ಬೈ ಎಲೆಕ್ಷನ್ ಭರಾಟೆಯ ಮಧ್ಯೆ ಸಿಬಿಐ ದಿಢೀರ್ ದಾಳಿ..!

Published : Nov 15, 2019, 08:01 PM ISTUpdated : Nov 15, 2019, 08:10 PM IST
ಬೈ ಎಲೆಕ್ಷನ್ ಭರಾಟೆಯ ಮಧ್ಯೆ ಸಿಬಿಐ ದಿಢೀರ್ ದಾಳಿ..!

ಸಾರಾಂಶ

ರಾಜ್ಯದಲ್ಲಿ 15 ಕ್ಷೇತ್ರಗಳ ಉಪಚುನಾವಣೆ ಕಣಗಳು ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಕಾಂಗ್ರೆಸ್ ಮತ್ತು ಜೆಡಿಎಸ್ ಅಭ್ಯರ್ಥಿಗಳು ಮತದಾರರನ್ನು ಸೆಳೆಯಲು ನಾನಾ ಕಸರತ್ತು ನಡೆಸುತ್ತಿದ್ದಾರೆ. ಈ ಮಿನಿ ಸಮರದ ಭರಾಟೆ ಮಧ್ಯೆ ಸಿಬಿಐ ದಾಳಿಯಾಗಿದೆ. 

ಬೆಂಗಳೂರು(ನ.15): ಬೆಂಗಳೂರಿನ ಇಂದಿರಾನಗರದಲ್ಲಿರವ ಪ್ರತಿಷ್ಠಿತ ಅಮ್ನೆಸ್ಟಿ ಇಂಟರ್‌ನ್ಯಾಷನಲ್‌ ಇಂಡಿಯಾ ಸಂಸ್ಥೆಯ ಕಚೇರಿ ಮೇಲೆ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದಾರೆ. 

ವಿದೇಶಿ ಕೊಡುಗೆಗಳ ನಿಯಂತ್ರಣ ಕಾಯ್ದೆ(FCRA) ಉಲ್ಲಂಘಿಸಿ ಅಮ್ನೆಷ್ಟಿ ಸಂಸ್ಥೆ ಭಾರೀ ಮೊತ್ತದ ದೇಣಿಗೆ ಸಂಗ್ರಹಿಸಿದೆ ಎಂಬ ಆರೋಪ ಕೇಳಿ ಬಂದಿತ್ತು. ಈ ಸಂಬಂಧ ಇಂದು [ಶುಕ್ರವಾರ] ಸಿಬಿಐ ದಿಢೀರ್​​ ಅಮ್ನೆಸ್ಟಿ ಸಂಸ್ಥೆ ಮೇಲೆ ದಾಳಿ ನಡೆಸಿ ಕಡತಗಳ ಪರಿಶೀಲನೆ ನಡೆಸುತ್ತಿದೆ. ಕೇವಲ ಬೆಂಗಳೂರಿನಲ್ಲಿ ಮಾತ್ರವಲ್ಲದೇ ದೆಹಲಿಯಲ್ಲಿರುವ ಆಮ್ನೆಸ್ಟಿ ಇಂಟರ್ ನ್ಯಾಷನಲ್ ಕಂಪನಿ ಮೇಲೂ ದಾಳಿಯಾಗಿದೆ.

ಮಯಾಂಕ್ ಅಗರ್ವಾಲ್ ದ್ವಿಶತಕ, JDS ಗೆಲ್ಲದಂತೆ ಕೈ ತಂತ್ರ; ನ.15ರ ಟಾಪ್ 10 ಸುದ್ದಿ!

ಕಳೆದ ವರ್ಷ ಅಕ್ಟೋಬರ್​​​ 25ನೇ ತಾರೀಕಿನಂದು ಜಾರಿ ನಿರ್ದೇಶನಾಲಯ ಅಮ್ನೆಸ್ಟಿ ಸಂಸ್ಥೆಯ ಕಚೇರಿ ಮೇಲೆ ದಾಳಿ ನಡೆಸಿತ್ತು. ತನಿಖೆ ನಡೆಸುತ್ತಿದ್ದ ಮಧ್ಯದಲ್ಲೇ ಇಡಿ ಅಧಿಕೃತ ಪತ್ರಿಕಾ ಪ್ರಕಟಣೆ ಹೊರಿಡಿಸಿತ್ತು.

ವಿದೇಶಿ ಕೊಡುಗೆಗಳ ನಿಯಂತ್ರಣ ಕಾಯ್ದೆ ಉಲ್ಲಂಘಿಸಿರುವ ಅಮ್ನೆಷ್ಟಿ ಸಂಸ್ಥೆ ಭಾರೀ ಮೊತ್ತದ ದೇಣಿಗೆ ಸಂಗ್ರಹಿಸಿದೆ ಎಂದು ಆರೋಪಿಸಿತ್ತು. ಇಡಿ ಕೊಟ್ಟ ದೂರಿನ ಮೇರೆಗೆ ಸಿಬಿಐ ಕೇಸ್ ದಾಖಲಿಸಿಕೊಂಡಿತ್ತು.

ಅಮ್ನೆಸ್ಟಿ ಸಂಸ್ಥೆಗೆ ಅಕ್ರಮವಾಗಿ ವಿದೇಶದಿಂದ 36 ಕೋಟಿ ಹಣ ವರ್ಗಾವಣೆಯಾಗಿದೆ. ಇದರಲ್ಲಿ 10 ಕೋಟಿಯನ್ನು ದೀರ್ಘಾವಧಿ ಸಾಲವಾಗಿ ಪಡೆಯಲಾಗಿದೆ ಎಂದು ತಿಳಿದುಬಂದಿದೆ.

ಈಗಾಗಲೇ ಅಮ್ನೆಸ್ಟಿಯಲ್ಲಿ ಕೆಲಸ ಮಾಡುತ್ತಿದ್ದ ಕೆಲ ವ್ಯಕ್ತಿಗಳ ಮಾಹಿತಿ ಸಂಗ್ರಹಿಸಿದ್ದು, ಇವರಿಗೆ ಸಂಬಂಧಿಸಿದ ಲ್ಯಾಪ್​ಟಾಪ್​ಗಳನ್ನು ವಶಕ್ಕೆ ಪಡೆದು ಪರಿಶೀಲನೆ ನಡೆಸಿದೆ. ಆದ್ರೆ, ದಾಳಿ ವೇಳೆ ಏನೆಲ್ಲಾ ಪತ್ತೆಯಾಗಿದೆ ಎನ್ನುವುದು ಇನ್ನು ಮಾಹಿತಿ ಸಿಕ್ಕಿಲ್ಲ.

ಎಲ್ಲಾ ಪರಿಶೀಲನೆ ಮುಗಿಸಿದ ಬಳಿಕ ಏನೆಲ್ಲಾ ಆಯ್ತು..? ದಾಳಿ ವೇಳೆ ಏನೆಲ್ಲಾ ಸಿಕ್ತು ಎನ್ನುವುದನ್ನು ಸಿಬಿಐ ಪತ್ರಿಕಾ ಪ್ರಕಟಣೆ ಹೊರಡಿಸುವ ಸಾಧ್ಯತೆಗಳಿವೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಬಿಡಿಎ ಸೈಟ್ ತಗೊಂಡ್ರೆ ಚಿಪ್ಪೇ ಗತಿ; ಕೆಂಪೇಗೌಡ ಲೇಔಟ್ ಸೈಟ್ ತಗೊಂಡು 15 ವರ್ಷವಾದ್ರೂ ಸೈಟೂ ಇಲ್ಲ, ಸಾಲನೂ ಸಿಗ್ತಿಲ್ಲ!
ಬಿರಿಯಾನಿ ಹೋಟೆಲ್ ಕುಟುಂಬದ ಸಾಮೂಹಿಕ ಆತ್ಮ*ಹತ್ಯೆ ಕೇಸಿಗೆ ಟ್ವಿಸ್ಟ್; ವಿಷ ಸೇವಿಸದ ಅಜ್ಜಿ ಸತ್ತಿದ್ಹೇಗೆ!