
ಬೆಂಗಳೂರು (ಸೆ.10) : ಅಪ್ರಾಪ್ತರಿಗೆ ಮದ್ಯ ಹಾಗೂ ಸಿಗರೆಟ್ ಮಾರಾಟ ಸೇರಿದಂತೆ ಇತರೆ ನಿಯಮಗಳನ್ನು ಉಲ್ಲಂಘಿಸುತ್ತಿರುವ ದೂರಿನ ಮೇರೆಗೆ ಸಿಸಿಬಿ ಪೊಲೀಸರು ನಗರದ ಸುಮಾರು 700ಕ್ಕೂ ಹೆಚ್ಚು ಪಬ್, ಡಿಸ್ಕೋಥೆಕ್ ಮತ್ತು ಬಾರ್ ಮತ್ತು ರೆಸ್ಟೋರೆಂಟ್‌ಗಳ ಮೇಲೆ ಶುಕ್ರವಾರ ರಾತ್ರಿ ದಿಢೀರ್ ದಾಳಿ ನಡೆಸಿ ಬಿಸಿ ಮುಟ್ಟಿಸಿದ್ದಾರೆ.
ಡ್ರಾಪ್ ಕೊಡುವ ನೆಪದಲ್ಲಿ ಕಾರಿಗೆ ಹತ್ತಿಸಿಕೊಂಡು ನಿರ್ಜನ ಪ್ರದೇಶದಲ್ಲಿ ಸುಲಿಗೆ: ಆರೋಪಿಗಳು ಅರೆಸ್ಟ್
ನಿಯಮ ಉಲ್ಲಂಘಿಸಿ ಅವಧಿ ಮೀರಿ ತೆರೆದಿರುವುದು ಹಾಗೂ 18 ವರ್ಷದ ಕೆಳಗಿನವರಿಗೆ ತಂಬಾಕು/ಸಿಗರೆಟ್ ಮತ್ತು ಮದ್ಯ ಮಾರಾಟ ಮಾಡುತ್ತಿರುವ ಕುರಿತು ಸಾರ್ವಜನಿಕರಿಂದ ಹಲವು ದೂರುಗಳ ಬಂದಿದ್ದವು. ಈ ಹಿನ್ನೆಲೆಯಲ್ಲಿ ಪಬ್, ಹೋಟೆಲ್‌ಗಳು, ಡಿಸ್ಕೋಥೆಕ್‌ಗಳು ಹಾಗೂ ಹುಕ್ಕಾ ಬಾರ್‌ಗಳ ಮೇಲೆ ದಾಳಿ ನಡೆಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ನಗರದ ಒಟ್ಟು 701 ಸ್ಥಳಗಳಲ್ಲಿ ಪರಿಶೀಲಿಸಲಾಗಿದ್ದು, ಇದರಲ್ಲಿ 390 ಕಡೆ ನಿಯಮ ಉಲ್ಲಂಘನೆ ಮಾಡಿರುವುದು ಪತ್ತೆಯಾಗಿದೆ. ಈ ಸಂಬಂಧ 480 ಪ್ರಕರಣಗಳನ್ನು ದಾಖಲಿಸಿಕೊಳ್ಳಲಾಗಿದೆ. ಪದೇ ಪದೇ ನಿಯಮ ಉಲ್ಲಂಘಿಸುವವರ ವಿರುದ್ಧ ಮಾರಾಟ ಪರವಾನಗಿಯನ್ನು ರದ್ದುಪಡಿಸಲಾಗುತ್ತದೆ ಎಂದು ಹೆಚ್ಚುವರಿ ಆಯುಕ್ತ (ಪಶ್ಚಿಮ) ಎನ್.ಸತೀಶ್ ಕುಮಾರ್ ಎಚ್ಚರಿಕೆ ನೀಡಿದ್ದಾರೆ.
ಬೆಂಗಳೂರು: ಸ್ಕ್ಯಾನಿಂಗ್‌ಗೆ ಬಂದಿದ್ದ ಯುವತಿ ಜತೆ ಅಸಭ್ಯ ವರ್ತನೆ: ಟೆಕ್ನಿಶಿಯನ್ ಜೈಲಿಗೆ
ಪಬ್, ಬಾರ್, ಹೋಟೆಲ್ ಮಾಲಿಕರಿಗೆ ಸೂಚನೆಗಳು
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ