‘ಕೆಆರ್‌ಎಸ್ ಒಳಹರಿವು ಶೂನ್ಯಕ್ಕೆ ತಲುಪಿದೆ. ನಮ್ಮ ಹತ್ತಿರ ತಮಿಳುನಾಡಿಗೆ ಹರಿಸಲು ನೀರಿಲ್ಲ. ನೀರು ಬಿಡುವ ಶಕ್ತಿಯೂ ನಮ್ಮಲ್ಲಿ ಇಲ್ಲ. ಕುಡಿಯುವ ನೀರನ್ನು ಉಳಿಸಿಕೊಂಡರೆ ಸಾಕಾಗಿದೆ’ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ಬೆಂಗಳೂರು (ಅ.31) : ‘ಕೆಆರ್‌ಎಸ್ ಒಳಹರಿವು ಶೂನ್ಯಕ್ಕೆ ತಲುಪಿದೆ. ನಮ್ಮ ಹತ್ತಿರ ತಮಿಳುನಾಡಿಗೆ ಹರಿಸಲು ನೀರಿಲ್ಲ. ನೀರು ಬಿಡುವ ಶಕ್ತಿಯೂ ನಮ್ಮಲ್ಲಿ ಇಲ್ಲ. ಕುಡಿಯುವ ನೀರನ್ನು ಉಳಿಸಿಕೊಂಡರೆ ಸಾಕಾಗಿದೆ’ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಮಿಳುನಾಡಿಗೆ ಕಾವೇರಿ ನೀರು ಹರಿಸುವ ಕುರಿತು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (ಸಿಡಬ್ಲ್ಯುಆರ್‌ಸಿ) ಮಾಡಿರುವ ಶಿಫಾರಸಿನ ಕುರಿತು ಅಸಹಾಯಕತೆ ವ್ಯಕ್ತಪಡಿಸಿದರು.
ತಮಿಳುನಾಡಿಗೆ ಮತ್ತೆ ನಿತ್ಯ 2600 ಕ್ಯು ನೀರು ಬಿಡಲು ಆದೇಶ; ಕಾವೇರಿ ನದಿಗೆ ಇಳಿದು ರೈತ ಮುಖಂಡರು ಪ್ರತಿಭಟನೆ
‘ಕೆಆರ್‌ಎಸ್ ಅಣೆಕಟ್ಟೆಗೆ ಕಾವೇರಿ ನೀರಿನ ಒಳಹರಿವು ಶೂನ್ಯಕ್ಕೆ ತಲುಪಿದೆ. ಕೆಆರ್‌ಎಸ್, ಕಬಿನಿಯಿಂದ ನೈಸರ್ಗಿಕವಾಗಿ 815 ಕ್ಯುಸೆಕ್ ನೀರು ಹರಿದು ಹೋಗುತ್ತಿದ್ದು, ರಾಜ್ಯದ ಕಾವೇರಿ ಕೊಳ್ಳದಲ್ಲಿ 51 ಟಿಎಂಸಿ ನೀರು ಮಾತ್ರ ಲಭ್ಯವಿದೆ. ಹೀಗಾಗಿ ಕುಡಿಯುವ ನೀರನ್ನು ನಾವು ರಕ್ಷಿಸಿಕೊಳ್ಳಬೇಕು. ತಮಿಳುನಾಡಿಗೆ ನೀರು ಬಿಡುವ ಶಕ್ತಿ ನಮ್ಮಲ್ಲಿ ಇಲ್ಲ’ ಎಂದು ಸ್ಪಷ್ಟಪಡಿಸಿದರು.
ಇನ್ನೇನಿದ್ದರೂ ದೇವರ ಮೊರೆ ಹೋಗೋಣ. ಮಳೆ ಬೀಳಲಿ, ನೀರು ಕೆಳಗಡೆಗೆ ಹರಿಯಲಿ. ಈಗ ನಮ್ಮ ಬಳಿಯಂತೂ ನೀರಿಲ್ಲ ಎಂದರು.
ನಾನು ಹೋರಾಟ ಶುರು ಮಾಡಿದಾಗ ನೀವು ಯಾರೂ ಹುಟ್ಟೇ ಇರಲಿಲ್ಲ: ಕಮಿಷನರ್ ವಿರುದ್ಧ ವಾಟಾಳ್ ಗರಂ!
ಕಾವೇರಿ ನೀರಿನ ವಿಚಾರವಾಗಿ 89 ನೇ ಸಭೆ ನಡೆಸಿದ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ನ.1 ರಿಂದ ಮುಂದಿನ 15 ದಿನಗಳ ಕಾಲ ನಿತ್ಯ 2,600 ಕ್ಯುಸೆಕ್ ನೀರನ್ನು ತಮಿಳುನಾಡಿಗೆ ಹರಿಸಲು ಶಿಫಾರಸು ಮಾಡಿದೆ.