
ಬೆಂಗಳೂರು, (ಸೆ.16): ಚನ್ನೈನಲ್ಲಿರುವ ಅಮೆರಿಕ ದೂತಾವಾಸದ ಕಾನ್ಸಲ್ ಜನರಲ್ ಜ್ಯುಡಿತ್ ರೇವಿನ್ ಅವರು ಇಂದು (ಬುಧವಾರ) ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರೊಂದಿಗೆ ವರ್ಚುಯಲ್ ಸಭೆ ನಡೆಸಿದರು.
ಬೆಂಗಳೂರಿನಲ್ಲಿ ಯು.ಎಸ್.ರಾಯಭಾರಿ ಕಚೇರಿಯನ್ನು ತೆರೆಯಬೇಕೆನ್ನುವುದು ನಮ್ಮ ಬಹು ದಿನಗಳ ಬೇಡಿಕೆಯಾಗಿದ್ದು, ಕಚೇರಿಯ ಸ್ಥಾಪನೆಗೆ ಅಗತ್ಯವಿರುವ ಎಲ್ಲ ಸಹಕಾರವನ್ನು ನೀಡುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು.
ಚೀನಾ-ಪಾಕ್ ಡೀಲ್, ಡಿಕೆಶಿ ಮಗಳವಿವಾಹಕ್ಕೆ ಡೇಟ್ ಫಿಕ್ಸ್: ಇಲ್ಲಿದೆ ಸೆ. 16ರ ಟಾಪ್ 10 ಸುದ್ದಿ!
ಭಾರತದಲ್ಲಿರುವ 100 ಅಮೆರಿಕಾ ಸಂಸ್ಥೆಗಳ ಪೈಕಿ ಸಿಸ್ಕೋ, ಐ.ಬಿ.ಎಂ, ಇಂಟೆಲ್, ಜಿ.ಇ, ಹೆಚ್.ಪಿ, ಒರಾಕಲ್, ಯು.ಟಿ.ಸಿ ಸೇರಿದಂತೆ 90 ಕಂಪನಿಗಳು ಬೆಂಗಳೂರಿನಲ್ಲಿಯೇ ನೆಲೆಸಿವೆ ಎಂದು ಮುಖ್ಯಮಂತ್ರಿಗಳು ಅವರು ತಿಳಿಸಿದರು. ಕರ್ನಾಟಕ ಬಂಡವಾಳ ಸ್ನೇಹಿ ರಾಜ್ಯವಾಗಿದ್ದು, ಅಮೆರಿಕದಿಂದ ಹೆಚ್ಚಿನ ಬಂಡವಾಳವನ್ನು ಸ್ವಾಗತಿಸುತ್ತೇವೆ ಎಂದರು.
ನವೋದ್ಯಮ ಶ್ರೇಯಾಂಕದಲ್ಲಿ ಕರ್ನಾಟಕ ಮೊದಲ ಸ್ಥಾನ ಪಡೆದಿರುವುದಕ್ಕೆ ಮುಖ್ಯಮಂತ್ರಿಗಳನ್ನು ಅಭಿನಂದಿಸಿದ ಕಾನ್ಸಲ್ ಜನರಲ್ ಅವರು ಬಾಹ್ಯಾಕಾಶ ತಂತ್ರಜ್ಞಾನದಲ್ಲಿ ಸಹಯೋಗ, ಆರ್ಥಿಕ ವ್ಯವಹಾರಗಳ ವಿಸ್ತರಣೆ, ವಿದ್ಯಾರ್ಥಿ ವಿನಿಮಯ ಕಾರ್ಯಕ್ರಮಗಳು, ಸಂಶೋಧನೆ, ಕೋವಿಡ್ ಸಂದರ್ಭದಲ್ಲಿ ಆರೋಗ್ಯ ಸೇವೆ ಸೇರಿದಂತೆ ಜ್ಯುಡಿತ್ ರೇವಿನ್ ಅವರು ಚರ್ಚಿಸಿದರು.
ಸಭೆಯಲ್ಲಿ ಮುಖ್ಯ ಕಾರ್ಯದರ್ಶಿ ಟಿ. ಎಂ.ವಿಜಯಭಾಸ್ಕರ್, ಮುಖ್ಯ ಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ಡಾ.ಇ. ವಿ.ರಮಣರೆಡ್ಡಿ, ಮುಖ್ಯಮಂತ್ರಿಗಳ ಸಲಹೆಗಾರ ಎಂ.ಲಕ್ಷ್ಮೀನಾರಾಯಣ್, ಮುಖ್ಯಮಂತ್ರಿಗಳ ಕಾರ್ಯದರ್ಶಿ ಸೆಲ್ವಕುಮಾರ್, ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಕಾರ್ಯದರ್ಶಿ ಗೌರವ್ ಗುಪ್ತಾ ಉಪಸ್ಥಿತರಿದ್ದರು
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ