ಪಿಎಸ್‌ಐ ಅಕ್ರಮ ನೇಮಕಾತಿ ಹಗರಣ: ಎಡಿಜಿಪಿ ಅಮೃತ್‌ ಪಾಲ್‌ ವಿರುದ್ಧ ಕ್ರಮಕ್ಕೆ ಕೇಂದ್ರ ಅಸ್ತು

Published : Jul 05, 2023, 01:00 AM IST
ಪಿಎಸ್‌ಐ ಅಕ್ರಮ ನೇಮಕಾತಿ ಹಗರಣ: ಎಡಿಜಿಪಿ ಅಮೃತ್‌ ಪಾಲ್‌ ವಿರುದ್ಧ ಕ್ರಮಕ್ಕೆ ಕೇಂದ್ರ ಅಸ್ತು

ಸಾರಾಂಶ

ಎಡಿಜಿಪಿ ಮೇಲೆ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ ಕೇಂದ್ರ ಸರ್ಕಾರ. ಸರ್ಕಾರದ ಆದೇಶ ಕೈಸೇರಿದ ಬಳಿಕ ನ್ಯಾಯಾಲಯಕ್ಕೆ ಎಡಿಜಿಪಿ ವಿರುದ್ಧ ಪಿಸಿ ಕಾಯ್ದೆ ಅಳವಡಿಕೆಗೆ ಕೋರಿಕೆ ಸಲ್ಲಿಸಲಾಗುತ್ತದೆ. 

ಬೆಂಗಳೂರು(ಜು.05):  ಪಿಎಸ್‌ಐ ಅಕ್ರಮ ನೇಮಕಾತಿ ಹಗರಣ ಸಂಬಂಧ ಬಂಧಿತ ನೇಮಕಾತಿ ವಿಭಾಗದ ಮಾಜಿ ಮುಖ್ಯಸ್ಥ ಹಾಗೂ ಹೆಚ್ಚುವರಿ ಪೊಲೀಸ್‌ ಮಹಾನಿರ್ದೇಶಕ (ಎಡಿಜಿಪಿ) ಅಮೃತ್‌ ಪಾಲ್‌ ವಿರುದ್ಧ ಭ್ರಷ್ಟಾಚಾರ ನಿಗ್ರಹ ಕಾಯ್ದೆಯಡಿ ಕ್ರಮ ಜರುಗಿಸಲು ರಾಜ್ಯ ಅಪರಾಧ ತನಿಖಾ ದಳಕ್ಕೆ (ಸಿಐಡಿ) ಕೇಂದ್ರ ಸರ್ಕಾರ ಅನುಮತಿ ನೀಡಿದೆ.

ನೇಮಕಾತಿ ವಿಭಾಗ ಮುಖ್ಯಸ್ಥರಾಗಿ ಪಿಎಸ್‌ಐ ನೇಮಕಾತಿಯನ್ನು ಪಾರದರ್ಶಕ ಮತ್ತು ನಿಷ್ಪಕ್ಷಪಾತವಾಗಿ ಅಮೃತ್‌ ಪಾಲ್‌ ಅವರು ನಡೆಸಬೇಕಿತ್ತು. ಆದರೆ ತಮ್ಮ ಅಧಿಕಾರ ದುರ್ಬಳಕೆ ಮಾಡಿಕೊಂಡು ಕೆಲ ಅಭ್ಯರ್ಥಿಗಳಿಂದ ಹಣ ಪಡೆದು ಪಿಎಸ್‌ಐ ಹುದ್ದೆಗೆ ಆಯ್ಕೆಯಾಗಲು ನೆರವಾಗಿ ಭ್ರಷ್ಟಾಚಾರ ನಡೆಸಿದ್ದಾರೆ. ಹೀಗಾಗಿ ಅಖಿಲ ಭಾರತ ಸೇವಾ ಅಧಿಕಾರಿಯಾಗಿರುವ ಅಮೃತ್‌ ಪಾಲ್‌ ವಿರುದ್ಧ ಭ್ರಷಾಚಾರ ನಿಗ್ರಹ ಕಾಯ್ದೆಯನ್ನು ದಾಖಲಿಸಲು ಪ್ರಾಸಿಕ್ಯೂಷನ್‌ ಅನುಮತಿ ಕೋರಿ ಕೇಂದ್ರ ಸರ್ಕಾರಕ್ಕೆ ಸಿಐಡಿ ಮನವಿ ಮಾಡಿತ್ತು.

PSI Recruitment Scam: ಎಡಿಜಿಪಿ ಅಮೃತ್‌ ಪಾಲ್‌ ಸಿಐಡಿ ವಶಕ್ಕೆ

ಈ ಮನವಿ ಪುರಸ್ಕರಿಸಿದ ಕೇಂದ್ರ ಸರ್ಕಾರವು, ಎಡಿಜಿಪಿ ಮೇಲೆ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದೆ. ಸರ್ಕಾರದ ಆದೇಶ ಕೈಸೇರಿದ ಬಳಿಕ ನ್ಯಾಯಾಲಯಕ್ಕೆ ಎಡಿಜಿಪಿ ವಿರುದ್ಧ ಪಿಸಿ ಕಾಯ್ದೆ ಅಳವಡಿಕೆಗೆ ಕೋರಿಕೆ ಸಲ್ಲಿಸಲಾಗುತ್ತದೆ ಎಂದು ಮೂಲಗಳು ಹೇಳಿವೆ.

ಪಿಎಸ್‌ಐ ಹಗರಣದಲ್ಲಿ ಬಂಧಿತರಾಗಿ ಅಮೃತ್‌ ಪಾಲ್‌ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿದ್ದಾರೆ. ಮೊದಲು ವಂಚನೆ, ದಾಖಲೆ ತಿದ್ದಿದ ಹಾಗೂ ಅಧಿಕಾರ ದುರ್ಬಳಕೆ ಹೀಗೆ ವಿವಿಧ ಆರೋಪಗಳಡಿ ತನಿಖೆ ನಡೆಸಿ ಎಡಿಜಿಪಿ ವಿರುದ್ಧ ನ್ಯಾಯಾಲಯಕ್ಕೆ ಸಿಐಡಿ ಆರೋಪ ಪಟ್ಟಿಸಲ್ಲಿಸಿದೆ. ಈಗ ಆ ಆರೋಪ ಪಟ್ಟಿಗೆ ಹೆಚ್ಚುವರಿಯಾಗಿ ಪಿಸಿ ಕಾಯ್ದೆಯನ್ನು ಸಹ ಸೇರಿಸಲಾಗುತ್ತದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಕಂದನ ಸ್ನಾನ ಮಾಡಿಸಲು ಹೋದಾಗ ದುರ್ಘಟನೆ, ಗೀಸರ್ ಸೋರಿಕೆಯಿಂದ ತಾಯಿ-ಮಗು ಸಾವು
ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ವಿನಯ್ ಕುಲಕರ್ಣಿಗೆ ಜೈಲೇ ಗತಿ, ಜಾಮೀನು ಅರ್ಜಿ ತಿರಸ್ಕೃತ