
ವಿಜಯನಗರ (ಅ.7): ರಾಜ್ಯದಲ್ಲಿ ಮಳೆ ಅಭಾವದಿಂದ ತೀವ್ರ ಬರಗಾಲ ಉಂಟಾಗಿದ್ದು, ವಿಜಯನಗರ ಜಿಲ್ಲೆಯ ಎಲ್ಲ ತಾಲೂಕುಗಳು ಬರಪೀಡಿತ ಪ್ರದೇಶ ಎಂದು ಘೋಷಣೆ ಮಾಡಲಾಗಿದೆ. ಈ ಹಿನ್ನೆಲೆ ಬರ ಪರಿಸ್ಥಿತಿ ಅಧ್ಯಯನ ಮಾಡಲು ವಿಜಯನಗರ ಜಿಲ್ಲೆಗೆ ಐಎಎಸ್ ಅಧಿಕಾರಿಗಳ ತಂಡ ಭೇಟಿ ನೀಡಿತು.
ಹೊಸಪೇಟೆ ತಾಲ್ಲೂಕಿನ ನಂದಿಬಂಡಿ ಗ್ರಾಮದಲ್ಲಿ ಬರ ವೀಕ್ಷಣೆ ಮಾಡಿದ ತಂಡ. ಗೂಡೂಸಾಬ್, ಶಂಕರ್ ನಾಯ್ಕ್ , ಬಸಪ್ಪ, ಈಡಿಗರ ಕೆಂಚಪ್ಪ, ಧರ್ಮರಾಜ ಶೆಟ್ಟಿ, ಜಿ. ಭೀಮಪ್ಪ, ಮಹಾದೇವ್, ಸಾದಣ್ಣ , ದುರುಗಪ್ಪ ಎಂಬ ರೈತರಿಂದ ಬರ ಅಧ್ಯಯನ ತಂಡ ಮಾಹಿತಿ ಪಡೆದರು.
ಕೇಂದ್ರ ಬರ ಅಧ್ಯಯನ ತಂಡದಿಂದ ಬರ ಪರಿಸ್ಥಿತಿ ಪರಿಶೀಲನೆ
ಕೇಂದ್ರ ಕುಡಿಯುವ ನೀರು ಹೆಚ್ಚುವರಿ ಸಲಹೆಗಾರ ಡಿ. ರಾಜಶೇಖರ್ ರಿಂದ ಪರಿಶೀಲನೆ. ಜಿಲ್ಲೆಯ ಹಲವು ಕಡೆ ಸಂಪೂರ್ಣ ಬೆಳೆ ಹಾನಿಯಾಗಿದೆ. ಕೆಲವೆಡೆ ಬೆಳೆ ಇದ್ದರೂ ಉಂಟಾಗಿರುವ ತೀವ್ರ ಇಳುವರಿ ಕುಸಿತದ ಬಗ್ಗೆ ಮನವರಿಕೆ ಮಾಡಿದರು. ಅಧಿಕಾರಿಗಳ ಭೇಟಿ ವೇಳೆ ಕಂದಾಯ, ತೋಟಗಾರಿಕೆ, ಕೃಷಿ ಅಧಿಕಾರಿಗಳಿಂದ ಮಳೆಯ ವಾಸ್ತವದ ಬಗ್ಗೆ ಮನವರಿಕೆ ಮಾಡಿದರು. ವಿಜಯನಗರ ಜಿಲ್ಲಾಧಿಕಾರಿ ದಿವಾಕರ್, ಸಿಇಒ ಸದಾಶಿವ ಪ್ರಭು, ಕೃಷಿ ಜೆಡಿ ಶರಣಪ್ಪ ಮುದುಗಲ್ ಕೇಂದ್ರ ತಂಡದೊಂದಿಗೆ ಸಾಥ್ ನೀಡಿದರು.
ಮಳೆ-ಬೆಳೆ ಇಲ್ಲ, ಪರಿಹಾರ ಕೊಡದೆ ಇದ್ದ ವಿಷವೇ ಗತಿ: ಕೇಂದ್ರ ಬರ ಅಧ್ಯಯನ ತಂಡದ ಎದುರು ಆತ್ಮಹತ್ಯೆಗೆ ಯತ್ನ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ