ವಾಲ್ಮೀಕಿ ನಿಗಮ ಕೇಸಿಗೆ ಈಗ ಸಿಬಿಐ ಪ್ರವೇಶ: 5 ಮಂದಿ ವಿರುದ್ಧ ಎಫ್‌ಐಆ‌ರ್

By Kannadaprabha News  |  First Published Jun 6, 2024, 9:48 AM IST

ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಕೋಟ್ಯಂತರ ರು. ಅಕ್ರಮ ವರ್ಗಾವಣೆ ಪ್ರಕರಣ ಸಂಬಂಧ ತನಿಖೆಗೆ ಸಿಬಿಐ ಪ್ರವೇಶಿಸಿದ್ದು, ರಾಜ್ಯ ಸರ್ಕಾರಕ್ಕೆ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ.


ಬೆಂಗಳೂರು (ಜೂ.06): ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಕೋಟ್ಯಂತರ ರು. ಅಕ್ರಮ ವರ್ಗಾವಣೆ ಪ್ರಕರಣ ಸಂಬಂಧ ತನಿಖೆಗೆ ಸಿಬಿಐ ಪ್ರವೇಶಿಸಿದ್ದು, ರಾಜ್ಯ ಸರ್ಕಾರಕ್ಕೆ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಯೂನಿಯನ್ ಂಕ್‌ನ ಅಧಿಕಾರಿಗಳು ಸೇರಿ ಐವರ ವಿರುದ್ಧ ಸಿಬಿಐ ಎಫ್‌ಐಆ‌ರ್ ದಾಖಲಿಸಿಕೊಂಡು ತನಿಖೆ ಪ್ರಾರಂಭಿಸಿದೆ. ಪ್ರಕರಣದ ತನಿಖೆಯನ್ನು ಸಿಬಿಐ ತೆಗೆದುಕೊಂಡಿರುವುದರಿಂದ ರಾಜ್ಯ ಸರ್ಕಾರ ಎಸ್‌ಐಟಿ ತನಿಖೆ ಸ್ಥಗಿತಗೊಳ್ಳಲಿದೆ. 

ಏಕಕಾಲಕ್ಕೆ ಎರಡು ತಂಡಗಳು ತನಿಖೆ ನಡೆಸುವುದು ಸಾಧ್ಯವಾಗುವುದಿಲ್ಲ. ಕೇಂದ್ರ ತನಿಖಾ ಸಂಸ್ಥೆ ಪ್ರಕರಣದಲ್ಲಿ ಪ್ರವೇಶಿಸಿರುವುದರಿಂದ ರಾಜ್ಯ ಸರ್ಕಾರದ ತನಿಖಾ ಸಂಸ್ಥೆಯ ತನಿಖೆ ಸ್ಥಗಿತವಾಗಲಿದೆ.  ನಗರದ ಎಂ.ಜಿ.ರಸ್ತೆ ಶಾಖೆಯ ಉಪ ಪ್ರಧಾನ ವ್ಯವಸ್ಥಾಪಕ ಜೆ.ಮಹೇಶ್ ನೀಡಿರುವ ದೂರಿನನ್ವಯ ಸಿಬಿಐ ಎಫ್‌ಐಆರ್ ದಾಖಲಿಸಿಕೊಂಡು ತನಿಖೆಯನ್ನು ಕೈಗೊಂಡಿದೆ. ಪ್ರಕರಣ ಸಂಬಂಧ  ಅಮಾನತುಗೊಂಡಿರುವ ಯೂನಿಯನ್ ಬ್ಯಾಂಕ್ ಅಧಿಕಾರಿಗಳಾದ ಸುಚಿಸ್ಮಿತಾ ರೌಲ್, ಡಿ.ದೀಪಾ, ಕೆ.ವಿ.ಕೃಷ್ಣಮೂರ್ತಿ ಹಾಗೂ ಇಬ್ಬರು ಖಾಸಗಿ ವ್ಯಕ್ತಿಗಳ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.  

Tap to resize

Latest Videos

ಆರೋಪಿತರು  ಖಾತೆಗಳಿಂದ ಅಕ್ರಮ ಹಣ ವರ್ಗಾವಣೆ ಮಾಡುವ, ಮೊತ್ತವನ್ನು ಹಿಂತೆಗೆದುಕೊಳ್ಳುವ ಮೂಲಕ ವಂಚಿಸಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಮಹೇಶ್ ನೀಡಿರುವ ದೂರಿನ ಮೇರೆಗೆ ಸಿಬಿಐ ಪೊಲೀಸ್ ವರಿಷ್ಠಾಧಿಕಾರಿ ಅಮಿತ್‌ ಕುಮಾರ್‌ವಾಂಗೇ‌ ತನಿಖೆಯನ್ನು ಕೈಗೆತ್ತಿಗೊಂಡಿದ್ದಾರೆ.  ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ 187 ಕೋಟಿ ರು. ಪೈಕಿ 88 ಕೋಟಿ ರು. ಅವ್ಯವಹಾರ ನಡೆದಿರುವ ಬಗ್ಗೆ ನಿಗಮದ ಅಧಿಕಾರಿಯಾಗಿದ್ದ ಚಂದ್ರಶೇಖರ್ ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ಡೆತ್ ನೋಟ್ ಬರೆದಿಟ್ಟಿದ್ದರು. 

ಪದತ್ಯಾಗ ಮಾಡಲು ಸಿಎಂ ಸಿದ್ದು ಸೂಚನೆ ಹಿನ್ನೆಲೆ: ಸಚಿವ ಬಿ.ನಾಗೇಂದ್ರ ಇಂದೇ ರಾಜೀನಾಮೆ?

ಇದರಲ್ಲಿ ಅಧಿಕಾರಿಗಳ ಹೆಸರನ್ನು ಉಲ್ಲೇಖಿಸಿದ್ದರು. ಬ್ಯಾಂಕ್‌ಗೆ ತೆರಳಿ ಸಿಬಿಐ ಅಧಿಕಾರಿಗಳು ಮಾಹಿತಿ ಪಡೆದುಕೊಂಡಿದ್ದಾರೆ. ಪ್ರಕರಣದಲ್ಲಿ ಭಾಗಿಯಾದ ರಾಜ್ಯ ಸರ್ಕಾರದ ಅಧಿಕಾರಿಗಳನ್ನು ಸಹ ತನಿಖೆಗೊಳಪಡಿ ಸಲಾಗುತ್ತದೆ. ತನಿಖೆಗೆ ಸಂಬಂಧಪಟ್ಟವರನ್ನು ಹೆಚ್ಚಿನ ವಿಚಾರಣೆಗೊಳಪಡಿಸಿ ಅಗತ್ಯ ಮಾಹಿತಿಯನ್ನು ಕ್ರೋಡೀಕರಿಸುವ ನಿರೀಕ್ಷೆ ಇದೆ. ಅಲ್ಲದೇ, ಚಂದ್ರಶೇಖರ್ ಡೆತ್‌ಟ್‌ನಲ್ಲಿ ಸಚಿವ ಎಂದು ಉಲ್ಲೇಖವಾಗಿರುವು ದರಿಂದ ಸಚಿವ ನಾಗೇಂದ್ರ ಅವರನ್ನು ಸಹ ಸಿಬಿಐ ತನಿಖೆಗೊಳಪಡಿಸಲಾಗುವುದು. ಮೇಲ್ನೋಟಕ್ಕೆ ನಾಗೇಂದ್ರ ಪಾತ್ರ ಇರುವುದು ಕಂಡುಬಂದರೆ ಸರ್ಕಾರ ಸಂಕಷ್ಟಕ್ಕೆ ಸಿಲುಕುವ ಸಾಧ್ಯತೆ ಇದೆ ಎನ್ನಲಾಗಿದೆ.

click me!