
ಬೆಂಗಳೂರು (ಆ.25) : ಚಂದ್ರಯಾನ-3 ಯೋಜನೆ ಯಶಸ್ಸಿಗೆ ಕಾರಣರಾದ ಇಸ್ರೋ ವಿಜ್ಞಾನಿಗಳನ್ನು ರಾಜ್ಯಪಾಲ ಥಾವರ್‌ಚಂದ್ ಗೆಹಲೋತ್ ಮತ್ತು ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಅವರು ಅಭಿನಂದಿಸಿದರು. ಪೀಣ್ಯದಲ್ಲಿನ ಇಸ್ರೋ ಕೇಂದ್ರಕ್ಕೆ ಶುಕ್ರವಾರ ರಾಜ್ಯಪಾಲರು ಮತ್ತು ಸಭಾಪತಿಗಳು ಪ್ರತ್ಯೇಕವಾಗಿ ಭೇಟಿ ನೀಡಿ, ಚಂದ್ರಯಾನ-3 ಯಶಸ್ವಿಯಾಗಿದ್ದರ ಕುರಿತು ವಿಜ್ಞಾನಿಗಳೊಂದಿಗೆ ಮಾತುಕತೆ ನಡೆಸಿದರು.
ರಾಜ್ಯಪಾಲ ಥಾವರ್‌ಚಂದ್ ಗೆಹಲೋತ್ ಅವರು ಮಾತನಾಡಿ, ಬಾಹ್ಯಾಕಾಶ ಪರಿಶೋಧನೆ ಮತ್ತು ಸಂಶೋಧನೆಯನ್ನು ಮುಂದುವರಿಸುವ ವಿಜ್ಞಾನಿಗಳ ನಿರಂತರ ಅನ್ವೇಷಣೆ ಹಾಗೂ ಅಚಲ ಬದ್ಧತೆಯು ರಾಷ್ಟ್ರಕ್ಕೆ ಹೆಮ್ಮೆ ತಂದಿದೆ. ಜತೆಗೆ ಜಾಗತಿಕ ಬಾಹ್ಯಾಕಾಶ ವೇದಿಕೆಯಲ್ಲಿ ಭಾರತದ ಪರಾಕ್ರಮವನ್ನು ಸಾಬೀತು ಪಡಿಸಿದೆ. ಇಸ್ರೋ ವಿಜ್ಞಾನಿಗಳ ನಿರಂತರ ಪ್ರಯತ್ನಗಳು ಭವಿಷ್ಯದ ಪೀಳಿಗೆಗೆ ಸ್ಫೂರ್ತಿ ನೀಡಲಿ ಮತ್ತು ಬಾಹ್ಯಾಕಾಶ ವಿಜ್ಞಾನ ಕ್ಷೇತ್ರದಲ್ಲಿ ಭಾರತದ ಸ್ಥಾನಮಾನವನ್ನು ಹೆಚ್ಚಿಸುವ ಪ್ರಯತ್ನ ಮುಂದುವರಿಯಲಿ ಎಂದು ಅಭಿಪ್ರಾಯಪಟ್ಟರು. ಇಸ್ರೋ ಕೇಂದ್ರದ ಭೇಟಿ ವೇಳೆ ಇಸ್ರೋ ಅಧ್ಯಕ್ಷ ಎಸ್. ಸೋಮನಾಥ್ ಮತ್ತು ಅವರ ತಂಡದ ಪ್ರಮುಖರನ್ನು ಸನ್ಮಾನಿಸಿದರು.
Chandrayan-3: ಇಸ್ರೋ ವಿಜ್ಞಾನಿಗಳಿಗೆ ಶೀಘ್ರ ರಾಜ್ಯ ಸರ್ಕಾರ ಸನ್ಮಾನ: ಸಿಎಂ
ವಿಜ್ಞಾನಿಗಳಿಗೆ ಸರ್ಕಾರದಿಂದ ಸನ್ಮಾನ: ಸಭಾಪತಿ ಹೊರಟ್ಟಿ
ರಾಜ್ಯಪಾಲರ ಭೇಟಿ ನಂತರ ಇಸ್ರೋ ಕೇಂದ್ರಕ್ಕೆ ಭೇಟಿ ನೀಡಿದ್ದ ಬಸವರಾಜ ಹೊರಟ್ಟಿಅವರು ಮಾತನಾಡಿ, ಭಾರತದವರು ಯಾವುದರಲ್ಲೂ ಕಡಿಮೆ ಇಲ್ಲ ಎಂಬುದನ್ನು ಇಡೀ ಜಗತ್ತಿಗೆ ತೋರಿಸಿದ್ದೀವಿ. ನಮ್ಮ ವಿಜ್ಞಾನಿಗಳು ಭಾರತದ ಹೆಸರನ್ನು ಮತ್ತಷ್ಟುಎತ್ತರಕ್ಕೆ ಏರಿಸಿದ್ದಾರೆ. ಚಂದ್ರಯಾನ-3ರಲ್ಲಿ ಕಾರ್ಯನಿರ್ವಹಿಸಿದ ಪ್ರತಿಯೊಬ್ಬರನ್ನೂ ರಾಜ್ಯ ಸರ್ಕಾರ ಸನ್ಮಾನಿಸಲಿದೆ. ಜತೆಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಕೂಡ ಇಸ್ರೋ ಕೇಂದ್ರಕ್ಕೆ ಭೇಟಿ ನೀಡಿ ವಿಜ್ಞಾನಿಗಳನ್ನು ಅಭಿನಂದಿಸುತ್ತಿದ್ದಾರೆ ಎಂದರು.
Chandrayaan-3 Updates: ಚಂದ್ರನ ಕಕ್ಷೆಯಲ್ಲಿ ಚಂದ್ರಯಾನ-2 ಜೊತೆ ಸಂಪರ್ಕ ಸಾಧಿಸಿದ ವಿಕ್ರಮ್ ಲ್ಯಾಂಡರ್!
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ