ವಾಲ್ಮೀಕಿ ನಿಗಮ ಅಕ್ರಮ ಕೇಸ್‌ ಸಿಬಿಐಗಿಲ್ಲ: ಮಹತ್ವದ ತೀರ್ಪು ನೀಡಿದ ಹೈಕೋರ್ಟ್

By Kannadaprabha News  |  First Published Nov 14, 2024, 8:34 AM IST

ರಾಜ್ಯ ಸರ್ಕಾರ ವಾಲ್ಮೀಕಿ ಪ್ರಕರಣದ ತನಿಖೆಗೆ ರಚಿಸಿರುವ ಎಸ್‌ಐಟಿಯು ನ್ಯಾಯಯುತ ತನಿಖೆ ನಡೆಸುವುದಿಲ್ಲ. ಹಾಗಾಗಿ, ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ಯೂನಿಯನ್ ಬ್ಯಾಂಕ್ ಪರ ಅಟಾರ್ನಿ ಜನರಲ್ ಅವರು ವಾದ ಮಂಡಿಸಿದ್ದರು.


ಬೆಂಗಳೂರು(ನ.14):  ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಕೋಟ್ಯಂತರ ರುಪಾಯಿ ಅಕ್ರಮ ವರ್ಗಾವಣೆ ಹಗರಣವನ್ನು ಕೇಂದ್ರ ತನಿಖಾ ಸಂಸ್ಥೆಯ (ಸಿಬಿಐ) ತನಿಖೆಗೆ ವಹಿಸುವಂತೆ ಕೋರಿ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. 

ಇದೇ ವೇಳೆ ರಾಜ್ಯದ ತನಿಖಾ ಸಂಸ್ಥೆಯು ಹಗರಣದಿಂದ ಕೈ ಬಿಟ್ಟಿರುವ ಬ್ಯಾಂಕಿನ ವ್ಯಕ್ತಿಗಳನ್ನು ಸಿಬಿಐ ತನಿಖೆಗೊಳಪಡಿಸಬಹುದು ಎಂದು ನ್ಯಾಯಪೀಠ ಸ್ಪಷ್ಟಪಡಿಸಿದೆ.  ಈ ಕುರಿತಂತೆ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಸಲ್ಲಿಸಿದ್ದ ಅರ್ಜಿ ವಿಚಾರಣೆ ಪೂರ್ಣಗೊಳಿಸಿ ಸೆ.30ರಂದು ಕಾಯ್ದಿರಿಸಿದ್ದ ತೀರ್ಪನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಪೀಠ ಬುಧವಾರ ಪ್ರಕಟಿಸಿದೆ. 

Tap to resize

Latest Videos

undefined

ಕೊಪ್ಪಳ: ಅಸ್ಪೃಶ್ಯತೆ ಕೇಸ್‌, ಜೀವಾವಧಿಗೆ ಗುರಿಯಾದ 98 ಮಂದಿಗೆ ಸಿಕ್ತು ಬೇಲ್‌!

ಬ್ಯಾಂಕಿಂಗ್ ನಿಬಂಧನೆಗಳ ಕಾಯ್ದೆ-1949ರ ಸೆಕ್ಷನ್ 35ಎ ಪ್ರಕಾರ, ಬ್ಯಾಂಕ್ ವ್ಯವಹಾರಗಳ ಕುರಿತು ಯಾವುದೇ ಬ್ಯಾಂಕ್‌ಗಳಿಗೆ ಕಾಲಕಾಲಕ್ಕೆ ನಿರ್ದೇಶನ ನೀಡುವ ಅಧಿಕಾರವನ್ನು ಭಾರತೀಯ ರಿಸರ್ವ್ ಬ್ಯಾಂಕ್ (ಆರ್ ಬಿಐ) ಹೊಂದಿದೆ. ಆ ಸೆಕ್ಷನ್‌ ಅನ್ವಯ ಬ್ಯಾಂಕ್ ವ್ಯವಹಾರಗಳಲ್ಲಿ ನಡೆದಿರುವ ವಂಚನೆ ಹಾಗೂ ಅಕ್ರಮದ ಬಗ್ಗೆ ಸಿಬಿಐನಂತಹ ಸ್ವತಂತ್ರ ಸಂಸ್ಥೆಯ ತನಿಖೆಗೆ ವಹಿಸಲು ಕೋರಬಹುದಾಗಿದೆ. 

ಬ್ಯಾಂಕಿಂಗ್ ವ್ಯವಹಾರದಲ್ಲಿ ₹50 ಕೋಟಿಗೂ ಅಧಿಕ ಅಕ್ರಮ ವ್ಯವಹಾರ ನಡೆದ ಪಕ್ಷದಲ್ಲಿ ಅಂತಹ ಪ್ರಕರಣವನ್ನು ಸಿಬಿಐಗೆ ವಹಿಸಬಹುದಾಗಿದೆ. ಹಗರಣದಲ್ಲಿ ವಾಲ್ಮೀಕಿ ನಿಗಮದ ವ್ಯವಸ್ಥಾಪಕ ನಿರ್ದೇಶಕರು, ಉನ್ನತ ಶ್ರೇಣಿಯ ಅಧಿಕಾರಿಗಳು ಮತ್ತು ನಿಗಮದ ಅಧ್ಯಕ್ಷರು, ಶಾಸಕರು ಭಾಗಿಯಾಗಿದ್ದಾರೆ. ರಾಜ್ಯ ಸರ್ಕಾರ ವಾಲ್ಮೀಕಿ ಪ್ರಕರಣದ ತನಿಖೆಗೆ ರಚಿಸಿರುವ ಎಸ್‌ಐಟಿಯು ನ್ಯಾಯಯುತ ತನಿಖೆ ನಡೆಸುವುದಿಲ್ಲ. ಹಾಗಾಗಿ, ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ಯೂನಿಯನ್ ಬ್ಯಾಂಕ್ ಪರ ಅಟಾರ್ನಿ ಜನರಲ್ ಅವರು ವಾದ ಮಂಡಿಸಿದ್ದರು.

ಜಡ್ಜ್‌ ಅವಹೇಳನ: ವಕೀಲ ಮೇಲಿನ ಕೇಸ್‌ ರದ್ದತಿಗೆ ಹೈಕೋರ್ಟ್‌ ನಕಾರ

ಆಘಾತ ತರಿಸಿದೆ 

ಇದೀಗ ಹೈಕೋರ್ಟ್, ಅಟಾರ್ನಿ ಜನರಲ್ ಸೆಕ್ಷನ್ 35ಎ ಅನ್ನು ವ್ಯಾಖ್ಯಾನ ಮಾಡಿರುವುದು ಒಪ್ಪಲಾಗದು. ಸೆಕ್ಷನ್ 35ಎ ಕೇವಲ ಬ್ಯಾಂಕಿಂಗ್‌ ಸಂಸ್ಥೆಗಳ ವ್ಯವಹಾರಗಳನ್ನು ಸಂಪೂರ್ಣವಾಗಿ ನಿಯಂತ್ರಿಸುವ ಮತ್ತು ಮೇಲ್ವಿಚಾರಣೆ ನಡೆಸು ವುದಕ್ಕೆ ಸಂಬಂಧಿಸಿರುತ್ತದೆ. ಬ್ಯಾಂಕಿಂಗ್‌ ಸಂಸ್ಥೆಗೆ ತನಿಖೆಯನ್ನು ಸಿಬಿಐ ಕೈಗೆ ವರ್ಗಾಯಿಸಲು ಅನುಮತಿ ನೀಡಿದರೆ, ಅದು ಸೆಕ್ಷನ್ 35ಎಗೆ ಶಾಸನ ನೀಡದ ಅಧಿಕಾರವನ್ನು ನೀಡಿದಂತಾಗುತ್ತದೆ. 

ವಾಲ್ಮೀಕಿ ಹಗರಣದ ಕುರಿತು ದೂರು ದಾಖ ಲಾದ ಸಂದರ್ಭದಲ್ಲಿ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ಕೆಲ ಅಧಿಕಾರಿಗಳು ಆರೋ ಪಿಗಳಾಗಿದ್ದರು ಎಂಬ ಕಾರಣಕ್ಕೆ ಹಗ ರಣವನ್ನು ಸಿಬಿಐಗೆ ವಹಿಸುವಂತೆ ಬ್ಯಾಂಕ್ ಕೋರಿದೆ.

click me!