
ಚಾಮರಾಜನಗರ, (ನ. 15): ಚಾಮರಾಜನಗರ ತಾಲೂಕಿನ ಜ್ಯೋತಿಗೌಡನಪುರದಲ್ಲಿ ಅ.23 ರಂದು ನಡೆದ ಬುದ್ಧ ಪ್ರತಿಮೆಯ ದ್ವಂಸ ಮತ್ತು ಡಾ. ಬಿ.ಆರ್. ಅಂಬೇಡ್ಕರ್ ಭಾವಚಿತ್ರದ ವಿರೂಪಗೊಳಿಸಿದ ಪ್ರಕರಣದಲ್ಲಿ ಅಮಾಯಕರನ್ನು ಬಂದಿಸಿದ ಆರೋಪ ಕೇಳಿಬಂದಿದ್ದು, ನಾಯಕ ಸಮುದಾಯದ ಸಾವಿರಾರು ಜನರು ಬೃಹತ್ ಪ್ರತಿಭಟನೆ ನಡೆಸಿದ್ದಾರೆ.
ಪ್ರಕರಣದಲ್ಲಿ ಆರೋಪಿಯನ್ನು ಬಿಟ್ಟು ಪೊಲೀಸರು ನಿರಪರಾಧಿಯನ್ನು ಬಂಧಿಸಿದ್ದಾರೆ ಎಂಬ ಗಂಭೀರ ಆರೋಪ ಮಾಡಿರುವ ನಾಯಕ ಸಮುದಾಯದವರು, ಬಿಡುಗಡೆ ಮಾಡುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಿದ್ದಾರೆ, ಪ್ರತಿಭಟನೆ ವೇಳೆ 'ನಿರಪರಾಧಿಯನ್ನು ಬಿಡುಗಡೆ ಮಾಡಿ, ನೈಜ ಆರೋಪಿಗಳನ್ನು ಬಂಧಿಸಿ' ಎಂದು ಘೋಷಣೆ ಕೂಗಿ ಪೊಲೀಸ್ ಇಲಾಖೆಯ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
ಈ ಪ್ರಕರಣದಲ್ಲಿ ನಾಯಕ ಸಮುದಾಯಕ್ಕೆ ಸೇರಿದ ವ್ಯಕ್ತಿಯನ್ನು ಬಂಧಿಸಿ, ಸಮುದಾಯಕ್ಕೆ ತರಲು ಹುನ್ನಾರ ನಡೆಸಿದ್ದಾರೆ ಎಂದು ಸಮುದಾಯದವರು ಗಂಭೀರ ಆರೋಪ ಮಾಡಿದ್ದಾರೆ. ಅಲ್ಲದೇ ಈ ಪ್ರಕರಣದಲ್ಲಿ 'ಸಾಕ್ಷಿ ಹೇಳುವಂತೆ ಪೊಲೀಸರು ಅಮಾಯಕರ ಮೇಲೆ ದೈಹಿಕವಾಗಿ ಕಿರುಕುಳ ನೀಡಿರುವ ಪೊಲೀಸ್ ಅಧಿಕಾರಿಗಳನ್ನ ಅಮಾನತು ಮಾಡುವಂತೆ ಒತ್ತಾಯಿಸಿದರು. ನಮ್ಮ ಬೇಡಿಕೆ ಈಡೇರುವವರೆಗೆ ಪ್ರತಿಭಟನೆ ಮುಂದುವರಿಯುತ್ತದೆ ಎಂದು ಎಚ್ಚರಿಕೆ ನೀಡಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ