ರಾಜ್ಯದ ಎಲ್ಲ ಕಾಲೇಜುಗಳಲ್ಲಿ ಸಿಸಿಟಿವಿ ಅಳವಡಿಕೆ ಕಡ್ಡಾಯ: ಶಿಕ್ಷಣ ಇಲಾಖೆ

Kannadaprabha News   | Kannada Prabha
Published : Jul 17, 2025, 11:34 AM IST
CCTV

ಸಾರಾಂಶ

ರಾಜ್ಯ ಉನ್ನತ ಶಿಕ್ಷಣ ಇಲಾಖೆಯು ತನ್ನ ವ್ಯಾಪ್ತಿಯ ಎಲ್ಲ ಸಾರ್ವಜನಿಕ, ಖಾಸಗಿ ವಿಶ್ವವಿದ್ಯಾಲಯಗಳು, ಸರ್ಕಾರಿ, ಖಾಸಗಿ ಹಾಗೂ ಅನುದಾನಿತ ಪದವಿ ಹಾಗೂ ಪಾಲಿಟೆಕ್ನಿಕ್ ಕಾಲೇಜುಗಳಲ್ಲಿ ಸಿಸಿಟಿವಿ ಅಳವಡಿಕೆ ಕಡ್ಡಾಯಗೊಳಿಸಿ ಸುತ್ತೋಲೆ ಹೊರಡಿಸಿದೆ.

ಬೆಂಗಳೂರು (ಜು.17): ರಾಜ್ಯ ಉನ್ನತ ಶಿಕ್ಷಣ ಇಲಾಖೆಯು ತನ್ನ ವ್ಯಾಪ್ತಿಯ ಎಲ್ಲ ಸಾರ್ವಜನಿಕ, ಖಾಸಗಿ ವಿಶ್ವವಿದ್ಯಾಲಯಗಳು, ಸರ್ಕಾರಿ, ಖಾಸಗಿ ಹಾಗೂ ಅನುದಾನಿತ ಪದವಿ ಹಾಗೂ ಪಾಲಿಟೆಕ್ನಿಕ್ ಕಾಲೇಜುಗಳಲ್ಲಿ ಸಿಸಿಟಿವಿ ಅಳವಡಿಕೆ ಕಡ್ಡಾಯಗೊಳಿಸಿ ಸುತ್ತೋಲೆ ಹೊರಡಿಸಿದೆ. ಈಗಾಗಲೇ ರಾಜ್ಯದ ಎಂಜಿನಿಯರಿಂಗ್ ಕಾಲೇಜುಗಳಲ್ಲಿ ಸಿಸಿಟಿವಿ ಅಳವಡಿಕೆ ಕಡ್ಡಾಯ ಮಾಡಿದ್ದ ಇಲಾಖೆ ಇದನ್ನು ಇದೀಗ ಪದವಿ, ಪಾಲಿಟೆಕ್ನಿಕ್‌ ಕಾಲೇಜುಗಳಿಗೂ ವಿಸ್ತರಿಸಿದೆ.

ರಾಜ್ಯದ ಶಾಲಾ-ಕಾಲೇಜುಗಳಲ್ಲಿ ವಿದ್ಯಾರ್ಥಿಗಳು ಮಾದಕ ದ್ರವ್ಯಗಳ ವ್ಯಸನ, ರ್‍ಯಾಗಿಂಗ್‌ ಹಾಗೂ ಲೈಂಗಿಕ ದೌರ್ಜನ್ಯ ಸೇರಿ ಇನ್ನಿತರ ಅಕ್ರಮ, ಅನೈತಿಕ ಚಟುವಟಿಕೆಗಳಲ್ಲಿ ಭಾಗಿಯಾಗುತ್ತಿರುವುದು ಕಂಡು ಬರುತ್ತಿರುವ ಹಿನ್ನೆಲೆಯಲ್ಲಿ ಇದರ ನಿಯಂತ್ರಣಕ್ಕೆ ಸಿಸಿಟಿವಿ ಅಳವಡಿಕೆ ಕಡ್ಡಾಯಗೊಳಿಸಲಾಗಿದೆ. ವಿವಿಗಳು ಹಾಗೂ ಕಾಲೇಜುಗಳ ಪ್ರಾಂಶುಪಾಲರು ಸಿಸಿಟಿವಿ ಅಳವಡಿಕೆ ಬಗ್ಗೆ ಕ್ರಮ ಕೈಗೊಳ್ಳಬೇಕು. ಈಗಾಗಲೇ ಸಿಸಿಟಿವಿ ಅಳವಡಿಕೆ ಆಗಿರುವ ಕಾಲೇಜುಗಳಲ್ಲಿ ಅವುಗಳ ಕಾರ್ಯನಿರ್ವಹಿಸುತ್ತಿರುವ ವಿವರಗಳನ್ನು ಜು.21ರೊಳಗೆ ಮಾಹಿತಿ ಒದಗಿಸುವಂತೆ ಕಾಲೇಜು ಶಿಕ್ಷಣ ಇಲಾಖೆ ನಿರ್ದೇಶಕರು ಸೂಚಿಸಿದ್ದಾರೆ.

ಅಮೆರಿಕದ ಶಾಸಕಾಂಗ ಶೃಂಗದಲ್ಲಿ ಹೊರಟ್ಟಿ ಭಾಗಿ: ಅಮೆರಿಕಾದ ಬೋಸ್ಟನ್‌ ನಗರದಲ್ಲಿ ಆ.4ರಿಂದ 6ರವರೆಗೆ ನಡೆಯಲಿರುವ ‘ಶಾಸಕಾಂಗ ಶೃಂಗಸಭೆ 2025’ರಲ್ಲಿ ರಾಜ್ಯ ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ಪಾಲ್ಗೊಳ್ಳಲಿದ್ದಾರೆ. ಭಾರತ ಸಂಸ್ಥೆಗಳ ಆಶ್ರಯದಲ್ಲಿ ನಡೆಯುವ ‘ರಾಜ್ಯ ಶಾಸಕರ ರಾಷ್ಟ್ರೀಯ ಸಮಾವೇಶ ಹಾಗೂ ರಾಷ್ಟ್ರೀಯ ಶಾಸಕರ ಸಮಾವೇಶ’ ಶೃಂಗದಲ್ಲಿ ಭಾರತದ ಸಂಸದರು, ವಿವಿಧ ರಾಜ್ಯಗಳ ವಿಧಾನ ಸಭೆ ಹಾಗೂ ವಿಧಾನ ಪರಿಷತ್ತಿನ ಸದಸ್ಯರು, ಸಚಿವರು, ರಾಜಕೀಯ ತಜ್ಞರು, ನೀತಿ ನಿರೂಪಕರು, ರಾಜಕೀಯ ಮುತ್ಸದ್ದಿಗಳು ಪಾಲ್ಗೊಳ್ಳಲಿದ್ದಾರೆ.

ಮೂರು ದಿನಗಳ ಶೃಂಗ ಸಭೆಯಲ್ಲಿ ಪ್ರಜಾತಂತ್ರ ಗಟ್ಟಿಗೊಳಿಸುವಿಕೆಯಲ್ಲಿ ಶಾಸನ ಸಭೆಗಳ ಪಾತ್ರ, ಶಾಸನ ಸಭೆಗಳ ಪಕ್ಷಾತೀತ ನಿರ್ವಹಣೆ, ಶಾಸನ ಸಭೆಗಳಿಗೆ ಅರ್ಥಿಕ ಸ್ವಾಯತ್ತತೆ ಸೇರಿದಂತೆ ಹತ್ತು ಹಲವು ವಿಷಯಗಳ ಕುರಿತು ಗೋಷ್ಠಿಗಳು, ವಿಚಾರ ಸಂಕಿರಣ, ಸಂವಾದಗಳು ಜರುಗಲಿವೆ. ಶಾಸಕಾಂಗ ಶೃಂಗಸಭೆಯಲ್ಲಿ ಸಭಾಪತಿ ಬಸವರಾಜ ಹೊರಟ್ಟಿ ಅವರೊಂದಿಗೆ ಉಪಸಭಾಪತಿ ಎಂ.ಕೆ. ಪ್ರಾಣೇಶ್, ವಿರೋಧ ಪಕ್ಷದ ನಾಯಕರಾದ ಛಲವಾದಿ ಟಿ. ನಾರಾಯಣಸ್ವಾಮಿ, ಸಭಾನಾಯಕ ಎನ್.ಎಸ್. ಭೋಸ್‌ರಾಜು, ವಿರೋಧ ಪಕ್ಷದ ಮುಖ್ಯ ಸಚೇತಕ ಎನ್. ರವಿಕುಮಾರ್, ಸರ್ಕಾರಿ ಮುಖ್ಯ ಸಚೇತಕ ಸಲೀಂ ಅಹ್ಮದ್, ವಿಧಾನ ಪರಿಷತ್ ಸದಸ್ಯರಾದ ಭಾರತಿ ಶೆಟ್ಟಿ, ಭಲ್ಕೀಸ್ ಬಾನು, ಹೇಮಲತಾ ನಾಯಕ್, ಮತ್ತು ಮಂಜುನಾಥ ಭಂಡಾರಿ ಪಾಲ್ಗೊಳ್ಳಲಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಸಿಎಂ ಕುರ್ಚಿ ಪೈಪೋಟಿಯಲ್ಲಿ ರೈತ ಸಮಸ್ಯೆ ಗೌಣ: ಬಿ.ವೈ.ವಿಜಯೇಂದ್ರ ಟೀಕೆ
ಕರ್ನಾಟಕದಲ್ಲಿ ಶೇ.63 ಭ್ರಷ್ಟಾಚಾರ: ಸಿಬಿಐ ತನಿಖೆಗೆ ಒತ್ತಾಯಿಸಿದ ಆರ್‌.ಅಶೋಕ್‌