ಮೆಟ್ರೋ ಸಂಚಾರಕ್ಕೆ ಕೇಂದ್ರ ಸಮ್ಮತಿ ನೀಡುವುದು ಡೌಟ್| ಲಾಕ್‌ಡೌನ್ 3.0 ಮುಗಿದ ಮೇಲೆ ನಮ್ಮ ಮೆಟ್ರೋ ರೈಲು ಸಂಚರಿಸಲಿದೆ ಎಂಬ ನಿರೀಕ್ಷೆಯಲ್ಲಿದ್ದವರಿಗೆ ನಿರಾಸೆ| ಅಗತ್ಯ ಮುನ್ನೆಚ್ಚರಿಕೆ ಕ್ರಮಗಳ ಸಿದ್ಧತೆಯಲ್ಲಿ ಬಿಎಂಆರ್‌ಸಿಎಲ್
ಬೆಂಗಳೂರು(ಮೇ.16): ಲಾಕ್‌ಡೌನ್ 3.0 ಮುಗಿದ ಮೇಲೆ ನಮ್ಮ ಮೆಟ್ರೋ ರೈಲು ಸಂಚರಿಸಲಿದೆ ಎಂಬ ನಿರೀಕ್ಷೆಯಲ್ಲಿದ್ದವರಿಗೆ ನಿರಾಸೆ ಕಾದಿದೆ. ಸದ್ಯಕ್ಕೆ ಪೂರ್ಣ ಹವಾನಿಯಂತ್ರಿತ ಸೌಲಭ್ಯವಿರುವ ಮೆಟ್ರೋ ರೈಲುಗಳ ಸಂಚಾರ ಆರಂಭಿಸಲು ಕೇಂದ್ರ ಸರ್ಕಾರ ಒಪ್ಪಿಗೆ ನೀಡುವ ಸಾಧ್ಯತೆ ಕಡಿಮೆ ಎಂದು ಬಿಎಂಆರ್‌ಸಿಎಲ್ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಸ್ತುತ ಪ್ರತಿದಿನ ಬೆಳಗ್ಗೆ ಮತ್ತು ಸಂಜೆ ನಮ್ಮ ಮೆಟ್ರೋ ರೈಲು ಪ್ರಾಯೋಗಿಕ ಸಂಚಾರ ನಡೆಸುತ್ತಿದ್ದು, ಅಗತ್ಯ ಮುನ್ನೆಚ್ಚರಿಕೆ ಕ್ರಮಗಳ ಸಿದ್ಧತೆಯಲ್ಲಿ ಬಿಎಂಆರ್‌ಸಿಎಲ್ ತೊಡಗಿದೆ. ಆದರೆ ಸರ್ಕಾರದ ನಿರ್ದೇಶನದ ನಂತರವೇ ಮುಂದಿನ ಕ್ರಮಕೈಗೊಳ್ಳಲಾಗುವುದು. ಪ್ರಯಾಣಿಕರ ನಡುವೆ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದರ ಜತೆಗೆ ಸೋಂಕು ರಹಿತವಾಗಿ ಸಂಚರಿಸಲು ರಾಸಾಯನಿಕಗಳಿಂದ ಸ್ವಚ್ಛಗೊಳಿಸುವುದರೊಂದಿಗೆ ಅಗತ್ಯ ಮುನ್ನೆಚ್ಚರಿಕೆ ಕ್ರಮಕ್ಕೆ ಆದ್ಯತೆ ನೀಡಲಾಗುವುದು ಎಂದು ಮಾಹಿತಿ ನೀಡಿದ್ದಾರೆ.
undefined
ಮೆಟ್ರೋ ಪಿಲ್ಲರ್‌ಗಳಲ್ಲಿ ಬಿರುಕು, ಬೇರಿಂಗ್ ಸಮಸ್ಯೆ!
ಬಿಎಂಆರ್‌ಸಿಎಲ್ ಕೇಂದ್ರ ಸರ್ಕಾರದ ನಿರ್ದೇಶನದಂತೆ ಪ್ರಮಾಣಿಕ ಕಾರ್ಯಾಚರಣಾ ವಿಧಾನ(ಎಸ್‌ಒಪಿ)ದ ನಿಯಮಗಳನ್ನು ಅನುಸರಿಸರಿಸಿ ಮೆಟ್ರೋ ರೈಲು ಸಂಚಾರ ಆರಂಭಿಸಲು ಅಗತ್ಯವಾದ ಸಿದ್ಧತೆ ಮಾಡಿಕೊಳ್ಳುತ್ತಿದೆ ಎಂದು ತಿಳಿಸಿದ್ದಾರೆ.
ಮುನ್ನೆಚ್ಚರಿಕೆ ಕ್ರಮವಾಗಿ ಸಂಭಾವ್ಯ ಸೋಂಕು ನಿಯಂತ್ರಣಕ್ಕಾಗಿ ಕರ್ತವ್ಯಕ್ಕೆ ಮರಳುವಾಗ ಸಿಬ್ಬಂದಿಯನ್ನು ಕಡ್ಡಾಯವಾಗಿ ಆರೋಗ್ಯ ತಪಾಸಣೆಗೆ ಒಳಗಾಗುವಂತೆ ಎಚ್ಚರಿಕೆ ವಹಿಸಲಾಗುವುದು.
ಕೊರೋನಾ ಎಫೆಕ್ಟ್: ಬೆಂಗಳೂರಲ್ಲಿ ಮರುಕಳಿಸಿದ 30 ವರ್ಷಗಳ ಹಿಂದಿನ ಹವಾಗುಣ!
ಮೆಟ್ರೋ ಸಿಬ್ಬಂದಿಯನ್ನು ಪ್ರತಿದಿನ ಪರೀಕ್ಷಿಸಲು ಎಲ್ಲಾ ಡಿಪೋಗಳಿಗೆ ಐಆರ್ ಥರ್ಮಾಮೀಟರ್ ಒದಗಿಸಲಾಗುವುದು. ಸಿಬ್ಬಂದಿಗಳ ಸುರಕ್ಷತೆಗಾಗಿ ಎಲ್ಲಾ ಉದ್ಯೋಗಿಗಳಿಗೆ ಮುಖಗವಸು, ಕೈಗವಸು, ಸ್ಯಾನಿಟೈಜರ್‌ಗಳನ್ನು ನೀಡಲಾಗುವುದು. ಮೆಟ್ರೋ ರೈಲುಗಳ ಒಳಗೆ ಕೋವಿಡ್ 19ಕ್ಕೆ ಸಂಬಂಧಿಸಿದಂತೆ ಜಾಗೃತಿ ಪತ್ರಗಳನ್ನು ಪ್ರದರ್ಶಿಸಲು ಮತ್ತು ಧ್ವನಿವರ್ಧಕದ ಮೂಲಕ ಪ್ರಚುರಪಡಿಸಲಾಗುವುದು ಮತ್ತು ಕಾರ್ಯನಿರ್ವಹಿಸುವ ಎಲ್ಲಾ ಮೆಟ್ರೋ ರೈಲುಗಳನ್ನು ಪ್ರತಿದಿನ ಸೋಂಕುರಹಿತಗೊಳಿಸಲು ರಾಸಾಯನಿಕಗಳಿಂದ ಸ್ವಚ್ಛಗೊಳಿಸಲು ನಿರ್ಧರಿಸಲಾಗಿದೆ ಎಂದು ಬಿಎಂಆರ್‌ಸಿಎಲ್ ಮೂಲಗಳು ಮಾಹಿತಿ ನೀಡಿದೆ.