ರಾಜ್ಯದತ್ತ ಛತ್ತೀಸ್‌ಗಢ ನಕ್ಸಲರು? ಕೇಂದ್ರ ಗುಪ್ತಚರ ಮಾಹಿತಿ

Kannadaprabha News   | Kannada Prabha
Published : May 30, 2025, 05:14 AM IST
Naxal Operation in Chattisgarh

ಸಾರಾಂಶ

ರಾಜ್ಯದಲ್ಲಿನ 6 ನಕ್ಸಲರು ಶರಣಾಗತಿ ನಂತರವೂ ರಾಜ್ಯದ ಗಡಿ ಭಾಗದಲ್ಲಿ ನಕ್ಸಲ್‌ ಚಟುವಟಿಕೆಯ ಸುಳಿವು ದೊರೆತ ಹಿನ್ನೆಲೆಯಲ್ಲಿ ನಕ್ಸಲ್‌ ನಿಗ್ರಹ ಪಡೆ ವಿಸರ್ಜಿಸುವ ನಿರ್ಧಾರದಿಂದ ಹಿಂದೆ ಸರಿದಿರುವ ರಾಜ್ಯ ಸರ್ಕಾರ, ಮುಂದಿನ 3 ವರ್ಷಗಳವರೆಗೆ ನಕ್ಸಲ್‌ ನಿಗ್ರಹ ಪಡೆಯನ್ನು ಮುಂದುವರಿಸಿ ಆದೇಶಿಸಿದೆ.

ಬೆಂಗಳೂರು (ಮೇ.30): ರಾಜ್ಯದಲ್ಲಿನ 6 ನಕ್ಸಲರು ಶರಣಾಗತಿ ನಂತರವೂ ರಾಜ್ಯದ ಗಡಿ ಭಾಗದಲ್ಲಿ ನಕ್ಸಲ್‌ ಚಟುವಟಿಕೆಯ ಸುಳಿವು ದೊರೆತ ಹಿನ್ನೆಲೆಯಲ್ಲಿ ನಕ್ಸಲ್‌ ನಿಗ್ರಹ ಪಡೆ ವಿಸರ್ಜಿಸುವ ನಿರ್ಧಾರದಿಂದ ಹಿಂದೆ ಸರಿದಿರುವ ರಾಜ್ಯ ಸರ್ಕಾರ, ಮುಂದಿನ 3 ವರ್ಷಗಳವರೆಗೆ ನಕ್ಸಲ್‌ ನಿಗ್ರಹ ಪಡೆಯನ್ನು ಮುಂದುವರಿಸಿ ಆದೇಶಿಸಿದೆ. ಛತ್ತೀಸ್‌ಗಢ, ಜಾರ್ಖಂಡ್‌ನಿಂದ ನಕ್ಸಲರು ಕರ್ನಾಟಕಕ್ಕೆ ಸ್ಥಳಾಂತರಗೊಳ್ಳುತ್ತಿದ್ದಾರೆ ಎಂಬ ಕೇಂದ್ರ ಗುಪ್ತಚರ ಮಾಹಿತಿ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಂಡಿದೆ.

ಕಳೆದ ಜನವರಿಯಲ್ಲಿ ಕರ್ನಾಟಕ, ಕೇರಳ ಮತ್ತು ತಮಿಳುನಾಡು ರಾಜ್ಯಗಳಲ್ಲಿ ಸತತ ಎರಡು ದಶಕಕ್ಕೂ ಹೆಚ್ಚಿನ ಕಾಲ ಸಶಸ್ತ್ರ ನಕ್ಸಲ್‌ ಚಟುವಟಿಕೆಗಳಲ್ಲಿ ತೊಡಗಿದ್ದ 6 ಮಂದಿ ನಕ್ಸಲೀಯರು ಸರ್ಕಾರದೆದುರು ಶರಣಾಗಿದ್ದರು. ನಂತರ ಕರ್ನಾಟಕವು ನಕ್ಸಲ್‌ ಮುಕ್ತ ರಾಜ್ಯವಾಗಿದೆ ಎಂದು ಘೋಷಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, ನಕ್ಸಲ್‌ ನಿಗ್ರಹ ಪಡೆ ವಿಸರ್ಜಿಸುವುದಾಗಿಯೂ ತಿಳಿಸಿದ್ದರು. ಈ ಕುರಿತು 2025-26ನೇ ಸಾಲಿನ ರಾಜ್ಯ ಬಜೆಟ್‌ನಲ್ಲೂ ಘೋಷಿಸಿದ್ದರು.

ಆದರೆ, ಗುಪ್ತಚರ ಇಲಾಖೆ ಮಾಹಿತಿಯಂತೆ ಅಸ್ತಿತ್ವದಲ್ಲಿರುವ ನಕ್ಸಲರು ಛತ್ತೀಸ್‌ಗಢ, ಜಾರ್ಖಂಡ್‌ ರಾಜ್ಯಗಳಿಂದ ಕರ್ನಾಟಕ, ಕೇರಳ ಮತ್ತು ತಮಿಳುನಾಡು ಗಡಿ ಪ್ರದೇಶಗಳಿಗೆ ಸ್ಥಳಾಂತರಗೊಳ್ಳುತ್ತಿದ್ದಾರೆ ಎಂದು ಮಾಹಿತಿ ನೀಡಿದೆ. ಹೀಗಾಗಿ ರಾಜ್ಯದಲ್ಲಿ ವಿರ್ಸಜಿಸಲು ನಿರ್ಧರಿಸಲಾಗಿದ್ದ ನಕ್ಸಲ್‌ ನಿಗ್ರಹ ಪಡೆಯನ್ನು ಮುಂದಿನ 3 ವರ್ಷಗಳವರೆಗೆ ಮುಂದುವರಿಸಲು ಸರ್ಕಾರ ನಿರ್ಧರಿಸಿದೆ. ಛತ್ತೀಸ್‌ಗಢ, ಜಾರ್ಖಂಡ್‌ನಲ್ಲಿ ನಕ್ಸಲ್‌ ನಿಗ್ರಹ ಕಾರ್ಯಾಚರಣೆ ತೀವ್ರಗೊಂಡಿದೆ.

ಸಿಬ್ಬಂದಿ ಕಡಿತ: ಆದರೆ, ಹಾಲಿ ಇರುವ ಸಿಬ್ಬಂದಿ ಬಲವನ್ನು ಕಡಿಮೆ ಮಾಡಲಾಗುತ್ತಿದೆ. ಅದರಂತೆ ಪ್ರಸ್ತುತ ನಕ್ಸಲ್‌ ನಿಗ್ರಹ ಪಡೆಯಲ್ಲಿರುವ 656 ಹುದ್ದೆಗಳಿವೆ. ಅದರಲ್ಲಿ 258 ಹುದ್ದೆಗಳನ್ನು ಕೋಮು ಸೌಹಾರ್ದ ಕದಡುವವರ ವಿರುದ್ಧ ಕ್ರಮ ಕೈಗೊಳ್ಳಲು ಸರ್ಕಾರ ರಚಿಸಿರುವ ವಿಶೇಷ ಕಾರ್ಯಪಡೆಗೆ ವರ್ಗಾಯಿಸಲಾಗಿದೆ. ಉಳಿದಂತೆ ವಿವಿಧ ದರ್ಜೆಯ 376 ಹುದ್ದೆಗಳನ್ನು ನಕ್ಸಲ್‌ ನಿಗ್ರಹ ಪಡೆಯಲ್ಲಿಯೇ ಮುಂದುವರಿಸಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಸಿಎಂ ಕುರ್ಚಿ ಪೈಪೋಟಿಯಲ್ಲಿ ರೈತ ಸಮಸ್ಯೆ ಗೌಣ: ಬಿ.ವೈ.ವಿಜಯೇಂದ್ರ ಟೀಕೆ
ಕರ್ನಾಟಕದಲ್ಲಿ ಶೇ.63 ಭ್ರಷ್ಟಾಚಾರ: ಸಿಬಿಐ ತನಿಖೆಗೆ ಒತ್ತಾಯಿಸಿದ ಆರ್‌.ಅಶೋಕ್‌