
ಬೆಂಗಳೂರು, (ಡಿ.10): ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸಚಿವ ಸಂಪುಟದಲ್ಲಿ ಲಿಂಗಾಯತ ಪ್ರತ್ಯೇಕ ಧರ್ಮದ ಮಾನ್ಯತೆ ನೀಡಲು ಕೇಂದ್ರಕ್ಕೆ ಮಾಡಿದ್ದ ಶಿಫಾರಸ್ಸುನ್ನು ಕೇಂದ್ರ ಸರ್ಕಾರ ತಿರಸ್ಕರಿಸಿದೆ.
ಇಂದು [ಸೋಮವಾರ] ಹೈಕೋರ್ಟ್ ಗೆ ಅಫಿಡೇವಿಟ್ ಸಲ್ಲಿಸಿದ ಕೇಂದ್ರ ಸರ್ಕಾರದ ಅಸೋಸಿಯೇಟ್ ಸಾಲಿಸೇಟರ್ ಜನರಲ್ ಪ್ರಭುಲಿಂಗ ನಾವಲಗಿ ವರದಿ ಸಲ್ಲಿಸಿದ್ದಾರೆ.
ಮೋದಿ ಬಸವಣ್ಣನವರ ಭಕ್ತರಾ?ಲಿಂಗಾಯತ ಧರ್ಮಕ್ಕೆ ಮಾನ್ಯತೆ ನೀಡ್ತಾರಾ?
ಈ ಕುರಿತು ಈಗಾಗಲೇ ರಾಜ್ಯ ಸರ್ಕಾರಕ್ಕೆ ಮಾಹಿತಿ ಸಲ್ಲಿಸಲಾಗಿದ್ದು, ಕೇಂದ್ರ ಸರ್ಕಾರದ ಮುಂದೆ ಅಂತಹ ಯಾವುದೇ ಪ್ರಸ್ತಾವನೆ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಆ ಮೂಲಕ ರಾಜ್ಯದಲ್ಲಿ ಕಳೆದ ಹಲವು ವರ್ಷಗಳಿಂದ ನಡೆಯುತ್ತಿರುವ ಪ್ರತ್ಯೇಕ ಲಿಂಗಾಯತ ಧರ್ಮದ ಹೋರಾಟಕ್ಕೆ ಕೇಂದ್ರ ಸರ್ಕಾರ ದೊಡ್ಡ ಹೊಡೆತ ನೀಡಿದೆ.
ರಾಷ್ಟ್ರೀಯ ಅಲ್ಪಸಂಖ್ಯಾತರ ಆಯೋಗವು ಈ ಕುರಿತು ಗೃಹ ಇಲಾಖೆಗೆ ವರದಿ ಸಲ್ಲಿಸಿದ್ದು, ಲಿಂಗಾಯತ ಜಾತಿಯೂ ಹಿಂದು ಧರ್ಮದ ಭಾಗವಾಗಿದೆ.
ಅದಕ್ಕೆ ಪ್ರತ್ಯೇಕ ಧರ್ಮದ ಮಾನ್ಯತೆ ನೀಡಲು ಕಾನೂನಿನಲ್ಲಿ ಅವಕಾಶವಿಲ್ಲ ಎಂದು ಮಾಹಿತಿ ಕಳುಹಿಸಿತ್ತು. ಆ ವರದಿಯನ್ನು ಎತ್ತಿ ಹಿಡಿದಿರುವ ಕೇಂದ್ರ ಗೃಹ ಇಲಾಖೆ ರಾಜ್ಯ ಸರ್ಕಾರದ ಪ್ರಸ್ತಾಪವನ್ನು ತಿರಸ್ಕರಿಸಿದೆ.
ಪ್ರತ್ಯೇಕ ಧರ್ಮ ಪ್ರಸ್ತಾಪ ತಿರಸ್ಕರಿಸಿದ ಕೇಂದ್ರ ಸರ್ಕಾರದ ವಿರುದ್ದ ಹೋರಾಟ ಮತ್ತಷ್ಟು ತೀವ್ರಗೊಳ್ಳುವ ಸಾಧ್ಯತೆಯಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ