
ಬೆಂಗಳೂರು (ಏ.14): ಸಾಮಾಜಿಕ ಜಾಲತಾಣಗಳಲ್ಲಿ ನಟಿ, ಮಾಜಿ ಸಂಸದೆ ರಮ್ಯಾ ಅವರಿಗೆ ಅಶ್ಲೀಲ ಪದಗಳಿಂದ ನಿಂದನೆ ಪ್ರಕರಣ ಸಂಬಂಧ ತಲೆಮರೆಸಿಕೊಂಡಿರುವ ಕಿಡಿಗೇಡಿಗಳಿಗೆ ಸಿಸಿಬಿ ಸೈಬರ್ ಕ್ರೈಂ ಠಾಣೆ ಪೊಲೀಸರು ಬಲೆ ಬೀಸಿದ್ದಾರೆ.
ಕಳೆದ ವರ್ಷ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ಹಾಗೂ ನಟ ದರ್ಶನ್ ಅವರ ಜಾಮೀನು ವಿಚಾರವಾಗಿ ರಮ್ಯಾ ಅಭಿಪ್ರಾಯ ವ್ಯಕ್ತಪಡಿಸಿದ್ದಕ್ಕೆ ಕೆಲವರು ನಿಂದಿಸಿದ್ದರು. ಈ ಬಗ್ಗೆ ಸೈಬರ್ ಕ್ರೈಂ ಠಾಣೆಗೆ ಪ್ರಕರಣ ದಾಖಲಾಯಿತು. ಆಗ ದರ್ಶನ್ ಅಭಿಮಾನಿಗಳು ಎನ್ನಲಾದ 49 ಜನರ ಪೈಕಿ 14 ಮಂದಿಯನ್ನು ಪೊಲೀಸರು ಬಂಧಿಸಿದ್ದರು.
ಅಲ್ಲದೆ ನಗರದ ಎಸಿಎಂಎಂ ನ್ಯಾಯಾಲಯಕ್ಕೆ 14 ಆರೋಪಿಗಳ ವಿರುದ್ಧ ಆರೋಪ ಪಟ್ಟಿ ಸಲ್ಲಿಸಿದ್ದ ಪೊಲೀಸರು, ಇನ್ನುಳಿದವರನ್ನು ನಾಪತ್ತೆ ಆರೋಪಿಗಳು ಎಂದು ನ್ಯಾಯಾಲಯಕ್ಕೆ ತಿಳಿಸಿದ್ದರು. ಈಗ ನ್ಯಾಯಾಲಯವು, ತಪ್ಪಿಸಿಕೊಂಡಿರುವವರ ಪತ್ತೆಗೆ ಸೂಚಿಸಿತ್ತು. ಅಂತೆಯೇ ಬಾಕಿ ಆರೋಪಿಗಳನ್ನು ಪತ್ತೆ ಹಚ್ಚಿ ತನಿಖೆಗೆ ಪೂರ್ಣಗೊಳಿಸಲು ಸಿಸಿಬಿ ಮತ್ತೆ ಕಾರ್ಯಾಚರಣೆಗಿಳಿದೆ ಎಂದು ತಿಳಿದು ಬಂದಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ