
ಬೆಂಗಳೂರು(ಆ.23): ಅಕ್ರಮ ಆಸ್ತಿ ಗಳಿಕೆ ಪ್ರಕರಣ ಸಂಬಂಧ ಗುರುವಾರ ಲೋಕಾಯುಕ್ತ ಪೊಲೀಸರ ವಿಚಾರಣೆ ಎದುರಿಸಿದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, 'ಲೋಕಾಯುಕ್ತ ಪೊಲೀಸರಿಗಿಂತ ಸಿಬಿಐನವರೇ ಮೇಲು. ಇವರಷ್ಟು ಪ್ರಶ್ನೆಗಳನ್ನು ಸಿಬಿಐ ಕೂಡ ಕೇಳಿರಲಿಲ್ಲ' ಎಂದು ಹೇಳಿದ್ದಾರೆ.
ಲೋಕಾಯುಕ್ತ ಪೊಲೀಸರ ವಿಚಾರಣೆ ಎದುರಿಸಿದ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು, 'ಅಕ್ರಮ ಆಸ್ತಿ ಗಳಿಕೆ ಪ್ರಕರಣವನ್ನು ರಾಜ್ಯ ಸರ್ಕಾರ ಸಿಬಿಐನಿಂದ ಲೋಕಾಯುಕ್ತಕ್ಕೆ ವರ್ಗಾವಣೆ ಮಾಡಿತ್ತು. ಆದರೆ, ಸಿಬಿಐನವರು ತನಿಖೆಯನ್ನು ನಿಲ್ಲಿಸದೆ ಮುಂದುವ ರೆಸಿದ್ದಾರೆ. 100ಕ್ಕೂ ಹೆಚ್ಚು ನನ್ನ ಸ್ನೇಹಿತರು, ಕುಟುಂಬಸ್ಥರಿಗೆ ತುಂಬಾ ಕಿರುಕುಳ ನೀಡುತ್ತಿದ್ದಾರೆ. ಇದೇ ಕೆಲಸವನ್ನು ಲೋಕಾಯುಕ್ತ ಕೂಡ ಮುಂದುವರೆಸಿದ್ದು, ಅವರಿಂದಲೂ ಕಿರುಕುಳ ಆಗುತ್ತಿದೆ' ಎಂದು ತಿಳಿಸಿದರು.
ಬೆಂಗಳೂರು: ಆದಾಯ ಮೀರಿ ಶೇ.488% ಆಸ್ತಿ ಕೇಸ್ ರದ್ದತಿಗೆ ಒಪ್ಪದ ಕೋರ್ಟ್
'ಲೋಕಾಯುಕ್ತ ಕಳೆದ ಆರು ತಿಂಗಳಿನಿಂದ ತನಿಖೆ ನಡೆಸುತ್ತಿದ್ದು, ಇವರಿಗಿಂತ ಸಿಬಿಐ ನವರೇ ಪರವಾಗಿಲ್ಲ. ಲೋಕಾಯುಕ್ತ ಪೊಲೀಸರು ವಿಚಿತ್ರ ಪ್ರಶ್ನೆಗಳನ್ನು ಕೇಳುತ್ತಿದ್ದಾರೆ. ಸಿಬಿಐನವರೇ ಇನ್ನು ನನಗೆ ಪ್ರಶ್ನೆಗಳನ್ನೇ ಕೇಳಿಲ್ಲ. ಒಂದು ದಿನವೂ ವಿಚಾರಣೆಗೆ ಕರೆಯಲಿಲ್ಲ. ಲೋಕಾಯುಕ್ತ ಪೊಲೀಸರ ಪ್ರಶ್ನೆಗಳಿಗೆ ಉತ್ತರಗಳನ್ನು ಕೊಟ್ಟಿದ್ದೇನೆ. ಅಲ್ಲದೇ, ಕೆಲವು ಪೂರಕವಾದ ದಾಖಲೆಗಳನ್ನು ಸಲ್ಲಿಸುತ್ತೇನೆ' ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ