
ಬೆಂಗಳೂರು (ಡಿ.5): ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಹೇಳಿರುವಂತೆ ತಾವು ಧರಿಸಿದ್ದ ಕಾರ್ಟಿಯರ್ ಕಂಪನಿಯ ವಾಚ್ ಬಗ್ಗೆ ಚುನಾವಣಾ ಅಫಿಡವಿಟ್‌ನಲ್ಲಿ ಪ್ರಸ್ತಾಪಿಸಿಲ್ಲ ಎಂದು ವಿಧಾನಪರಿಷತ್ತಿನ ಪ್ರತಿಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಹೇಳಿದ್ದಾರೆ.
ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ವಾಚ್ ವಿಚಾರದಲ್ಲಿ ಕೇಳಿದಾಗ ಸುಳ್ಯಾಕೆ ಹೇಳುತ್ತೀರಿ ಎಂದು ಶಿವಕುಮಾರ್ ಅವರನ್ನು ಪ್ರಶ್ನಿಸಿದರು.
ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿ ಒಂದೇ ಕಂಪನಿಯ ವಾಚ್ ಧರಿಸಿದ್ದಾರೆ. ಇದೊಂದು ಕಾಂಗ್ರೆಸ್ ಕಂಪನಿ ಇದ್ದಂತೆ ಎಂದು ಟೀಕಿಸಿದರು.
ಚುನಾವಣಾ ಅಫಿಡವಿಟ್‌ನಲ್ಲಿ ಶಿವಕುಮಾರ್ ಅವರು ಒಂದು ರೋಲೆಕ್ಸ್ ವಾಚ್ ₹9 ಲಕ್ಷ ಎಂದಿದ್ದಾರೆ. ಹ್ಯೂಬ್ಲೆಟ್ ವಾಚ್ ₹23,90,246 ಎಂದಿದ್ದಾರೆ. ಆದರೆ, ಅವರ ಕೈಯಲ್ಲಿ ಕಾರ್ಟಿಯರ್ ಕಂಪನಿಯ ವಾಚ್ ಇದೆ. ಅದರ ಇಂದಿನ ದರ ₹43 ಲಕ್ಷ ಇದ್ದು, ತೆರಿಗೆ ಸೇರಿ ₹46-47 ಲಕ್ಷ ಆಗುತ್ತದೆ ಎಂದರು.
ಇದು ಕದ್ದ ಮಾಲೇ? ಕೊಂಡ ಮಾಲೇ? ಒಂದು ವೇಳೆ ನೀವು ರಾಜ್ಯಕ್ಕೆ ಸುಳ್ಳು ಹೇಳಿದ್ದರೆ, ಕಾರ್ಡಿನಿಂದ ಪಾವತಿ ಆಗಿದ್ದರೆ ದಾಖಲೆ ಬಿಡುಗಡೆ ಮಾಡಿ ಎಂದು ಛಲವಾದಿ ಆಗ್ರಹಿಸಿದರು.
ಒಂದೂವರೆ ವರ್ಷ ಹಿಂದೆ ನಾನು ವಾಚ್‌ಗಳ ಬಗ್ಗೆ ಹೇಳಿದ್ದೆ. ಆಗ 8 ವಾಚ್ ಇತ್ತು. ಈಗ 18ರಿಂದ 19 ವಾಚ್‌ಗಳು ಇವೆ ಎಂಬ ಮಾಹಿತಿ ಲಭಿಸಿದೆ. ಎಲ್ಲಿ ಇವುಗಳ ಲೆಕ್ಕ ಕೊಟ್ಟಿದ್ದೀರಿ? ಈಗ ಇದಕ್ಕೆ ಲೆಕ್ಕ ಕೊಡಿ ಎಂದು ಒತ್ತಾಯಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ