ಪೊಲೀಸ್ ಕಸ್ಟಡಿ ಅಂತ್ಯ ಹಿನ್ನೆಲೆಯಲ್ಲಿ ನಗರದ 1ನೇ ಎಸಿಎಂಎಂ ನ್ಯಾಯಾಲಯಕ್ಕೆ ಚೈತ್ರಾ ಹಾಗೂ ಆಕೆಯ ಸಹಚರರನ್ನು ಸಿಸಿಬಿ ಪೊಲೀಸರು ಹಾಜರುಪಡಿಸಿದರು. ಬಳಿಕ ನ್ಯಾಯಾಲಯ ಆರೋಪಿಗಳನ್ನು 15 ದಿನ ನ್ಯಾಯಾಂಗ ಬಂಧನಕ್ಕೊಪ್ಪಿಸಿ ಆದೇಶಿಸಿತು.
ಬೆಂಗಳೂರು(ಸೆ.24): ಉಡುಪಿ ಜಿಲ್ಲೆ ಬೈಂದೂರು ಕ್ಷೇತ್ರದ ಬಿಜೆಪಿ ಟಿಕೆಟ್ ಕೊಡಿಸುವ ನೆಪದಲ್ಲಿ ಉದ್ಯಮಿಗೆ 5 ಕೋಟಿ ರು. ವಂಚನೆ ಪ್ರಕರಣದಲ್ಲಿ ಬಂಧಿತರಾಗಿದ್ದ ಹಿಂದೂ ಪರ ಸಂಘಟನೆಯ ಕಾರ್ಯಕರ್ತೆ ಚೈತ್ರಾ ಹಾಗೂ ಆಕೆಯ ಸಹಚರರು ಪೊಲೀಸ್ ಕಸ್ಟಡಿ ಮುಗಿದ ಹಿನ್ನೆಲೆಯಲ್ಲಿ ಶನಿವಾರ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹ ಸೇರಿದ್ದಾರೆ.
ಪೊಲೀಸ್ ಕಸ್ಟಡಿ ಅಂತ್ಯ ಹಿನ್ನೆಲೆಯಲ್ಲಿ ನಗರದ 1ನೇ ಎಸಿಎಂಎಂ ನ್ಯಾಯಾಲಯಕ್ಕೆ ಚೈತ್ರಾ ಹಾಗೂ ಆಕೆಯ ಸಹಚರರನ್ನು ಸಿಸಿಬಿ ಪೊಲೀಸರು ಹಾಜರುಪಡಿಸಿದರು. ಬಳಿಕ ನ್ಯಾಯಾಲಯ ಆರೋಪಿಗಳನ್ನು 15 ದಿನ ನ್ಯಾಯಾಂಗ ಬಂಧನಕ್ಕೊಪ್ಪಿಸಿ ಆದೇಶಿಸಿತು.
ಚೈತ್ರಾ ಕುಂದಾಪುರ ನಮ್ಮವಳಲ್ಲ ಎಂದು ಕೈಬಿಟ್ಟ ವಿಶ್ವ ಹಿಂದೂ ಪರಿಷತ್
ವಂಚನೆ ಪ್ರಕರಣ ಸಂಬಂಧ ಸೆ.13 ರಂದು ಹಿಂದೂ ಪರ ಸಂಘಟನೆ ಕಾರ್ಯಕರ್ತೆ ಚೈತ್ರಾ, ಚಿಕ್ಕಮಗಳೂರು ಜಿಲ್ಲಾ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಗಗನ್ ಕಡೂರು, ರಮೇಶ್, ಧನರಾಜ್, ಶ್ರೀಕಾಂತ್, ಚನ್ನನಾಯ್ಕ್ ಹಾಗೂ ಪ್ರಜ್ವಲ್‌ರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದರು. ಬಳಿಕ ಹೆಚ್ಚಿನ ತನಿಖೆಗೆ ಚೈತ್ರಾ ತಂಡವನ್ನು ಸಿಸಿಬಿ ವಶಕ್ಕೆ ಪಡೆದಿತ್ತು. ಹತ್ತು ದಿನಗಳ ಕಾಲ ಆರೋಪಿಗಳನ್ನು ತನಿಖೆಗೊಳಪಡಿಸಿದ್ದ ಪೊಲೀಸರು, ವಂಚನೆ ಕೃತ್ಯದಿಂದ ಚೈತ್ರಾ ತಂಡವು ಸಂಪಾದಿಸಿದ್ದ ಶೇ.88 ರಷ್ಟು ಹಣವನ್ನು ಜಪ್ತಿ ಮಾಡಿದ್ದರು. ಪೊಲೀಸ್ ಕಸ್ಟಡಿ ಅಂತ್ಯ ಹಿನ್ನೆಲೆಯಲ್ಲಿ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ಆರೋಪಿಗಳು ಸೇರಿದ್ದಾರೆ.