ಡಿಕೆ ಸಾಹೇಬರಿಗೆ ಏನಾದರೂ ಆದ್ರೆ ನಾವು ಸುಮ್ನಿರಲ್ಲ; ಪ್ರಾಣ ಕೊಡಲು ಸಿದ್ಧ: ಪ್ರದೀಪ್ ಈಶ್ವರ್ ಎಚ್ಚರಿಕೆ

By Ravi Janekal  |  First Published Oct 19, 2023, 4:42 PM IST

ಒಕ್ಕಲಿಗ ಸಮುದಾಯದಲ್ಲಿ ಡಿಕೆ ಶಿವಕುಮಾರ್ ಅವರು ಪ್ರಬಲವಾಗಿದ್ದಾರೆ ಅಂತ ಎಚ್ ಡಿ ಕುಮಾರಸ್ವಾಮಿಗೆ ಹೊಟ್ಟೆಕಿಚ್ಚು. ಬಿಜೆಪಿಯವರ ಷಡ್ಯಂತ್ರದಿಂದ ಈ ರೀತಿ ನಡೆಯುತ್ತಿದೆ. ನಮ್ಮ ಡಿಕೆ ಸಾಹೇಬರಿಗೆ ಏನಾದರೂ ಆದರೆ ನಾವು ಉಗ್ರ ಹೋರಾಟಕ್ಕೆ ಇಳಿಯುತ್ತೇವೆ. ನಮ್ಮ ಪಕ್ಷ ಹಾಗೂ ನಾಯಕರ ಬಗ್ಗೆ ನಾವು ಪ್ರಾಣ ಕೊಡಲು ಸಿದ್ದರಿದ್ದೇವೆ ಎಂದ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್
 


ಚಿಕ್ಕಬಳ್ಳಾಪುರ (ಅ.19): ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ ಇಬ್ಬರೂ ಕಾಂಗ್ರೆಸ್ ಪಕ್ಷದ ದೊಡ್ಡ ಆಸ್ತಿ ಇದ್ದಂತೆ ಎಂದು ಶಾಸಕ ಪ್ರದೀಪ್ ಈಶ್ವರ್ ಹೇಳಿದರು.

ಚಿಕ್ಕಬಳ್ಳಾಪುರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಚುನಾವಣೆಗಳು ಹತ್ತಿರ ಬರುತ್ತಿದ್ದಂತೆ ಬಿಜೆಪಿಯವರು ಡಿಕೆ ಸಾಹೇಬರನ್ನ  ಟಾರ್ಗೆಟ್ ಮಾಡುತ್ತಿದ್ದಾರೆ. ಇಡಿ, ಸಿಬಿಐಯನ್ನು ಬಿಜೆಪಿಯವರು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಡಿಕೆ ಸಾಹೇಬ್ರನ್ನು ನೋಡಿದ್ರೆ ಬಿಜೆಪಿಯವರಿಗೆ ಹೆದರಿಕೆ ಇದೆ. ಹೀಗಾಗಿ ಪದೇಪದೆ ಅವರ ಮೆಲೆ ಟಾರ್ಗೆಟ್ ಮಾಡಲಾಗುತ್ತಿದೆ ಎಂದರು.

Tap to resize

Latest Videos

undefined

ನಿನ್ನೆತಾನೇ ಮೊಮ್ಮಗಳ ನಾಮಕರಣ ಮಾಡಿ ಒಳ್ಳೆ ಮೂಡ್‌ನಲ್ಲಿ ಬಂದಿದ್ದೇನೆ; ಡಿಕೆಶಿ ವಿಚಾರ ಕೇಳಿದ್ದಕ್ಕೆ ಲಕ್ಷ್ಮೀ ಹೆಬ್ಬಾಳ್ಕರ್ ಗರಂ

ಡಿಕೆ ಸಾಹೇಬರು ಒಕ್ಕಲಿಗ ಸಮುದಾಯದ ಅತಿದೊಡ್ಡ ಲೀಡರ್ ಆಗಿದ್ದಾರೆ. ಇಂತಹ ದೊಡ್ಡ ಲೀಡರ್ ಡಿಕೆ ಸಾಹೇಬ್ರನ್ನು ಜೈಲಿಗೆ ಹಾಕುವಂತೆ ಕುಮಾರಸ್ವಾಮಿ ಕೇಂದ್ರ ಸರ್ಕಾರ ಜೊತೆ ಒಪ್ಪಂದ ಮಾಡಿಕೊಂಡು ಬಂದಿದ್ದಾರೆ. ನಿಮ್ಮದೇ ಸಮುದಾಯದ ನಾಯಕನನ್ನ ಜೈಲಿಗೆ ಹಾಕುವಂತೆ ಪ್ರಯತ್ನ ಮಾಡೋದು ಎಷ್ಟು ಸರಿ? ಒಕ್ಕಲಿಗ ಸಮುದಾಯ ಜೆಡಿಎಸ್ ಪಕ್ಷಕ್ಕೆ ಹಲವು ವರ್ಷಗಳಿಂದ ಬೆನ್ನೆಲುಬಾಗಿ ನಿಂತಿದೆ. ಇದಕ್ಕೆಲ್ಲ ನೀವು ದ್ರೋಹ ಬಗೆದಂತಲ್ಲವೇ? ಎಂದು ಮಾಜಿ ಸಿಎಂ ಕುಮಾರಸ್ವಾಮಿ ಅವರನ್ನು ಪ್ರಶ್ನಿಸಿದರು.

 ಒಕ್ಕಲಿಗ ಸಮುದಾಯದಲ್ಲಿ ಡಿಕೆ ಶಿವಕುಮಾರ್ ಅವರು ಪ್ರಬಲವಾಗಿದ್ದಾರೆ ಅಂತ ಎಚ್ ಡಿ ಕುಮಾರಸ್ವಾಮಿಗೆ ಹೊಟ್ಟೆಕಿಚ್ಚು. ಬಿಜೆಪಿಯವರ ಷಡ್ಯಂತ್ರದಿಂದ ಈ ರೀತಿ ನಡೆಯುತ್ತಿದೆ. ನಮ್ಮ ಡಿಕೆ ಸಾಹೇಬರಿಗೆ ಏನಾದರೂ ಆದರೆ ನಾವು ಉಗ್ರ ಹೋರಾಟಕ್ಕೆ ಇಳಿಯುತ್ತೇವೆ. ನಮ್ಮ ಪಕ್ಷ ಹಾಗೂ ನಾಯಕರ ಬಗ್ಗೆ ನಾವು ಪ್ರಾಣ ಕೊಡಲು ಸಿದ್ದರಿದ್ದೇವೆ ಎಂದು ಎಚ್ಚರಿಸಿದರು.

ಎಚ್‌ಡಿ ಕುಮಾರಸ್ವಾಮಿ ಮಹಾಭಾರತದ ಶಕುನಿ ಇದ್ದಹಾಗೆ: ಕಾಂಗ್ರೆಸ್ ವಾಗ್ದಾಳಿ

click me!