
ಬೆಳಗಾವಿ(ಅ.23): ನಾಡಿನ ಹೆಮ್ಮೆಯ ಸ್ವಾತಂತ್ರ್ಯ ಹೋರಾಟಗಾರ್ತಿ ಕಿತ್ತೂರು ರಾಣಿ ಚೆನ್ನಮ್ಮ ಕುರಿತಾದ ಮೂಢನಂಬಿಕೆಗೆ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಕೂಡ ಒಳಗಾದ್ರಾ ಎಂಬ ಅನುಮಾನ ಇದೀಗ ಮೂಡಿದೆ.
ಕಿತ್ತೂರು ಉತ್ಸವ ಉದ್ಘಾಟನೆಗೆ ಬರಬೇಕಿದ್ದ ಸಿಎಂ ಕುಮಾರಸ್ವಾಮಿ ಸಮಾರಂಭಕ್ಕೆ ಗೈರು ಹಾಜರಾಗಿರುವುದು ಇಂತದ್ದೊಂದು ಅನುಮಾನ ಮೂಡಲು ಕಾರಣವಾಗಿದೆ.
ಕಿತ್ತೂರಿನ ಚೆನ್ನಮ್ಮಾಜಿ ಪುತ್ಥಳಿಗೆ ಮಾಲಾರ್ಪಣೆ ಮಾಡಿದರೆ ಅಧಿಕಾರ ಹೋಗುತ್ತದೆ ಎಂಬ ಮೂಢನಂಬಿಕೆ ಜನಪ್ರತಿನಿಧಿಗಳಲ್ಲಿದ್ದು, ಸಿಎಂ ಕೂಡ ಇದೇ ಮೂಢನಂಬಿಕೆಯ ಶಿಕಾರಿಯಾಗಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.
ಚೆನ್ನಮ್ಮ ಪುತ್ಥಳಿಗೆ ಮಾಲಾರ್ಪಣೆ ಮಾಡಿದರೆ ಅಧಿಕಾರ ಹೋಗುತ್ತದೆ ಎಂಬ ಭಯದಿಂದ ಈ ಹಿಂದೆ ಕೆಲವು ಜನಪ್ರತಿನಿಧಿಗಳು ತಮ್ಮ ಕಾರು ಚಾಲಕರಿಂದ ಮಾಲಾರ್ಪಣೆ ಮಾಡಿಸಿದ ಪ್ರಸಂಗವೂ ನಡೆದಿದೆ.
ಈ ಕುರಿತು ಪ್ರತಿಕ್ರಿಯೆ ನೀಡಿರುವ ಕಿತ್ತೂರಿನ ರಾಜಗುರು ಸಂಸ್ಥಾನ ಕಲ್ಮಠದ ಮಡಿವಾಳ ರಾಜಯೋಗೆಂದ್ರ ಸ್ವಾಮಿಜಿ, ನಾಡಿನ ಹೆಮ್ಮೆಯಾದ ಕಿತ್ತೂರು ಉತ್ಸವಕ್ಕೆ ಸಿಎಂ ಕುಮರಸ್ವಾಮಿ ಬರದೇ ಇರುವುದು ಸರಿಯಲ್ಲ ಎಂದು ಹರಿಹಾಯ್ದಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ