ಸಿಎಂ ಸಿದ್ದರಾಮಯ್ಯ ದಿಢೀರ್ ಆಸ್ಪತ್ರೆಗೆ ದಾಖಲು; ಎಲ್ಲ ಕಾರ್ಯಕ್ರಮಗಳೂ ರದ್ದು!

Published : Feb 02, 2025, 11:10 AM ISTUpdated : Feb 02, 2025, 12:34 PM IST
ಸಿಎಂ ಸಿದ್ದರಾಮಯ್ಯ ದಿಢೀರ್ ಆಸ್ಪತ್ರೆಗೆ ದಾಖಲು; ಎಲ್ಲ ಕಾರ್ಯಕ್ರಮಗಳೂ ರದ್ದು!

ಸಾರಾಂಶ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ನಿಗದಿಯಾಗಿದ್ದ ಎಲ್ಲ ಪ್ರವಾಸ ಹಾಗೂ ಕಾರ್ಯಕ್ರಮಗಳನ್ನು ರದ್ದುಗೊಳಿಸಿ ದೀಢೀರನೇ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಬೆಂಗಳೂರು (ಫೆ.02): ಮುಖ್ಯಮಂತ್ರಿ ಸಿದ್ದರಾಂಯ್ಯ ಅವರು ಇಂದು ನಿಗದಿಯಾಗಿದ್ದ ಎಲ್ಲ ಪ್ರವಾಸ ಹಾಗೂ ಕಾರ್ಯಕ್ರಮಗಳನ್ನು ರದ್ದುಗೊಳಿಸಿ ದೀಢೀರನೇ ಕಾಲು ನೋವಿನಿಂದ ಬಳಲುತ್ತಾ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಹೌದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ವಯೋಸಹಜವಾಗಿ ಮಂಡಿ ನೋವು ಕಾಣಿಸಿಕೊಂಡಿದ್ದು, ಚಿಕಿತ್ಸೆ ಪಡೆಯುವುದಕ್ಕೆಂದು ದಿಢೀರನೇ ಎಲ್ಲ ಕಾರ್ಯಕ್ರಮಗಳನ್ನು ಹಾಗೂ ರಾಜ್ಯ ಪ್ರವಾಸವನ್ನು ರದ್ದುಗೊಳಿಸಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇಂದು ಬೆಳಗ್ಗೆ ತಿಂಡಿ ಮಾಡಿದ ನಂತರ ಎಲ್ಲ ಕಾರ್ಯಕ್ರಮಗಳನ್ನು ರದ್ದುಗೊಳಿಸಿ ಆಸ್ಪತ್ರೆಗೆ ಹೋಗುವುದಕ್ಕೆ ನಿರ್ಧರಿಸಿದ್ದಾರೆ. ಇದೀಗ ಬೆಂಗಳೂರು ನಗರದ ಮಣಿಪಾಲ್ ಆಸ್ಪತ್ರೆಗೆ ಹೋಗಿ ಮಂಡಿ ನೋವಿಗೆ ಚಿಕಿತ್ಸೆ ಪಡೆಯಲು ಮುಂದಾಗಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಂಯ್ಯ ಅವರು ಈಗಾಗಲೇ ಗೌರಿಬಿದನೂರು ಮತ್ತು ರಾಮನಗರ ಜಿಲ್ಲೆಯ ಚನ್ನಪಟ್ಟಣದಲ್ಲಿ ಆಯೋಜನೆ ಮಾಡಲಾಗಿದ್ದ ಕಾರ್ಯಕ್ರಮಕ್ಕೆ ಬರುವುದಾಗಿ ಪ್ರವಾಸವನ್ನು ನಿಗದಿ ಮಾಡಲಾಗಿತ್ತು. ಆದರೆ, ಇದೀಗ ಆಸ್ಪತ್ರೆಗೆ ಹಫಗಬೇಕಾದ ಹಿನ್ನೆಲೆಯಲ್ಲಿ ಪ್ರವಾಸ ಹಾಗೂ ವೇದಿಕೆ ಕಾರ್ಯಕ್ರಮವನ್ನು ರದ್ದುಗೊಳಿಸಿ, ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಾಗಿದ್ದಾರೆ. ವೈದ್ಯರ ಸೂಚನೆ ಹಾಗೂ ಸಲಹೆ ಮೇರೆಗೆ ವಿಶ್ರಾಂತಿ ಪಡೆಯುವ ಸಾಧ್ಯತೆಗಳಿವೆ.

ಎಡಗಾಲಿನ ಮಂಡಿಯಲ್ಲಿ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಣಿಪಾಲ್ ಆಸ್ಪತ್ರೆಯಲ್ಲಿ ತಪಾಸಣೆಗೆ ಒಳಗಾದರು. ತಪಾಸಣೆ ನಡೆಸಿದ ವೈದ್ಯರು ಈ ಹಿಂದೆ ಲೆಗಮೆಂಟ್ ಶಸ್ತ್ರ ಚಿಕಿತ್ಸೆ ನಡೆದ ಜಾಗದ ಮೇಲೆ ಒತ್ತಡ ಬಿದ್ದಿರುವುದರಿಂದ ನೋವು ಕಾಣಿಸಿಕೊಂಡಿದೆ. ಉಳಿದಂತೆ ಯಾವುದೇ ಸಮಸ್ಯೆ ಇಲ್ಲ ಎಂದು ತಿಳಿಸಿದ್ದಾರೆ.  ಎರಡು ದಿನ ಪ್ರಯಾಣ ಮಾಡದೆ ಮನೆಯಲ್ಲೇ ವಿಶ್ರಾಂತಿ ಪಡೆಯುವಂತೆ ವೈದ್ಯರು ಸಲಹೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳ ಇಂದಿನ ಎಲ್ಲ ಕಾರ್ಯಕ್ರಮಗಳನ್ನು ರದ್ದುಗೊಳಿಸಲಾಗಿದೆ.

ಸಹಾಯಕರ ನೆರವಿನೊಂದಿಗೆ ಹೆಜ್ಜೆ ಹಾಕಿದ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮಂಡಿ ನೋವು ಹಿನ್ನಲೆಯಲ್ಲಿ ಒಬ್ಬರೇ ಸ್ವತಂತ್ರವಾಗಿ ನಡೆಯಲೂ ಸಾಧ್ಯವಾಗದೇ ಅಕ್ಕಪಕ್ಕದಲ್ಲಿ ಇದ್ದ ಸಹ ಸದಸ್ಯರು ಹಾಗೂ ಅವರ ಬೆಂಬಲಿಗರ ಹೆಗಲ ಮೇಲೆ ಕೈ ಇಟ್ಟುಕೊಂಡು ಅವರ ಸಪೋರ್ಟ್‌ನಿಂದ ನಡೆಯುತ್ತಿದ್ದಾರೆ. ಈಗ ವೈದ್ಯರು ಎರಡು ದಿನ ಕಡ್ಡಾಯವಾಗಿ ವಿಶ್ರಾಂತಿ ಪಡೆಯುವಂತೆ ಸೂಚಿಸಿದ್ದು, ಆಡಳಿತ ಕೇಂದ್ರ ಸ್ಥಾನ ಬೆಂಗಳೂರು ಬಿಟ್ಟು ಬೇರೆಡೆ ಪ್ರವಾಸಕ್ಕೆ ಹೋಗದಿರಲು ನಿರ್ಧರಿಸಿದ್ದಾರೆ. 

ಇದನ್ನೂ ಓದಿ: ರೈತರ ಬೇಡಿಕೆ ಈಡೇರಿಸುವಲ್ಲಿ ಕೇಂದ್ರ ಬಜೆಟ್‌ ಪೂರ್ಣ ವಿಫಲ: ಸಚಿವ ಈಶ್ವರ ಖಂಡ್ರೆ

ಬೊಮ್ಮಾಯಿ ಸಿಎಂ ಆಗಿದ್ದಾಗಲೂ ಕಾಡಿದ್ದ ಮಂಡಿನೋವು: ನಿಕಟಪೂರ್ವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೂ ಕೂಡ ತಾವು ಸಿಎಂ ಆಗಿದ್ದ ಅವಧಿಯಲ್ಲಿ ತೀವ್ರ ಮಂಡಿನೋವು ಕಾಣಿಸಿಕೊಂಡಿತ್ತು. ಈ ವೇಳೆ ಅವರು ಅಮೇರಿಕಾಗೆ ಹೋಗಿ ಚಿಕಿತ್ಸೆ ಪಡೆದುಬರುತ್ತಾರೆ ಎಂದು ಹೇಳಲಾಗಿತ್ತು. ಆದರೆ, ರಾಜಕೀಯ ಒತ್ತಡದ ಕಾರಣಗಳಿಂದಾಗಿ ಅವರು ಎಲ್ಲಿಯೂ ವಿದೇಶಕ್ಕೆ ಮಂಡಿನೋವಿನ ಚಿಕಿತ್ಸೆಗೆ ತೆರಳದೇ ರಾಜ್ಯದಲ್ಲಿನ ನುರಿತ ನಾಟಿ ವೈದ್ಯರಿಂದ ಹಾಗೂ ಅಲೋಪಥಿ ವೈದ್ಯರಿಂದ ಚಿಕಿತ್ಸೆ ಪಡೆದು ನೋವಿನಲ್ಲಿಯೇ ಅಧಿಕಾರ ನಡೆಸಿದರು. ಇದೀಗ ಸಿಎಂ ಆಗಿರುವ ಸಿದ್ದರಾಮಯ್ಯ ಅವರಿಗೂ ಮಂಡಿನೋವು ಕಾಣಿಸಿಕೊಂಡಿದ್ದು, ನೋವಿನ ತೀವ್ರತೆ ಎಷ್ಟಿದೆ ಎಂಬುದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ನಂತರ ತಿಳಿಯಲಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಬೆಂಗಳೂರು: ನಗರದಲ್ಲಿ 1000ಕ್ಕೂ ಅಧಿಕ ಅಪಾಯಕಾರಿ ಮರ ಪತ್ತೆ!
ಸಿಎಂ ಕುರ್ಚಿ ಪೈಪೋಟಿಯಲ್ಲಿ ರೈತ ಸಮಸ್ಯೆ ಗೌಣ: ಬಿ.ವೈ.ವಿಜಯೇಂದ್ರ ಟೀಕೆ