ದೇಗುಲಗಳಲ್ಲಿ ಬೇಕಾ ಬಿಟ್ಟಿ ದಾಸೋಹಕ್ಕೆ ಬ್ರೇಕ್ ಹಾಕಿದ ರಾಜ್ಯ ಸರ್ಕಾರ

Published : Dec 17, 2018, 04:24 PM IST
ದೇಗುಲಗಳಲ್ಲಿ ಬೇಕಾ ಬಿಟ್ಟಿ ದಾಸೋಹಕ್ಕೆ ಬ್ರೇಕ್ ಹಾಕಿದ ರಾಜ್ಯ ಸರ್ಕಾರ

ಸಾರಾಂಶ

ಚಾಮರಾಜನಗರ ಜಿಲ್ಲೆಯ ಸುಳ್ವಾಡಿ ಗ್ರಾಮದ ಮಾರಮ್ಮ ದೇವಸ್ಥಾನದ ಪ್ರಸಾದ ದುರಂತ ಪ್ರಕರಣ ನಡೆದ ಬಳಿಕ ಎಚ್ಚೆತ್ತಿರುವ ರಾಜ್ಯ ಸರ್ಕಾರ ಬೇಕಾ ಬಿಟ್ಟಿ ಪ್ರಸಾದ (ದಾಸೋಹ) ವಿತರಣೆಗೆ ಬ್ರೇಕ್ ಹಾಕಲು ಮುಂದಾಗಿದೆ. ದೇಗುಲಗಳಲ್ಲಿ ದಾಸೋಹಕ್ಕೆ ಕೆಲ ನಿಯಮಗಳನ್ನು ಜಾರಿಗೆ ತಂದಿದೆ.

ಬೆಂಗಳೂರು, (ಡಿ.17): ಇನ್ನುಮುಂದೆ ದೇವಸ್ಥಾನಗಳಲ್ಲಿ ಪ್ರಸಾದ ವಿತರಣೆಗೆ ಕಡ್ಡಾಯವಾಗಿ ಅನುಮತಿ ಪಡೆಯಲೇಬೇಕು ಎಂದು ಧಾರ್ಮಿಕ ದತ್ತಿ ಇಲಾಖೆ ಆದೇಶ ಹೊರಡಿಸಿದೆ.

ಚಾಮರಾಜನಗರದ ಕಿಚ್ಚುಗುತ್ತಿಯ ಮಾರಮ್ಮ ದೇವಾಲಯದಲ್ಲಿ ವಿಷ ಪ್ರಸಾದ ಸೇವಿಸಿ ನೂರಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿದ್ದು, 14 ಮಂದಿ ಮೃತಪಟ್ಟಿರುವ ಹಿನ್ನೆಲೆಯಲ್ಲಿ ಧಾರ್ಮಿಕ ದತ್ತಿ ಇಲಾಖೆ ಈ ಆದೇಶ ಹೊರಡಿಸಿದೆ.

ಸುಳ್ವಾಡಿ ವಿಷ ಪ್ರಕರಣ: ಪ್ರಸಾದದಲ್ಲಿತ್ತು ಮಾರಾಣಾಂತಿಕ ಕೀಟನಾಶಕ

ದೇವಸ್ಥಾನಗಳಲ್ಲಿ ಅನ್ನದಾಸೋಹ, ನೈವೇದ್ಯ, ಪ್ರಸಾದ ವಿತರಣೆಗೆ ಅನುಮತಿ ಪಡೆಯಲೇಬೇಕು, ಇಷ್ಟೇ ಅಲ್ಲದೆ ಸ್ಥಳೀಯ ಅಧಿಕಾರಿಗಳಿಂದಲೈ ಅನುಮತಿ ಪಡೆಯಬೇಕಿದೆ., ಅನುಮತಿ ಪಡೆಯದೆ ಅನ್ನದಾಸೋಹ ಮಾಡುವಂತಿಲ್ಲ.

ದಾಸೋಹ ತಯಾರಿಸುವ ಕೋಣೆಯಲ್ಲಿ ಸಿಸಿಟಿವಿಯನ್ನು ಕಡ್ಡಾಯವಾಗಿ ಅಳವಡಿಸಬೇಕು, ದೇವರಿಗೆ ನೈವೇದ್ಯ ನೀಡುವ ಮುನ್ನ ಪರಿಶೀಲನೆ ನಡೆಸಬೇಕು ಎಂದು ಧಾರ್ಮಿಕ ದತ್ತಿ ಇಲಾಖೆ ಆದೇಶದಲ್ಲಿ ತಿಳಿಸಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

'ನಿಮ್ಮ ಸುರಕ್ಷತೆ ನನಗೂ ಮುಖ್ಯ..' ಮಹಿಳಾ ಪ್ರಯಾಣಿಕರ ಮನ ಗೆದ್ದ ಆಟೋ ಚಾಲಕ, ಸಂದೇಶ ವೈರಲ್ ಮಾಡಿದ ಬೆಂಗಳೂರು ಪೊಲೀಸರು!
ರಾಜ್ಯದಲ್ಲಿ ಕೈ ಮೀರಿದ ಕಳ್ಳರ ಹಾವಳಿ, ಕಾನೂನು ವ್ಯವಸ್ಥೆ ಸಂಪೂರ್ಣ ವಿಫಲ? ಪೊಲೀಸರ ಮನೆಗಳನ್ನೇ ಬಿಡುತ್ತಿಲ್ಲ ಖದೀಮರು!