ಡಿಕೆಶಿಗೆ ಮತ್ತೆ ಸಂಕಷ್ಟ, ರಾಜ್ಯ ಸರ್ಕಾರದ ಆದೇಶದ ವಿರುದ್ಧ ಹೈಕೋರ್ಟ್ ಮೆಟ್ಟಲೇರಿದ ಸಿಬಿಐ

By Gowthami KFirst Published Jan 5, 2024, 2:18 PM IST
Highlights

ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿಕೆ ಶಿವಕುಮಾರ್‌ ಅವರಿಗೆ  ಮತ್ತೆ ಸಂಕಷ್ಟ ಎದುರಾಗಿದೆ. ಪ್ರಕರಣದ ಸಂಬಂಧ ರಾಜ್ಯ ಸರ್ಕಾರದ ಆದೇಶದ ವಿರುದ್ಧ ಸಿಬಿಐ ಹೈಕೋರ್ಟ್ ಮೆಟ್ಟಿಲೇರಿದೆ.

ಬೆಂಗಳೂರು (ಜ.5): ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿಕೆ ಶಿವಕುಮಾರ್‌ ಅವರಿಗೆ  ಮತ್ತೆ ಸಂಕಷ್ಟ ಎದುರಾಗಿದೆ. ಪ್ರಕರಣದ ಸಂಬಂಧ ರಾಜ್ಯ ಸರ್ಕಾರದ ಆದೇಶದ ವಿರುದ್ಧ ಸಿಬಿಐ ಹೈಕೋರ್ಟ್ ಮೆಟ್ಟಿಲೇರಿದೆ. ಡಿಕೆಶಿ ವಿರುದ್ಧದ ಕೇಸ್‌ ಅನ್ನು ಲೋಕಾಯುಕ್ತಕ್ಕೆ ತನಿಖೆ ನಡೆಸಲು ರಾಜ್ಯ ಸರ್ಕಾರ ಮಾಡಿದ್ದ ಆದೇಶ ಪ್ರಶ್ನಿಸಿ ಸಿಬಿಐ ಅರ್ಜಿ  ಸಲ್ಲಿಸಿದೆ. ಕ್ಯಾಬಿನೆಟ್ ಆದೇಶದ ಮೇರೆಗೆ ಡಿಕೆಶಿ ಪ್ರಕರಣ ರಾಜ್ಯ ಸರ್ಕಾರ ಲೋಕಾಯುಕ್ತಕ್ಕೆ‌ ನೀಡಿತ್ತು.

ಡಿ.22 ರಂದು ಲೋಕಾಯುಕ್ತ ತನಿಖೆಗೆ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು. ಆದೇಶ ಪ್ರತಿ ಪಡೆದು ರಾಜ್ಯ ಸರ್ಕಾರದ ಆದೇಶ ಪ್ರಶ್ನಿಸಿ ಸಿಬಿಐ ಹೈಕೋರ್ಟ್ ಮೆಟ್ಟಿಲೇರಿದೆ. ಇಂದು ಹೈಕೋರ್ಟ್ ಏಕಸದಸ್ಯ ಪೀಠದಲ್ಲಿ ವಿಚಾರಣೆ ಬರುವ ಸಾಧ್ಯತೆ ಇದೆ. ಇಂದು ಯತ್ನಾಳ್ ಸಲ್ಲಿಸಿದ್ದ ಅರ್ಜಿ ಕೂಡ ವಿಚಾರಣೆಗೆ ಬರಲಿದೆ. ಇದೇ‌ ವೇಳೆ ಸಿಬಿಐ ಅರ್ಜಿ ಕೂಡ ವಿಚಾರಣೆಗೆ ಬರುವ ಸಾಧ್ಯತೆ ಇದೆ.
 

click me!