ಸಿಬಿಐ ತನಿಖೆ: ಡಿ.ಕೆ.ಶಿವಕುಮಾರ್‌ ಕೇಸ್ ತೀರ್ಪು ಇಂದು: ಸರ್ಕಾರದ ವಿರುದ್ಧ ಶಾಸಕ ಯತ್ನಾಳ ಕೋರ್ಟ್‌ಗೆ!

By Kannadaprabha News  |  First Published Aug 29, 2024, 8:34 AM IST

ಅರ್ಜಿಗಳ ಕುರಿತು ವಿಚಾರಣೆ ಪೂರ್ಣಗೊಳಿಸಿ ಕಾಯ್ದಿಸಿರುವ ತೀರ್ಪನ್ನು ಹಿರಿಯ ನ್ಯಾಯಮೂರ್ತಿ ಕೆ.ಸೋಮಶೇಖರ್ ಮತ್ತು ನ್ಯಾಯಮೂರ್ತಿ ಉಮೇಶ್ ಎಂ. ಅಡಿಗ ಅವರನ್ನು ಒಳಗೊಂಡಿರುವ ವಿಭಾಗೀಯ ಪೀಠ ಗುರುವಾರ ಸಂಜೆ 4.30ಕ್ಕೆ ಪ್ರಕಟಿಸಲಿದೆ.


ಬೆಂಗಳೂರು (ಆ.29): ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ವಿರುದ್ಧದ ಆದಾಯ ಮೀರಿದ ಆಸ್ತಿ ಗಳಿಕೆ ಪ್ರಕರಣದ ತನಿಖೆ ನಡೆಸಲು ಕೇಂದ್ರ ತನಿಖಾ ಸಂಸ್ಥೆಗೆ (ಸಿಬಿಐ) ಹಿಂದಿನ ಬಿಜೆಪಿ ಸರ್ಕಾರ ನೀಡಿದ್ದ ಅನುಮತಿ ಹಿಂಪಡೆದ ಕಾಂಗ್ರೆಸ್ ಸರ್ಕಾರದ ಆದೇಶ ಪ್ರಶ್ನಿಸಿ ಸಿಬಿಐ ಮತ್ತು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಸಲ್ಲಿಸಿರುವ ಅರ್ಜಿಗಳ ಕುರಿತ ತೀರ್ಪನ್ನು ಹೈಕೋರ್ಟ್ ಗುರುವಾರ ಪ್ರಕಟಿಸಲಿದೆ. 

ಅರ್ಜಿಗಳ ಕುರಿತು ವಿಚಾರಣೆ ಪೂರ್ಣಗೊಳಿಸಿ ಕಾಯ್ದಿಸಿರುವ ತೀರ್ಪನ್ನು ಹಿರಿಯ ನ್ಯಾಯಮೂರ್ತಿ ಕೆ.ಸೋಮಶೇಖರ್ ಮತ್ತು ನ್ಯಾಯಮೂರ್ತಿ ಉಮೇಶ್ ಎಂ. ಅಡಿಗ ಅವರನ್ನು ಒಳಗೊಂಡಿರುವ ವಿಭಾಗೀಯ ಪೀಠ ಗುರುವಾರ ಸಂಜೆ 4.30ಕ್ಕೆ ಪ್ರಕಟಿಸಲಿದೆ.

Tap to resize

Latest Videos

ಪ್ರಕರಣದ ಹಿನ್ನೆಲೆ: ಆದಾಯ ಮೀರಿ ಆಸ್ತಿ ಗಳಿಕೆ ಆರೋಪ ಸಂಬಂಧ ಸಿಬಿಐ ತನಿಖೆಗೆ ಅನುಮತಿ ನೀಡಿ ಹಿಂದಿನ ಬಿಜೆಪಿ 20220 ರಾಜ್ಯ ಸರ್ಕಾರ ಸೆ.25ರಂದು ಆದೇಶಿಸಿತ್ತು. ಈ ಆದೇಶರದ್ದತಿ ಕೋರಿ ಶಿವಕುಮಾರ್‌ ಸಲ್ಲಿಸಿದ್ದ ತಕರಾರು ಅರ್ಜಿಯನ್ನು 2023ರಏ.20ರಂದುಹೈ ಕೋರ್ಟ್ ಏಕಸದಸ್ಯ ನ್ಯಾಯಪೀಠ ವಜಾಗೊಳಿಸಿತ್ತು. ಈ ತೀರ್ಪನ್ನು ಪ್ರಶ್ನಿಸಿ ಶಿವಕುಮಾರ್‌ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿದ್ದರು. ಏಕ ಸದಸ್ಯ ನ್ಯಾಯಪೀಠದ ಆದೇಶ ಮತ್ತು ಸಿಬಿಐ ತನಿಖೆಗೆ ವಿಭಾಗೀಯ ಪೀಠ ತಡೆ ನೀಡಿತ್ತು. 

ರಾಜಾತಿಥ್ಯ ಪ್ರಕರಣ: ಬಳ್ಳಾರಿ ಸೆಂಟ್ರಲ್ ಜೈಲಿಗೆ ಇಂದು ದರ್ಶನ್‌ ಸ್ಥಳಾಂತರ?

ಈ ಮಧ್ಯೆ ಹಾಲಿ ಕಾಂಗ್ರೆಸ್ ಸರ್ಕಾರ, ಸಿಬಿಐ ತನಿಖೆಗೆ ಅನುಮತಿಯನ್ನು ನ.28ರಂದು ತನಿಖೆಯನ್ನು ನೀಡಿದ್ದ 2023 ಹಿಂಪಡೆದು ಲೋಕಾಯುಕ್ತ ಪೊಲೀಸರಿಗೆ ವಹಿಸಿತ್ತು. ಅದನ್ನು ಪ್ರಶ್ನಿಸಿ ಸಿಬಿಐ ಮತ್ತು ಯತ್ನಾಳ ಹೈಕೋರ್ಟ್‌ ಅರ್ಜಿ ಸಲ್ಲಿಸಿದ್ದರು. ಕಳೆದ ಆ.12ರಂದು ಪ್ರಕರಣದ ವಿಚಾರಣೆ ಪೂರ್ಣಗೊಳಿಸಿದ್ದ ವಿಭಾಗೀಯ ಪೀಠ ತೀರ್ಪು ಕಾಯ್ದಿರಿಸಿತ್ತು.

click me!