ರಾಘವೇಶ್ವರ ಭಾರತೀ ಸ್ವಾಮೀಜಿ ವಿರುದ್ಧ ಚಾರ್ಜ್‌ಶೀಟ್‌ ರದ್ದುಗೊಳಿಸಿದ ಹೈಕೋರ್ಟ್‌!

By Kannadaprabha News  |  First Published Apr 21, 2023, 8:59 AM IST

ರಾಮಕಥಾ ಗಾಯಕಿ ಮೇಲಿನ ಅತ್ಯಾಚಾರ ಪ್ರಕರಣದ ಹಿನ್ನೆಲೆಯಲ್ಲಿ ಸಂತ್ರಸ್ತೆಯ ಪತಿಯ ಸಹೋದರ ಶ್ಯಾಮ್‌ ಪ್ರಸಾದ್‌ ಶಾಸ್ತ್ರಿ ಆತ್ಮಹತ್ಯೆಗೆ ಕುಮ್ಮಕ್ಕು ನೀಡಿದ ಆರೋಪ ಸಂಬಂಧ ಹೊಸನಗರ ರಾಮಚಂದ್ರಾಪುರ ಮಠದ ಪೀಠಾಧಿಪತಿ ರಾಘವೇಶ್ವರ ಭಾರತೀ ಸ್ವಾಮೀಜಿ ಮತ್ತು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಹಿರಿಯ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್‌ ವಿರುದ್ಧ ದಾಖಲಿಸಲಾಗಿದ್ದ ದೋಷಾರೋಪ ಪಟ್ಟಿಯನ್ನು ಹೈಕೋರ್ಟ್‌ ರದ್ದುಪಡಿಸಿದೆ.


ಬೆಂಗಳೂರು (ಏ.21): ರಾಮಕಥಾ ಗಾಯಕಿ ಮೇಲಿನ ಅತ್ಯಾಚಾರ ಪ್ರಕರಣದ ಹಿನ್ನೆಲೆಯಲ್ಲಿ ಸಂತ್ರಸ್ತೆಯ ಪತಿಯ ಸಹೋದರ ಶ್ಯಾಮ್‌ ಪ್ರಸಾದ್‌ ಶಾಸ್ತ್ರಿ ಆತ್ಮಹತ್ಯೆಗೆ ಕುಮ್ಮಕ್ಕು ನೀಡಿದ ಆರೋಪ ಸಂಬಂಧ ಹೊಸನಗರ ರಾಮಚಂದ್ರಾಪುರ ಮಠದ ಪೀಠಾಧಿಪತಿ ರಾಘವೇಶ್ವರ ಭಾರತೀ ಸ್ವಾಮೀಜಿ ಮತ್ತು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಹಿರಿಯ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್‌ ವಿರುದ್ಧ ದಾಖಲಿಸಲಾಗಿದ್ದ ದೋಷಾರೋಪ ಪಟ್ಟಿಯನ್ನು ಹೈಕೋರ್ಟ್‌ ರದ್ದುಪಡಿಸಿದೆ.

ಸಿಐಡಿ ತನಿಖಾಧಿಕಾರಿಗಳು ತಮ್ಮ ವಿರುದ್ಧ ಪುತ್ತೂರು ಮ್ಯಾಜಿಸ್ಪ್ರೇಟ್‌ ನ್ಯಾಯಾಲಯಕ್ಕೆ ಸಲ್ಲಿಸಿರುವ ದೋಷಾರೋಪ ಪಟ್ಟಿಯನ್ನು ರದ್ದುಗೊಳಿಸುವಂತೆ ಕೋರಿ ರಾಘವೇಶ್ವರ ಭಾರತೀ ಸ್ವಾಮೀಜಿ ಮತ್ತು ಕಲ್ಲಡ್ಕ ಪ್ರಭಾಕರ ಭಟ್‌ ಸಲ್ಲಿಸಿದ್ದ ಕ್ರಿಮಿನಲ್‌ ಅರ್ಜಿಗಳನ್ನು ಪುರಸ್ಕರಿಸಿದ ನ್ಯಾಯಮೂರ್ತಿ ಹೇಮಂತ ಚಂದನಗೌಡರ್‌ ಅವರ ನ್ಯಾಯಪೀಠ ಈ ಆದೇಶ ಮಾಡಿದೆ.

Tap to resize

Latest Videos

ಹಣಕ್ಕೆ ಮತ ಹಾಕೋದೇ ಜನರಿಗೆ ಇಷ್ಟ: ಹೈಕೋರ್ಟ್‌!

ಸ್ವಾಮೀಜಿಗಳ ಪರ ವಕೀಲ ಪಿ.ಎನ್‌.ಮನಮೋಹನ್‌ ಮತ್ತು ಕಲ್ಲಡ್ಕ ಪ್ರಭಾಕರ ಭಟ್‌ ಪರ ಹಿರಿಯ ವಕೀಲ ಪಿ.ಪಿ.ಹೆಗ್ಡೆ ವಾದ ಮಂಡಿಸಿ, ಅರ್ಜಿದಾರರು ಶ್ಯಾಮ್‌ ಪ್ರಸಾದ್‌ ಶಾಸ್ತ್ರಿ ಅವರ ಆತ್ಮಹತ್ಯೆಗೆ ಪ್ರಚೋದನೆ ನೀಡಿದ್ದಾರೆ ಎಂಬುದಕ್ಕೆ ಯಾವುದೇ ಸಾಕ್ಷ್ಯಾಧಾರ ಇಲ್ಲ. ಹತಾಶ ಮನೋಭಾವದಿಂದ ಶ್ಯಾಮ್‌ ಪ್ರಸಾದ್‌ ಶಾಸ್ತ್ರಿ ಆತ್ಮಹತ್ಯೆಗೆ ಶರಣಾದಂತಿದೆ. ಅವರು ಬರೆದಿಟ್ಟಿದ್ದ ಮರಣ ಪತ್ರದಲ್ಲೂ ಸಹ ಅರ್ಜಿದಾರರ ಹೆಸರುಗಳ ಉಲ್ಲೇಖವಿಲ್ಲ. ಘಟನೆ ನಡೆದ ಒಂದು ತಿಂಗಳ ನಂತರ ತನಿಖಾಧಿಕಾರಿಗಳು ಸುಳ್ಳು ಹೇಳಿಕೆ ತಯಾರಿಸಿ ವಿಚಾರಣಾ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿಸಲ್ಲಿಸಿದ್ದಾರೆ. ಆದ್ದರಿಂದ ದೊಷಾರೋಪ ಪಟ್ಟಿಯನ್ನು ರದ್ದುಪಡಿಸಬೇಕು ಎಂದು ಕೋರಿದ್ದರು.

ಈ ವಾದ ಪುರಸ್ಕರಿಸಿದ ಹೈಕೋರ್ಟ್‌, ರಾಘವೇಶ್ವರ ಭಾರತೀ ಸ್ವಾಮೀಜಿ ಮತ್ತು ಕಲ್ಲಡ್ಕ ಪ್ರಭಾಕರ ಭಟ್‌ ವಿರುದ್ಧದ ದೋಷಾರೋಪ ಪಟ್ಟಿರದ್ದುಪಡಿಸಿ ಆದೇಶಿಸಿದೆ. ರಾಮಕಥಾ ಗಾಯಕಿಯ ಪತಿ ದಿವಾಕರ ಶಾಸ್ತ್ರಿ ಅವರ ಸಹೋದರ ಶ್ಯಾಮ್‌ ಪ್ರಸಾದ್‌ ಶಾಸ್ತ್ರಿ ಪುತ್ತೂರಿನ ಕೆದಿಲ ಗ್ರಾಮದಲ್ಲಿ 2014ರ ಸೆ.1 ರಂದು ಬಂದೂಕಿನಿಂದ ಗುಂಡು ಹಾರಿಸಿಕೊಂಡು ಅತ್ಮಹತ್ಯೆ ಮಾಡಿಕೊಂಡಿದ್ದರು. ಪ್ರಕರಣ ಸಂಬಂಧ ಮೃತರ ಪತ್ನಿ ಪೊಲೀಸರಿಗೆ ದೂರು ಸಲ್ಲಿಸಿದ್ದರು.

ಡಿಕೆಶಿ ಅಕ್ರಮ ಆಸ್ತಿ ಗಳಿಕೆ ಕೇಸ್‌: ಸರ್ಕಾರದ ಶಿಫಾರಸು ಪ್ರಶ್ನಿಸಿದ್ದ ಅರ್ಜಿ ಹೈಕೋರ್ಟಲ್ಲಿ ವಜಾ

ಅತ್ಯಾಚಾರ ಆರೋಪ ಪ್ರಕರಣವನ್ನು ಹಿಂಪಡೆಯುವಂತೆ ಸಂತ್ರಸ್ತೆಗೆ ಹೇಳಬೇಕು. ಪ್ರಕರಣದಲ್ಲಿ ಸ್ವಾಮೀಜಿ ಪರ ನಿಲ್ಲಬೇಕು ಎಂದು ಸ್ವಾಮೀಜಿ ಕಡೆಯವರು ದೂರವಾಣಿ ಮೂಲಕ ಶ್ಯಾಮ್‌ ಪ್ರಸಾದ್‌ ಶಾಸ್ತ್ರಿ ಅವರಿಗೆ ಒತ್ತಡ ಹಾಕಿದ್ದರು. ಈ ಒತ್ತಡ ಹೇರುವ ಹಿಂದೆ ಕಲ್ಲಡ್ಕ ಪ್ರಭಾಕರ ಭಟ್‌ ಮತ್ತಿತರರು ಇದ್ದರು ಎಂದು ದೂರುದಾರೆ ಆರೋಪಿಸಿದ್ದರು. ಈ ಪ್ರಕರಣದ ತನಿಖೆ ನಡೆಸಿದ್ದ ಸಿಐಡಿ ಪೊಲೀಸರು, ರಾಘವೇಶ್ವರ ಭಾರತೀ ಸ್ವಾಮೀಜಿ ಮತ್ತು ಕಲ್ಲಡ ಪ್ರಭಾಕರ್‌ ಭಟ್‌ ವಿರುದ್ಧ ಪುತ್ತೂರು ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿಸಲ್ಲಿಸಿತ್ತು. ಅದನ್ನು ಪ್ರಶ್ನಿಸಿ ಇಬ್ಬರು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

click me!