
ಹುಬ್ಬಳ್ಳಿ, (ಸೆ.9): ಕರ್ನಾಟಕದ ಪ್ರಮುಖ ರೈಲು ನಿಲ್ದಾಣಗಳಲ್ಲಿ ಒಂದಾದ ಹುಬ್ಬಳ್ಳಿ ರೈಲು ನಿಲ್ದಾಣಕ್ಕೆ ಶ್ರೀಸಿದ್ದಾರೂಢ ಸ್ವಾಮೀಜಿ ಅವರ ಹೆಸರು ನಾಮಕರಣ ಮಾಡಲು ಕೇಂದ್ರ ಗೃಹ ಇಲಾಖೆ ಆದೇಶಿಸಿದೆ.
ವಾಣಿಜ್ಯ ನಗರಿ ಹುಬ್ಬಳ್ಳಿಯ ರೈಲ್ವೇ ನಿಲ್ದಾಣಕ್ಕೆ ಉತ್ತರ ಕರ್ನಾಟಕ ಭಾಗದ ಆರಾಧ್ಯ ದೈವ ಹುಬಳ್ಳಿಯ ಸಿದ್ಧಾರೂಢರ ಹೆಸರನ್ನು ನಾಮಕರಣ ಮಾಡುವಂತೆ ಕೇಂದ್ರ ಗೃಹ ಇಲಾಖೆಯಿಂದ ರಾಜ್ಯ ಕಂದಾಯ ಇಲಾಖೆಗೆ ಆದೇಶದ ಪ್ರತಿ ರವಾನೆ ಮಾಡಲಾಗಿದೆ.
ಹುಬ್ಬಳ್ಳಿ ರೈಲ್ವೆ ನಿಲ್ದಾಣ ಮತ್ತಷ್ಟು ಹೈಟೆಕ್: ಭದ್ರತೆಗೆ ಬರಲಿವೆ RPSF
ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವರಾದ ಸುರೇಶ್ ಅಂಗಡಿ ಈ ಬಗ್ಗೆ ಸಂತಸ ವ್ಯಕ್ತಪಡಿಸಿದ್ದಲ್ಲದೆ ಗೃಹ ಸಚಿವ ಅಮಿತ್ ಶಾ ಹಾಗೂ ರೈಲ್ವೆ ಸಚಿವ ಪಿಯೂಷ್ ಗೋಯಲ್ ಅವರುಗಳಿಗೆ ಧನ್ಯವಾದ ಹೇಳಿದ್ದಾರೆ.
ಹುಬ್ಬಳ್ಳಿ ರೈಲ್ವೆ ನಿಲ್ದಾಣದ ಹೆಸರನ್ನು ಸಿದ್ದಾರೂಢ ಸ್ವಾಮಿಜಿ ರೈಲ್ವೆ ನಿಲ್ದಾಣ, ಹುಬ್ಬಳ್ಳಿ ಎಂದು ಬದಲಾಯಿಸಲು ಅನುಮೋದನೆ ನೀಡಿದ್ದಕ್ಕಾಗಿ ಗೃಹಸಚಿವ ಅಮಿತ್ ಶಾ ಹಾಗೂ ಪಿಯೂಷ್‌ಗೋಯಲ್ ಅವರಿಗೆ ಧನ್ಯವಾದಗಳು ಎಂದು ಟ್ವಿಟ್ ಮಾಡಿದ್ದಾರೆ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ