೆಯಲ್ಲಿ ಸುಮಾರು 20 ಕ್ಕೂ ಹೆಚ್ವು ಕರವೇ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿರುವ ಘಟನೆ ಇಂದು ಚಿತ್ರದುರ್ಗದಲ್ಲಿ ನಡೆದಿದೆ.
undefined
ರಾಜ್ಯದಲ್ಲಿ ಇತ್ತೀಚಿನ ದಿನಗಳಲ್ಲಿ ಎಂದೂ ಕಾಣದಂತಹ ಬರಗಾಲದ ಸ್ಥಿತಿ ನಿರ್ಮಾಣವಾಗಿದೆ.
ವಾಡಿಕೆಯಂತೆ ಮಳೆ ಆಗದೆ. ಈಗಾಗಲೇ 192 ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕುಗಳೆಂದು ಘೋಷಣೆ ಮಾಡಲಾಗಿದೆ. ವಿಶೇಷವಾಗಿ ಕಾವೇರಿ ಕಣಿವೆ ಭಾಗದಲ್ಲಿ ತೀವ್ರ ಸ್ವರೂಪದ ಬರದ ಸ್ಥಿತಿ ನಿರ್ಮಾಣವಾಗಿದೆ. ಕೃಷ್ಣರಾಜ ಸಾಗರ ಜಲಾಶಯದಲ್ಲಿ ಕೇವಲ 20 ಟಿಎಂಸಿ ನೀರು ಇದ್ದು, ಅದರಲ್ಲಿ 15 ಟಿಎಂಸಿ ನೀರು ಮಾತ್ರ ಬಳಕೆಗೆ ಸಿಗುವುದು. ಈ ವಾಸ್ತವ ತಿಳಿದಿದ್ದರೂ ಕೂಡ ಕಾವೇರಿ ನದಿ ನೀರು ಪ್ರಾಧಿಕಾರ 7 ಟಿಎಂಸಿ ನೀರನ್ನು ತಮಿಳುನಾಡಿಗೆ ಹರಿಸಬೇಕು ಎಂಬುದು ಆಶ್ಚರ್ಯಕರ ಸಂಗತಿಯಾಗಿದೆ. ಆದ್ದರಿಂದ ಯಾವುದೇ ಕಾರಣಕ್ಕೂ ಮುಖ್ಯಮಂತ್ರಿಗಳು ತಮಿಳುನಾಡಿಗೆ ನೀರನ್ನು ಹರಿಸಬಾರದು ಎಂದು ಒತ್ತಾಯಿಸಿದರು.
ಸೋನಿಯಾ ಗಾಂಧಿ, ಸ್ಟಾಲಿನ್ ಮುಂದೆ ದೊಡ್ಮನುಷ್ಯನಾಗಲು ಡಿಕೆಶಿ ನೀರು ಬಿಟ್ಟಿದ್ದಾನೆ: ಈಶ್ವರಪ್ಪ ವಾಗ್ದಾಳಿ
ಬೆಂಗಳೂರಿಗೆ ಪ್ರತಿ ತಿಂಗಳು ಒಂದೂವರೆ ಟಿಎಂಸಿ ಕುಡಿಯವ ನೀರು ಬೇಕಿದೆ. ಕಾವೇರಿ ಕಣಿವೆ ರೈತರಿ ಹೊಲಗದ್ದೆಗಳಿಗೆ ನೀರಿಲ್ಲ. ಕೈಗಾರಿಕೆಗಳಿಗೆ ಕೊಡಬೇಕಾದ ನೀರು ಕೊಡಲು ಆಗುತ್ತಿಲ್ಲ. ಇಂತಹ ಪರಿಸ್ಥತಿಯಲ್ಲಿ ತಮಿಳುನಾಡಿಗೆ 7 ಟಿಎಂಸಿ ನೀರು ಬಿಡಲು ಸಾಧ್ಯವೆ ? ಎಂದು ಪ್ರಶ್ನಿಸಿರುವ ಪ್ರತಿಭಟನಕಾರರು ಮುಖ್ಯಮಂತ್ರಿಗಳು ಪ್ರಾಧಿಕಾರದ ಆದೇಶವನ್ನು ಪಾಲಿಸಬಾರದು ಎಂದು ಆಗ್ರಹಿಸಿವೆ.
ರಾಜ್ಯದ ಜನತೆಯ ಬದುಕಿಗೆ ರಕ್ಷಣೆ ನೀಡಬೇಕು ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಅಡ್ಡಗೋಡೆಯ ಮೇಲೆ ದೀಪ ಇಟ್ಟಂತೆ ಮಾತನಾಡುವುದನ್ನು ಬಿಟ್ಟು ಯಾವುದೇ ಕಾರಣಕ್ಕೂ ನೀರು ಬಿಡುವುದಿಲ್ಲ ಎಂಬ ದೃಡ ನಿರ್ಧಾರವನ್ನು ಕೈಗೊಳ್ಳಬೇಕು ಎಂದು ಘೋಷಣೆಗಳನ್ನ ಕೂಗುತ್ತಾ ಅಂಚೇ ಕಚೇರಿಗೆ ಮುತ್ತಿಗೆ ಹಾಕಿದರು.
ಕರವೇ ಕಾರ್ಯಕರ್ತರು ಪ್ರತಿಭಟಿಸುತ್ತಿರುವಾಗ ಕೆಲ ಕಾರ್ಯಕರ್ತರು ಅಂಚೇ ಕಚೇರಿಯ ಗೇಟನ್ನು ಹಾರಿ ಒಳ ನುಗ್ಗಲು ಯತ್ನಿಸಿದರು. ಆಗ ಪೊಲೀಸರು ಅವರನ್ನು ತಡೆದರು. ಇದಾದ ನಂತರ ಪ್ರತಿಭಟನಕಾರರು ಪೊಲೀಸರ ವಾಹನವನ್ನು ಅಡ್ಡಗಟ್ಟಿ ಸರ್ಕಾರದ ವಿರುದ್ದ ಘೋಷಣೆಗಳನ್ನು ಕೂಗಿದರು.
ಸನಾತನ ಧರ್ಮ ದಂಗಲ್ ಗೆ ವೇದಿಕೆಯಾದ ಗಣೇಶ ಮಂಟಪಗಳು, ವೀರ ಸಾವರ್ಕರ್‌ಗೂ ನಡೆಯುತ್ತಿದೆ ಪೂಜೆ!
ಈ ವೇಳೆ ಪೊಲೀಸರೊಂದಿಗೆ ವಾಗ್ವಾದಕ್ಕೆ ಇಳಿದ ಹಿನ್ನೆಲೆಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ಟಿ.ರಮೇಶ್,ರಾಜಪುತ್ರ, ವಿಜಯಕುಮಾರ್, ಚಂದ್ರಕಲಾ, ಜ್ಯೋತಿ, ಸುಮ, ಗಣೇಶ, ಜಯಲಕ್ಷ್ಮೀ, ರಾಮಕೃಷ್ಣಪ್ಪ, ಮಹಮದ್ ಜಾಕೀರ್, ಮಂಜುಳಾ ಸೇರಿದಂತೆ ಸುಮಾರು 20 ಕ್ಕೂ ಹೆಚ್ಚು ಕರವೇ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿ, ನಂತರ ಬಿಡುಗಡೆ ಮಾಡಿದರು..