
ಕೆವಾಡಿಯಾ(ಜೂ.19): ಮಕ್ಕಳು, ಗರ್ಭಿಣಿಯರು ಮತ್ತು ಹಾಲುಣಿಸುವ ಮಹಿಳೆಯರಲ್ಲಿನ ಅಪೌಷ್ಟಿಕತೆಯನ್ನು ಹೋಗಲಾಡಿಸಲು ಕರ್ನಾಟಕ ಮತ್ತು ಗುಜರಾತ್‌ನಲ್ಲಿ ಪ್ರಾಯೋಗಿಕವಾಗಿ ಆಯುಷ್ (ಸಾರವರ್ಧಕ) ವಸ್ತುಗಳನ್ನು ಮಿಶ್ರಣ ಮಾಡಿ ನೀಡಲಾಗುತ್ತಿದೆ. ಇದರಿಂದ ಉತ್ತಮ ಫಲಿತಾಂಶ ದೊರೆತಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ.
‘ಕೇಂದ್ರ ಸರ್ಕಾರದ ನೆರವಿನಿಂದ ದೇಶಾದ್ಯಂತ ಅಂಗನವಾಡಿ ಕೇಂದ್ರಗಳಲ್ಲಿ ಮಕ್ಕಳು, ಗರ್ಭಿಣಿಯರು ಹಾಗೂ ಹಾಲುಣಿಸುವ ಮಹಿಳೆಯರಿಗೆ ಪೌಷ್ಟಿಕ ಆಹಾರವನ್ನು ಉಚಿತವಾಗಿ ನೀಡಲಾಗುತ್ತಿದೆ. ಕರ್ನಾಟಕ ಮತ್ತು ಗುಜರಾತ್‌ನಲ್ಲಿ ಈ ಆಹಾರದ ಜೊತೆಗೆ ಆಯುರ್ವೇದ, ಯುನಾನಿ, ಹೋಮಿಯೋಪತಿ, ಸಿದ್ಧೌಷಧ ಹಾಗೂ ನೈಸರ್ಗಿಕ ಚಿಕಿತ್ಸೆಗೆ ಸಂಬಂಧಿಸಿದ ಕೆಲ ಗಿಡಮೂಲಿಕೆ ಅಥವಾ ಔಷಧೀಯ ಪದಾರ್ಥಗಳನ್ನು ಬೆರೆಸಿ ನೀಡಲಾಗುತ್ತಿದೆ. ಅದರಿಂದ ಈವರೆಗೆ ಒಳ್ಳೆಯ ಫಲಿತಾಂಶ ದೊರೆತಿದೆ. ಈ ಕುರಿತ ಅಂಕಿಅಂಶಗಳನ್ನು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ಜೊತೆ ಹಂಚಿಕೊಳ್ಳಾಗುವುದು. ನಂತರ ಮೂರನೇ ಸಂಸ್ಥೆಯೊಂದರಿಂದ ವೈದ್ಯಕೀಯ ಮೌಲ್ಯಮಾಪನ ನಡೆಸಿ, ದೇಶಾದ್ಯಂತ ಜಾರಿಗೆ ಪರಿಶೀಲಿಸಲಾಗುವುದು’ ಎಂದು ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯದ ಉನ್ನತ ಅಧಿಕಾರಿಯೊಬ್ಬರು ಹೇಳಿದ್ದಾರೆ.
ಗರ್ಭಿಣಿಯರ ಮನೆಗೇ ಊಟ ಕೊಡಿ: ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ
ಗುಜರಾತ್‌ನಲ್ಲಿ ಪೌಷ್ಟಿಕ ಆಹಾರದ ಜೊತೆ ತ್ರಿಕಾಟು, ವಿದಾಂಗ, ಜೀರಿಗೆ, ಮುಷ್ಟಚೂರ್ಣ ಮುಂತಾದವುಗಳನ್ನು ಬೆರೆಸಿ ನೀಡಲಾಗುತ್ತಿದೆ. ಇದರಿಂದ ಮ್ಕಳಲ್ಲಿ ಹಸಿವು ಹೆಚ್ಚಿ, ತೂಕ ವೃದ್ಧಿಯಾಗುತ್ತಿದೆ. ಹೊಟ್ಟೆಯಲ್ಲಿ ಜಂತುಹುಳು ಹಾಗೂ ಅಜೀರ್ಣದ ಸಮಸ್ಯೆ ನಿವಾರಣೆಯಾಗುತ್ತಿದೆ. ಗರ್ಭಿಣಿಯರು ಮತ್ತು ಹಾಲುಣಿಸುವ ಮಹಿಳೆಯರಿಗೆ ಜೀರಿಗೆ ಮುಂತಾದವುಗಳನ್ನು ಬೆರೆಸಿ ನೀಡಲಾಗುತ್ತಿದೆ. ಅದರಿಂದ ಮಹಿಳೆಯರು ಮತ್ತು ನವಜಾತ ಶಿಶುವಿಗೆ ಅನುಕೂಲವಾಗುತ್ತಿದೆ ಎಂದು ತಿಳಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ