
ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಕೋವಿಡ್ ವೇಳೆ ಸಂಭವಿಸಿದ್ದ ಆಮ್ಲಜನಕ ದುರಂತದಿಂದ ಮೃತಪಟ್ಟವರ ಪೈಕಿ 25 ಮಂದಿಯ ಕುಟುಂಬದವರಿಗೆ ರಾಜ್ಯ ಸರ್ಕಾರ ಅದೇ ಜಿಲ್ಲಾಸ್ಪತ್ರೆಯಲ್ಲಿ ಕಾಯಂ ಉದ್ಯೋಗ ನೀಡಿದೆ.
ಗುಂಡ್ಲುಪೇಟೆಯಲ್ಲಿ ಮಂಗಳವಾರ ನಡೆದ ಕಾರ್ಯಕ್ರಮದಲ್ಲಿ ನೇಮಕಾತಿ ಪತ್ರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ವಿತರಣೆ ಮಾಡಿದರು. 2021ರ ಮೇ 2ರಂದು ಈ ದುರಂತ ಸಂಭವಿಸಿತ್ತು. ಮೃತರ ಕುಟುಂಬ ವರ್ಗಕ್ಕೆ ಕಾಯಂ ಉದ್ಯೋಗ ನೀಡುವುದಾಗಿ ಭಾರತ್ ಜೋಡೋ ಯಾತ್ರೆ ವೇಳೆ ರಾಹುಲ್ ಗಾಂಧಿ ಅವರು ಭರವಸೆ ನೀಡಿದ್ದರು.
ಕೊರೊನಾ ವೇಳೆ ಆಕ್ಸಿಜನ್ ದುರಂತದಲ್ಲಿ ಮೃತಪಟ್ಟ ಸಂತ್ರಸ್ತರ ಕುಟುಂಬಗಳು ನ್ಯಾಯಕ್ಕಾಗಿ ನಿರಂತರ ಹೋರಾಟಕ್ಕೆ ಮಾಡುತ್ತ ಬಂದಿದ್ದರು. ಇದೀಗ ಕೊನೆಗೂ ನ್ಯಾಯ ಸಿಕ್ಕಿದೆ. 5 ವರ್ಷಗಳ ಬಳಿಕ ಸಂತ್ರಸ್ತ ಕುಟುಂಬಗಳ ಸದಸ್ಯರಿಗೆ ಅದೇ ಆಸ್ಪತ್ರೆಯಲ್ಲಿ ಸರ್ಕಾರಿ ಕೆಲಸ ನೀಡಿದೆ.
ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಕೊರೋನಾ ಸಮಯದಲ್ಲಿ ಸಂಭವಿಸಿದ ಆಕ್ಸಿಜನ್ ದುರಂತ ಇಡೀ ದೇಶವನ್ನೇ ಬೆಚ್ಚಿಬೀಳಿಸಿತ್ತು. ಈ ವೇಳೆ 36 ಜನ ಆಕ್ಸಿಜನ್ ಕೊರತೆಯಿಂದ ಮೃತಪಟ್ಟಿದ್ದರು. ಅಂದು ಉಂಟಾದ ಆಘಾತ ಮತ್ತು ನೋವು ಇನ್ನೂ ಕುಟುಂಬಗಳನ್ನು ಕಾಡುತ್ತಿದ್ದು, ಜೀವನೋಪಾಯಕ್ಕಾಗಿ ಅವರು ಕಳೆದ ಐದು ವರ್ಷಗಳಿಂದ ಕಷ್ಟಗಳನ್ನು ಎದುರಿಸುತ್ತಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ