
ಬೆಂಗಳೂರು (ಮೇ.9): ವಿಬಿ ಜಿ ರಾಮ್ ಜಿ ಕಾಯ್ದೆ ತರುವುದಕ್ಕೂ ಮುಂಚೆ ನಮ್ಮೊಂದಿಗೆ ಕೇಂದ್ರ ಸರ್ಕಾರ ಮಾತುಕತೆ ನಡೆಸಿಲ್ಲ. ಸಂವಿಧಾನ, ಒಕ್ಕೂಟ ವ್ಯವಸ್ಥೆಯಲ್ಲಿ ರಾಜ್ಯಕ್ಕೆ ಆರ್ಥಿಕ ಹೊರೆಯಾಗುವುದಾದರೆ ನಮ್ಮ ಗಮನಕ್ಕೆ ತರಬೇಕು. ಆದರೆ, ಅದನ್ನು ಮಾಡಿಲ್ಲ. ಇದು ಸಂವಿಧಾನ ವಿರೋಧಿ ನಿರ್ಧಾರವಾಗಿದ್ದು, ಅದರ ವಿರುದ್ಧ ಹೋರಾಟ ಮಾಡುತ್ತೇವೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.
ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿ, ಒಕ್ಕೂಟ ವ್ಯವಸ್ಥೆಯಲ್ಲಿ ರಾಜ್ಯಕ್ಕೆ ಆರ್ಥಿಕ ಹೊರೆಯಾಗುವಂಥ ಯೋಜನೆ ತರುವುದಕ್ಕೂ ಮುನ್ನ ಆ ರಾಜ್ಯದ ಗಮನಕ್ಕೆ ತರಬೇಕು. ಆದರೆ, ಸಂವಿಧಾನ ವಿರೋಧಿಯಾಗಿ ವಿಬಿ ಗ್ರಾಮ್ ಜಿ ಕಾಯ್ದೆಯನ್ನು ಕೇಂದ್ರ ಸರ್ಕಾರ ಏಕಪಕ್ಷೀಯವಾಗಿ ಜಾರಿಗೊಳಿಸಲು ಮುಂದಾಗಿದೆ. ಕಾಯ್ದೆ ತರುವುದಕ್ಕೂ ಮುನ್ನ ನಮ್ಮೊಂದಿಗೆ ಮಾತುಕತೆ ನಡೆಸಿಲ್ಲ. ಈ ಎಲ್ಲದರ ಕುರಿತು ನಾವು ಹೋರಾಟ ಮಾಡುತ್ತೇವೆ ಎಂದರು.
ತಮಿಳುನಾಡು ಸರ್ಕಾರ ರಚನೆಯಲ್ಲಿ ರಾಜ್ಯಪಾಲರ ನಡೆ ಕುರಿತು ಪ್ರತಿಕ್ರಿಯಿಸಿದ ಪ್ರಿಯಾಂಕ್, ಕಳೆದೊಂದು ದಶಕದಿಂದ ರಾಜ್ಯಪಾಲರ ಕಚೇರಿಗಳು ಬಿಜೆಪಿ ಮತ್ತು ಆರ್‌ಎಸ್‌ಎಸ್ ಕಚೇರಿಯಾಗಿ ಬಳಕೆಯಾಗುತ್ತಿವೆ. ಸಂವಿಧಾನಿಕ ಹುದ್ದೆಯಲ್ಲಿದ್ದು ರಾಜಕೀಯ ಮಾಡಬಾರದು ಎಂದು ಆಕ್ರೋಶ ವ್ಯಕ್ತಪಡಿಸಿದರು.
ತಮಿಳುನಾಡಿನಲ್ಲಿ ಸರ್ಕಾರ ರಚನೆಗೆ ರಾಜ್ಯಪಾಲರು ಅಡ್ಡಿಪಡಿಸಿದ್ದರು. ಬೇರೆ ರಾಜ್ಯಗಳಲ್ಲಿ ಈ ರೀತಿ ಸನ್ನಿವೇಶವಿದ್ದಾಗ ಸರ್ಕಾರ ರಚನೆಗೆ ಅನುಮತಿಸಲಾಗಿತ್ತು. ಬಹುಮತವನ್ನು ರಾಜ್ಯಪಾಲರ ಬಳಿ ಸಾಬೀತುಪಡಿಸುವ ಅವಶ್ಯಕತೆಯಿಲ್ಲ. ಸದನದ ಒಳಗೆ ಅದನ್ನು ಸಾಬೀತುಪಡಿಸಬೇಕು. ಅದಕ್ಕೂ ಮುಂಚೆಯೇ ಶಾಸಕರ ಬೆಂಬಲವಿರುವ ಪತ್ರ ನೀಡಿದೆ ಎನ್ನುವುದು ಸರಿಯಲ್ಲ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ