ಕೊರೋನಾ ನಿಯಂತ್ರಣ: ಕರ್ನಾಟಕದ ಕ್ರಮಕ್ಕೆ ಕೇಂದ್ರ ಶ್ಲಾಘನೆ

By Kannadaprabha News  |  First Published Mar 3, 2021, 7:40 AM IST

ರಾಜ್ಯದಲ್ಲಿ ಕೊರೋನಾ ಸೋಂಕು ನಿಯಂತ್ರಣ, ಎರಡನೇ ಅಲೆ ಭೀತಿ| ತುಮಕೂರು ಜಿಲ್ಲೆ ವಿವಿಧ ಕಡೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಕೇಂದ್ರ ಆರೋಗ್ಯ ಇಲಾಖೆಯ ತಂಡದ ಸದಸ್ಯರು| ಕೋವಿಡ್‌ ನಿಯಂತ್ರಣಕ್ಕೆ ತೆಗೆದುಕೊಂಡಿರುವ ಕ್ರಮಗಳ ಬಗ್ಗೆ ಶ್ಲಾಘನೆ| 


ಬೆಂಗಳೂರು(ಮಾ.03): ಬೆಂಗಳೂರು ನಗರ ಹಾಗೂ ರಾಜ್ಯದಲ್ಲಿ ಕೊರೋನಾ ಸೋಂಕು ನಿಯಂತ್ರಣ ತೆಗೆದುಕೊಂಡ ಕ್ರಮಗಳ ಬಗ್ಗೆ ಶ್ಲಾಘನೆ ವ್ಯಕ್ತಪಡಿಸಿರುವ ಕೇಂದ್ರ ಆರೋಗ್ಯ ಇಲಾಖೆಯ ತಂಡ ರಾಜ್ಯದ ಗಡಿ ಜಿಲ್ಲೆಗಳಲ್ಲಿ ಸೋಂಕು ನಿಯಂತ್ರಣಕ್ಕೆ ತೆಗೆದುಕೊಂಡ ಕ್ರಮಗಳನ್ನು ಇನ್ನಷ್ಟು ತೀವ್ರಗೊಳಿಸುವಂತೆ ಸೂಚನೆ ನೀಡಿದೆ.

ರಾಜ್ಯದಲ್ಲಿ ಕೊರೋನಾ ಸೋಂಕು ನಿಯಂತ್ರಣ, ಎರಡನೇ ಅಲೆ ಭೀತಿ ಹಾಗೂ ಕೋವಿಡ್‌ ಲಸಿಕೆ ಅಭಿಯಾದ ಕುರಿತು ಅಧ್ಯಯನ ನಡೆಸಲು ರಾಜ್ಯಕ್ಕೆ ಆಗಮಿಸಿರುವ ಕೇಂದ್ರ ಆರೋಗ್ಯ ಇಲಾಖೆಯ ತಂಡದ ಸದಸ್ಯರು ಮಂಗಳವಾರ ತುಮಕೂರು ಜಿಲ್ಲೆ ವಿವಿಧ ಕಡೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

Tap to resize

Latest Videos

undefined

ಕೊರೋನಾ ಮರೆತ ಬೆಂಗಳೂರ ಜನ.. ವಿಕೆಂಟ್ ಮಸ್ತಿ ಬಲು ಜೋರು!

ಬಳಿಕ ಬೆಂಗಳೂರಿಗೆ ಆಗಮಿಸಿದ ತಂಡ ಸದಸ್ಯರು ಬಿಬಿಎಂಪಿ ಅಧಿಕಾರಿಗಳೊಂದಿಗೂ ಸಭೆ ನಡೆಸಿ, ನಗರದಲ್ಲಿ ಕೋವಿಡ್‌ ನಿಯಂತ್ರಣಕ್ಕೆ ತೆಗೆದುಕೊಂಡಿರುವ ಕ್ರಮಗಳ ಬಗ್ಗೆ ಶ್ಲಾಘಿಸಿದರು ಎಂದು ಬಿಬಿಎಂಪಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
 

click me!