Chamarajanagar: ಸರ್ಕಾರಿ ಶಾಲೆಗಳಿಗೆ ಮಕ್ಕಳ ದಾಖಲಾತಿ ಪ್ರಮಾಣ ಹೆಚ್ಚಳ! ಕಾರಣವೇನು ಗೊತ್ತಾ?

Published : Jun 11, 2025, 08:53 PM IST
Chamarajanagar

ಸಾರಾಂಶ

ಚಾಮರಾಜನಗರದಲ್ಲಿ ಸರ್ಕಾರಿ ಶಾಲೆಗಳಿಗೆ ಮಕ್ಕಳ ದಾಖಲಾತಿ ಹೆಚ್ಚಳವಾಗಿದೆ. ಎಲ್‌ಕೆಜಿ, ಯುಕೆಜಿ ಆರಂಭ, ಮೂಲಸೌಕರ್ಯಗಳ ಅಭಿವೃದ್ಧಿ ಮತ್ತು ಶಿಕ್ಷಕರ ಕೊರತೆ ನೀಗಿಸುವಿಕೆ ಇದಕ್ಕೆ ಕಾರಣ ಎನ್ನಲಾಗಿದೆ. ಕಳೆದ ಎರಡು ವರ್ಷಗಳಲ್ಲಿ 20ಕ್ಕೂ ಹೆಚ್ಚು ಶಾಲೆಗಳು ಮುಚ್ಚಿದ್ದವು.

ವರದಿ - ಪುಟ್ಟರಾಜು. ಆರ್. ಸಿ ಏಷಿಯಾನೆಟ್ ಸುವರ್ಣ ನ್ಯೂಸ್ , ಚಾಮರಾಜನಗರ.

ಚಾಮರಾಜನಗರ (ಜೂ.11): ಸರ್ಕಾರಿ ಶಾಲೆ ಅಂದ್ರೆ ಮೂಗು ಮುರಿಯುವವರೇ ಹೆಚ್ಚು. ಕಳೆದ ಎರಡು ವರ್ಷದ ಅವಧಿಯಲ್ಲಿ 20 ಕ್ಕೂ ಹೆಚ್ಚು ಶಾಲೆಗಳಿಗೆ ಬೀಗ ಬಿದ್ದಿದೆ. ಆದರೆ ಈ ವರ್ಷ ಗಡಿ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ಸಂಖ್ಯೆ ಹೆಚ್ಚಾಗಿದೆ. ಇದಕ್ಕೆ ಏನು ಕಾರಣ ಅಂತೀರಾ ಹಾಗಾದ್ರೆ ಈ ಸ್ಟೋರಿ ನೋಡಿ..

ಸರ್ಕಾರಿ ಶಾಲೆಗಳು ಅಂದ್ರೆ ಮೂಲಭೂತ ಸೌಕರ್ಯ ಕೊರತೆ ಇರುತ್ತದೆ. ಮಕ್ಕಳ ಕ್ವಾಲಿಟಿ ಎಜುಕೇಶನ್ ಗೆ ಹೆಚ್ಚು ಒತ್ತು ಕೊಡಲ್ಲ ಜೊತೆಗೆ ಸೂಕ್ತ ವಿಧ್ಯಾಭ್ಯಾಸ ದೊರೆಯಲ್ಲ ಎಂಬ ಕಾರಣದಿಂದ ಪೋಷಕರು ಇದೀಗಾ ಖಾಸಗಿ ಶಿಕ್ಷಣ ಶಾಲೆಗಳತ್ತ ಮುಖ ಮಾಡಿರೋದು ಎಲ್ಲರಿಗೂ ಗೊತ್ತಿರುವ ವಿಚಾರ. ಆದ್ರೆ ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಇದಕ್ಕೆ ತದ್ವಿರುದ್ಧ ಎಂಬ ರೀತಿಯಲ್ಲಿ ಈ ಬಾರಿ ಶೈಕ್ಷಣಿಕ ಅವಧಿಯಲ್ಲಿ ಸರ್ಕಾರಿ ಶಾಲೆಯತ್ತ ಹೆಚ್ಚು ಮಕ್ಕಳು ದಾಖಲಾತಿ ಪಡೆದಿದ್ದಾರೆ. ಇದು ಎಲ್ಲರ ಆಶ್ಚರ್ಯಕ್ಕೂ ಕೂಡ ಕಾರಣವಾಗಿದೆ, ಯಾಕಂದ್ರೆ ಕಳೆದ ಎರಡು ವರ್ಷದ ಅವಧಿಯಲ್ಲಿ 20 ಕ್ಕೂ ಹೆಚ್ಚು ಸರ್ಕಾರಿ ಶಾಲೆ ಮುಚ್ಚಿದ್ದವು. ಅಲ್ಲಿ ಕಟ್ಟಡದ ಕೊರತೆ, ಶಿಕ್ಷಕರ ಕೊರತೆ,ಮೂಲಭೂತ ಸೌಕರ್ಯ ಕೊರತೆಯಿದೆ ಎಂದು ಪೋಷಕರು ಖಾಸಗಿ ಶಾಲೆಗಳಿಗೆ ಮಕ್ಕಳನ್ನು ದಾಖಲಾತಿ ಮಾಡಿದ್ದರು. ಆದ್ರೆ ಈ ಬಾರಿ ಪರಿಸ್ಥಿತಿ ಸ್ವಲ್ಪ ಬದಲಾಗಿದ್ದು,ಸರ್ಕಾರಿ ಶಾಲೆಗಳಿಗೆ ಪೋಷಕರು ಸ್ವಲ್ಪ ಮಟ್ಟಿಗೆ ಒಲವು ತೋರಿದ್ದಾರೆ.

ಇನ್ನೂ ಸರ್ಕಾರಿ ಶಾಲೆಗಳತ್ತ ಮಕ್ಕಳು ಬರಲು,ಪೋಷಕರು ಒಲವು ತೋರಲು ಅನೇಕ ಕಾರಣಗಳಿಗಳಿವೆ.ಇದಕ್ಕೆ ಸರ್ಕಾರಿ ಪ್ರಾಥಮಿಕ ಶಾಲಾ ಹಂತದಲ್ಲಿ ಎಲ್ ಕೆಜಿ,ಯುಕೆಜಿ ಆರಂಭ ಕೂಡ ಪ್ರಮುಖ ಕಾರಣವಾಗಿದೆ.ಅಲ್ಲದೇ ಸಾಕಷ್ಟು ಶಾಲೆಗಳಿಗೆ ಸಿಆರ್ ಎಸ್ ಫಂಡ್ ಮೂಲಕ ಅಭಿವೃದ್ಧಿ ಪಡಿಸಲಾಗಿದೆ.ಶಿಕ್ಷಕರ ಕೊರತೆ ಕೂಡ ನೀಗಿಸುವ ಕೆಲಸವಾಗಿದೆ.ಅಲ್ಲದೇ ಸಾಕಷ್ಟು ಶಾಲೆಗಳ ಕಟ್ಟಡ ದುರಸ್ತಿ ಪಡಿಸಿಕೊಡಲಾಗಿದೆ.ಈ ಎಲ್ಲಾ ಕಾರಣಗಳಿಂದ ಮಕ್ಕಳು ಸರ್ಕಾರಿ ಶಾಲೆಗಳತ್ತ ಬಂದಿದ್ದಾರೆ.

ಒಟ್ನಲ್ಲಿ ಸರ್ಕಾರಿ ಶಾಲೆ ಅಂದ್ರೆ ಸಾಕು ಇಂದಿನ ಪೋಷಕರು ಮೂರು ಮೈಲಿ ದೂರ ಓಡುತ್ತಿದ್ದಾರೆ. ಈ ನಡುವೆ ಸರ್ಕಾರಿ ಶಾಲೆಯ ವ್ಯಾಸಂಗಕ್ಕೆ ಮಕ್ಕಳನ್ನು ಹೆಚ್ಚು ದಾಖಲಾತಿ ಮಾಡಿರುವುದು ಮಾತ್ರ ಒಂದು ಆಶಾದಾಯಕ ಬೆಳವಣಿಗೆಯೇ ಸರಿ..

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ನೊಂದವರಿಗೆ ನ್ಯಾಯ ಕೊಡಿಸುವಲ್ಲಿ ರಾಜ್ಯ ಮೊದಲ ಸ್ಥಾನ: ಗೃಹಸಚಿವ ಪರಮೇಶ್ವರ್
ಜಿಎಸ್‌ಟಿ ದರ ಬದಲಾವಣೆ ಬಳಿಕ ವಾಣಿಜ್ಯ ತೆರಿಗೆ ಸಂಗ್ರಹ ಕುಸಿತ