
ಕಾರವಾರ: ರಾಷ್ಟ್ರೀಯ ಹೆದ್ದಾರಿಯಲ್ಲೇ ಟ್ಯಾಂಕರ್‌ವೊಂದು ಸ್ಫೋಟವಾಗಿ ಹೊತ್ತಿ ಉರಿದ ಘಟನೆ ನಡೆದಿದೆ. ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 52ರಲ್ಲಿ ಘಟನೆ ನಡೆದಿದ್ದು, ರಾಸಾಯನಿಕ ತುಂಬಿದ ಟ್ಯಾಂಕರ್ ಬ್ಲಾಸ್ಟ್ ಆಗಿ ಹೊತ್ತಿ ಉರಿದಿದೆ.
ಘಟನೆಯ ಬಳಿಕ ಟ್ಯಾಂಕರ್ ಚಾಲಕನ ಸುಳಿವು ಯಾರಿಗೂ ಸಿಕ್ಕಿಲ್ಲ, ಹೀಗಾಗಿ ಚಾಲಕ ಈ ಬೆಂಕಿಗೆ ಸಿಲುಕಿರಬಹುದೇ ಎಂಬ ಅನುಮಾನ ಮೂಡಿದೆ. ಟ್ಯಾಂಕರ್ ಧಗಧಗನೇ ಹೊತ್ತಿ ಉರಿಯುತ್ತಿರುವ ಹಿನ್ನೆಲೆ ಟ್ಯಾಂಕರ್‌ನ ಹತ್ತಿರ ಯಾರಿಗೂ ಹೋಗಲಾಗದಂತಹ ಸ್ಥಿತಿ ಇದೆ. ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಕಂಚಿನಬಾಗಿಲು ಬಳಿ ಈ ಘಟನೆ ನಡೆದಿದೆ.
ಹುಬ್ಬಳ್ಳಿ-ಅಂಕೋಲಾ ಸಂಚಾರ ಸಂಪೂರ್ಣ ಸ್ಥಗಿತ.
ಘಟನೆಯ ಹಿನ್ನೆಲೆ ಮುಂಜಾಗೃತ ಕ್ರಮವಾಗಿ ರಾಷ್ಟ್ರೀಯ ಹೆದ್ದಾರಿ 52ರಲ್ಲಿ ಅಂಕೋಲಾದಿಂದ ಹುಬ್ಬಳ್ಳಿ ಸಂಪರ್ಕಿಸುವ ಹೆದ್ದಾರಿಯಲ್ಲಿ ವಾಹನ ಸಂಚಾರ ಸ್ಥಗಿತಗೊಳಿಸಲಾಗಿದೆ. ಬೆಂಕಿಯಿಂದಾಗಿ ಟ್ಯಾಂಕರ್ ಧಗಧಗಿಸಿ ಹೊತ್ತಿ ಉರಿಯುತ್ತಿದ್ದು, ಬೆಂಕಿಯ ಕೆನ್ನಾಲಿಗೆ ಆಕಾಶಕ್ಕೆ ಚಾಚಿದೆ ದಟ್ಟ ಹೊಗೆ ಅಲ್ಲಿ ಮೇಲೆರುತ್ತಿದೆ. ಸ್ಥಳಕ್ಕೆ ಅಂಕೋಲಾ ಪೋಲಿಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಇದನ್ನೂ ಓದಿ: ಕೇವಲ ಒಂದು ದಿನದ ಖಡ್ಗಮೃಗ ಮರಿಯ ಎಂದಾದರೂ ನೋಡಿದ್ದೀರಾ? IFS ಅಧಿಕಾರಿ ಹಂಚಿಕೊಂಡ ಅಪರೂಪದ ವೀಡಿಯೋ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ