
ಬೆಂಗಳೂರು (ಸೆ.20): 'ವಾಲ್ಮೀಕಿ ಸಮಾಜದವರು ಕುರುಬ ಸಮಾಜದವರ ಮೇಲೆ ದಂಗೆ ಏಳಬೇಕು' ಎಂಬ ಹೇಳಿಕೆ ವಿಚಾರವಾಗಿ ದಾಖಲಾಗಿದ್ದ ಕೇಸಿಗೆ ಬಿಜೆಪಿ ನಾಯಕ ಚಲವಾದಿ ನಾರಾಯಣಸ್ವಾಮಿ ಅವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲವು ಮಧ್ಯಂತರ ಜಾಮೀನು ಮಂಜೂರು ಮಾಡಿದೆ.
ಏನಿದು ವಿವಾದ?
ಕುರುಬ ಸಮುದಾಯವನ್ನು ಎಸ್‌ಟಿ ವರ್ಗಕ್ಕೆ ಸೇರಿಸಬೇಕು ಎಂಬ ಬೇಡಿಕೆಯ ಸಂದರ್ಭದಲ್ಲಿ ಚಲುವಾದ ನಾರಾಯಣಸ್ವಾಮಿ, ವಾಲ್ಮೀಕಿ ಸಮಾಜದವರು ಕುರುಬರ ಮೇಲೆ ದಂಗೆ ಏಳಬೇಕು' ಎಂಬ ಪ್ರಚೋದನಾತ್ಮಕ ಹೇಳಿಕೆ ನೀಡಿದ್ದಾರೆ, ಈ ಹೇಳಿಕೆಯಿಂದ ಸಾಮಾಜಿಕ ಕಲಹಕ್ಕೆ ಕಾರಣವಾಯಿತು ಎಂದು ಆರೋಪಿಸಿ ವಿಧಾನಸೌಧ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಚಲವಾದಿ ನಾರಾಯಣಸ್ವಾಮಿ ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ಅವರ ನೇತೃತ್ವದ ನ್ಯಾಯಾಲಯವು ವಿಚಾರಣೆ ನಡೆಸಿತು. ನ್ಯಾಯಾಲಯವು ಚಲವಾದಿ ನಾರಾಯಣಸ್ವಾಮಿಗೆ ಮಧ್ಯಂತರ ಜಾಮೀನು ನೀಡಿ, ಪಬ್ಲಿಕ್ ಪ್ರಾಸಿಕ್ಯೂಟರ್‌ಗೆ ಆಕ್ಷೇಪಣೆ ಸಲ್ಲಿಸಲು ಸೂಚಿಸಿತು. ವಿಚಾರಣೆಯನ್ನು ಸೆಪ್ಟೆಂಬರ್ 23ಕ್ಕೆ ಮುಂದೂಡಲಾಗಿದೆ.
ಈ ಪ್ರಕರಣವು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ. ಕುರುಬ ಸಮುದಾಯದಿಂದ ಖಂಡನೆ ವ್ಯಕ್ತವಾಗಿದ್ದರೆ, ವಾಲ್ಮೀಕಿ ಸಮುದಾಯದ ಕೆಲವರು ಚಲವಾದಿ ನಾರಾಯಣಸ್ವಾಮಿ ಅವರ ಹೇಳಿಕೆ ಸಮರ್ಥಿಸಿದ್ದಾರೆ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ