‘ನನ್ನನ್ನು ಯಾರೂ ಅಪಹರಿಸಿರಲಿಲ್ಲ: ಸ್ವಇಚ್ಛೆಯಿಂದ ಸ್ನೇಹಿತರೊಂದಿಗಿದ್ದೆ'

Published : Apr 06, 2021, 08:32 AM IST
‘ನನ್ನನ್ನು ಯಾರೂ ಅಪಹರಿಸಿರಲಿಲ್ಲ: ಸ್ವಇಚ್ಛೆಯಿಂದ ಸ್ನೇಹಿತರೊಂದಿಗಿದ್ದೆ'

ಸಾರಾಂಶ

‘ನನ್ನನ್ನು ಯಾರೂ ಅಪಹರಿಸಿರಲಿಲ್ಲ’| ಜೀವ ಭಯ ಇರುವ ಕಾರಣ ಹೊರರಾಜ್ಯದಲ್ಲಿ ರಕ್ಷಣೆ ಪಡೆಯುತ್ತಿದ್ದೆ| ಸ್ವಇಚ್ಛೆಯಿಂದಲೇ ನನ್ನ ಸ್ನೇಹಿತರೊಂದಿಗೆ ನೆಲೆಸಿದ್ದೆ| ಅಪಹರಣ ಪ್ರಕರಣಕ್ಕೆ ಸಂಬಂಧಿಸಿ ಕೋರ್ಟ್‌ಗೆ ಹಾಜರಾಗಿ ಪ್ರಮಾಣೀಕೃತ ಹೇಳಿಕೆ| ಯುವತಿ ಪರ ವಕೀಲರಿಂದ ಮಾಹಿತಿ

 

ಬೆಂಗಳೂರು(ಏ.06): ಮಾಜಿ ಸಚಿವ ರಮೇಶ್‌ ಜಾರಕಿಹೊಳಿ ಸಿ.ಡಿ ಪ್ರಕರಣಕ್ಕೆ ಸಂಬಂಧಪಟ್ಟಂತೆ ತಮ್ಮ ಮಗಳನ್ನು ಅಪಹರಿಸಿಲಾಗಿದೆ ಎಂದು ಆರೋಪಿಸಿ ಆಕೆಯ ಪೋಷಕರು ನೀಡಿದ್ದ ದೂರಿಗೆ ಸಂಬಂಧಿಸಿದಂತೆ ಯುವತಿ ಖುದ್ದು ನ್ಯಾಯಾಲಯಕ್ಕೆ ಹಾಜರಾಗಿ ಪ್ರಮಾಣಿಕೃತ ಹೇಳಿಕೆ ದಾಖಲಿಸಿದ್ದಾರೆ. ತಮ್ಮನ್ನು ಯಾರೂ ಅಪಹರಿಸಿರಲಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

ಸೋಮವಾರ ನಗರದ ಗುರುನಾನಕ್‌ ಭವನದ 24ನೇ ಎಸಿಎಂಎಂ ನ್ಯಾಯಾಲಯಕ್ಕೆ ಹಾಜರಾದ ಯುವತಿ, ‘ಪ್ರಕರಣದಲ್ಲಿ ‘ನನ್ನನ್ನು ಯಾರೂ ಅಪಹರಣ ಮಾಡಿಲ್ಲ. ಜೀವ ಭಯದಿಂದಾಗಿ ಹೊರರಾಜ್ಯಗಳಲ್ಲಿ ರಕ್ಷಣೆ ಪಡೆಯುತ್ತಿದ್ದೆ. ನನ್ನ ಸ್ವಇಚ್ಛೆಯಿಂದ ಸ್ನೇಹಿತರೊಂದಿಗೆ ನೆಲೆಸಿದ್ದೆ’ ಎಂದು ನ್ಯಾಯಾಧೀಶರ ಮುಂದೆ ವಿವರಿಸಿದ್ದಾರೆ’ ಎಂದು ಆಕೆಯ ಪರ ವಕೀಲ ಸೂರ್ಯ ಮುಕುಂದರಾಜ್‌ ಮಾಹಿತಿ ನೀಡಿದ್ದಾರೆ.

ಅಲ್ಲದೆ, ಅಪಹರಣ ಪ್ರಕರಣ ಸಂಬಂಧ ಪೊಲೀಸರ ವಿಚಾರಣೆ ವೇಳೆ ಸಂತ್ರಸ್ತ ಯುವತಿ ನೀಡಿದ್ದ ಹೇಳಿಕೆ ಪ್ರಮಾಣ ಪತ್ರವನ್ನು ತನಿಖಾಧಿಕಾರಿಗಳು ನ್ಯಾಯಾಲಯಕ್ಕೆ ಸಲ್ಲಿಸಿದರು.

ಸಂತ್ರಸ್ತ ಯುವತಿ ವಸಂತನಗರದ ಗುರುನಾನಕ್‌ ಭವನದಲ್ಲಿರುವ ನ್ಯಾಯಾಲಯಕ್ಕೆ ಹಾಜರಾಗಿದ್ದ ಹಿನ್ನೆಲೆಯಲ್ಲಿ 100ಕ್ಕೂ ಹೆಚ್ಚು ಪೊಲೀಸ್‌ ಸಿಬ್ಬಂದಿಯನ್ನು ನಿಯೋಜಿಸಲಾಗಿತ್ತು.

ಬೆಳಗಾವಿಯಲ್ಲಿ ದಾಖಲಾಗಿದ್ದ ದೂರು:

ಸಿ.ಡಿ. ಬಹಿರಂಗವಾಗುತ್ತಿದ್ದಂತೆ ಯುವತಿಯ ತಂದೆ ಬೆಳಗಾವಿಯ ಎಪಿಎಂಸಿ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದರು. ತಮ್ಮ ಮಗಳನ್ನು ಅಪಹರಿಸಲಾಗಿದ್ದು, ಒತ್ತಡದಲ್ಲಿರಿಸಿ ಹೇಳಿಕೆಗಳನ್ನು ಕೊಡಿಸಲಾಗುತ್ತಿದೆ ಎಂದು ದೂರಿದ್ದರು. ನಂತರ ಈ ದೂರನ್ನು ಬೆಂಗಳೂರಿನ ಆರ್‌.ಟಿ.ನಗರ ಠಾಣೆಗೆ ವರ್ಗಾವಣೆಯಾಗಿತ್ತು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಇನ್ಮುಂದೆ ನೂರು ಗ್ಯಾರಂಟಿ ಘೋಷಣೆ ಮಾಡಿದರೂ ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ: ಛಲವಾದಿ ನಾರಾಯಣಸ್ವಾಮಿ
Breaking ಮಂಡ್ಯ ಬಸ್ ಅಪಘಾತದಲ್ಲಿ 23 ಪ್ರಯಾಣಿಕರಿಗೆ ಗಾಯ, ಇಬ್ಬರು ಗಂಭೀರ