
ಬೆಂಗಳೂರು(ಅ.22): ದೇಶದಲ್ಲಿ ರಾಜಕಾರಣಿ ವಿರುದ್ದ ಅಕ್ರಮ ಆಸ್ತಿ ಸಂಪಾದನೆ ಪ್ರಕರಣವನ್ನು ಸಿಬಿಐ ತನಿಖೆ ಮಾಡುತ್ತಿದ್ದರೆ ಅದು ನನ್ನ ಪ್ರಕರಣಮಾತ್ರ. ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ `ನನ್ನ ವಿರುದ್ಧ ದ್ವೇಷದ ರಾಜಕಾರಣ ಮಾಡಲಾಗುತ್ತಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಬಿಐ ನನ್ನ ವಿರುದ್ಧ ಬಹಳ ಗಂಭೀರವಾಗಿದೆ. ದೇಶದಲ್ಲಿ ರಾಜಕಾರಣಿ ವಿರುದ್ಧ ಅಕ್ರಮ ಆಸ್ತಿ ಗಳಿಕೆಗೆ ಸಂಬಂಧಿಸಿದ ಪ್ರಕರಣವನ್ನು ಸಿಬಿಐ ತನಿಖೆ ನಡೆಸುತ್ತಿದ್ದರೆ ಅದು ನನ್ನ ವಿರುದ್ದ ಮಾತ್ರ. ಇದು ರಾಜಕೀಯವಲ್ಲದೇ ಮತ್ತೇನು ಅಲ್ಲ. ರಾಜ್ಯ ಸರ್ಕಾರ ನನ್ನ ವಿರುದ್ಧ ಸಿಬಿಐ ವಿಚಾರಣೆಯನ್ನು ಹಿಂಪಡೆದಿದ್ದನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್‌ಗೆ ಹೋಗಲಾಗಿದೆ. ನನಗೆ ನ್ಯಾಯಾಂಗ ವ್ಯವಸ್ಥೆ ಮೇಲೆ ನಂಬಿಕೆಯಿದ್ದು, ನ್ಯಾಯಪೀಠದಿಂದ ಅನ್ಯಾಯ ಅಗುವುದಿಲ್ಲ ಎಂದರು.
ಸಿಬಿಐಗೆ ನನ್ನ ಮೇಲೆ ಬಹಳ ಪ್ರೀತಿಯಿದೆ. ಹೀಗಾಗಿ ನನ್ನನ್ನು ಬಿಡುತ್ತಿಲ್ಲ. ಈಗಾಗಲೇ ರಾಜ್ಯ ಹೈಕೋರ್ಟ್ ಸಿಬಿಐ ಮತ್ತು ಬಸನಗೌಡ ಪಾಟೀಲ್ ಯತ್ನಾಳ್ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದೆ. ಈಗ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದಾರೆ. ನನ್ನ ವಿರುದ್ಧ ಸಿಬಿಐ ಈಗಾಗಲೇ ತನಿಖೆ ಮಾಡಿದೆ. ಈಗ ಲೋಕಾಯುಕ್ತ ತನಿಖೆ ಮಾಡುತ್ತಿದೆ. ಈ ಪ್ರಕ್ರಿಯೆ ಇನ್ನೂ 7-8 ವರ್ಷ ನಡೆಯುತ್ತದೆ ಎಂದು ತಿಳಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ